ಮಂಡ್ಯ

ನ.25ರಿಂದ 27ರವರೆಗೆ ಶ್ರೀರಂಗನಾಥ ಸ್ವಾಮಿ ದೇವಾಲಯದಲ್ಲಿ ಸಹಸ್ರ ಕಳಶಾಭಿಷೇಕ ಮಹೋತ್ಸವ

ಮಂಡ್ಯ: ಇದೇ ನವೆಂಬರ್.25 ರಿಂದ 27ರವರೆಗೆ ಶ್ರೀ ರಂಗನಾಥಸ್ವಾಮಿ ಸಹಸ್ರ ಕಳಶಾಭಿಷೇಕ ಮಹೋತ್ಸವ ಕಾರ್ಯಕ್ರಮದ ನಡೆಯಲ್ಲಿದ್ದು, ಈ ಸಂಬಂಧ ಅಗತ್ಯ‌ ಸಿದ್ಧತೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಶ್ರೀರಂಗಪಟ್ಟಣ ಶಾಸಕರಾದ ಎ.ಬಿ.ರಮೇಶ ಬಂಡಿ ಸಿದ್ದೇಗೌಡ ಅವರು ಸೂಚನೆ ನೀಡಿದರು.

ಇಂದು ಶ್ರೀ ರಂಗಪಟ್ಟಣದ‌ ಶ್ರೀ ರಂಗನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಯಾವುದೇ ಲೋಪ ದೋಷಗಳು ಇಲ್ಲದಂತೆ ಕ್ರಮಬದ್ಧವಾಗಿ ಹಾಗೂ ಶಾಸ್ತ್ರೋಕ್ತವಾಗಿ ಕಾರ್ಯಕ್ರಮ ನಡೆಯುವಂತೆ ಅಗತ್ಯ ಕ್ರಮವಹಿಸಬೇಕು ಎಂದು ತಿಳಿಸಿದ ಅವರು ಮೂರು ದಿನಗಳ ಕಾಲ ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗುವುದು ಎಂದು ಅವರು ತಿಳಿಸಿದರು.

ಕಾರ್ಯಕ್ರಮದ ಸ್ಧಳದಲ್ಲಿ ಆಂಬುಲೆನ್ಸ್ ಹಾಗೂ ವೈದ್ಯರ ತಂಡ ನಿಯೋಜಿಸುವಂತೆ ಹಾಗೂ ಕಾರ್ಯಕ್ರಮದ ಹೆಚ್ಚಿನ ಪ್ರಚಾರಕ್ಕಾಗಿ ಕಾರ್ಯಕ್ರಮ ಕುರಿತ ಕರಪತ್ರಗಳನ್ನು ಮುದ್ರಿಸಿ ಹಂಚುವುದು ಹಾಗೂ ಆಟೋ ಮೂಲಕ ಪ್ರಚಾರ ಮಾಡುವಂತೆ ಶಾಸಕರು ತಿಳಿಸಿದರು. ದೇವಾಲಯದ ಒಳ ಮತ್ತು ಹೊರಭಾಗದಲ್ಲಿ ತಳಿರು ತೋರಣಗಳಿಂದ ಸಿಂಗಾರ ವ್ಯವಸ್ಥೆ ಹಾಗೂ ದೇವಾಲಯಕ್ಕೆ ವಿಶೇಷ ಹೂವಿನ ಅಲಂಕಾರ ವ್ಯವಸ್ಥೆ ಮಾಡಲು ಅಗತ್ಯ ಕ್ರಮವಹಿಸಬೇಕು ಎಂದು ಅವರು ತಿಳಿಸಿದರು.

ಇದನ್ನು ಓದಿ: ಬ್ರಿಟಿಷ್ ಸೈನ್ಯಕ್ಕೆ ಸಿಂಹ ಸ್ವಪ್ನವಾಗಿದ್ದರು ಬಿರ್ಸಾ ಮುಂಡ: ಸಿಇಓ ನಂದಿನಿ

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ ಕುಮಾರ ಅವರು, ಮಹೋತ್ಸವ ವ್ಯವಸ್ಥಿತವಾಗಿ ಒಳ ಮತ್ತು ಹೊರಾಂಗಣದಲ್ಲಿ ಆಯ್ದ ಸ್ಥಳಗಳಲ್ಲಿ ಶಾಮಿಯಾನ, ಕುರ್ಚಿ ಹಾಗೂ ಡಯಾಸ್ ವ್ಯವಸ್ಥೆ ಹಾಗೂ ಭಕ್ತಾದಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ, ಮಹೋತ್ಸವಕ್ಕೆ ವಿದ್ಯುತ್ ದೀಪಾಲಂಕಾರ ವ್ಯವಸ್ಥೆ, ಸ್ವಚ್ಚತೆ ಹಾಗೂ ನೈರ್ಮಲ್ಯ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

ಪೊಲೀಸ್ ಇಲಾಖೆಯಿಂದ ಮಹೋತ್ಸವಕ್ಕೆ ಆಗಮಿಸಿರುವ ಭಕ್ತರಿಗೆ ಯಾವುದೇ ತೊಂದರೆ ಆಗದಂತೆ ಎಚ್ಚರಿಕೆ ವಹಿಸುವುದು ಹಾಗೂ ಭದ್ರತಾ ವ್ಯವಸ್ಥೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಹಾಗೂ ಮಹೋತ್ಸವದ ಅಂಗವಾಗಿ ಸಾಂಸ್ಕೃತಿಕ ಹಾಗೂ ಸಂಗೀತೋತ್ಸವ ವ್ಯವಸ್ಥೆ ಮಾಡುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ಶ್ರೀರಂಗಪಟ್ಟಣದ ತಹಶೀಲ್ದಾರ್ ಚೇತನಾ ಯಾದವ್, ಶ್ರೀರಂಗಪಟ್ಟಣ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೇಣು, ಪುರಸಭೆ ಮುಖ್ಯಾಧಿಕಾರಿ ರಾಜಣ್ಣ, ಶ್ರೀ ರಂಗನಾಥಸ್ವಾಮಿ ಪ್ರಧಾನ ಅರ್ಚಕರಾದ ಎಲ್.ವಿಜಯಸಾರಥಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಯಾವುದೇ ಕಾರಣಕ್ಕೂ ಟಿ.ನರಸೀಪುರ ರೇಷ್ಮೆ ಕಾರ್ಖಾನೆ ಮುಚ್ಚಲ್ಲ: ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವುದಿಲ್ಲ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಈ ಕುರಿತು ಮಾತನಾಡಿದ…

42 mins ago

ಹಾಸನ: ಕೆರೆಗೆ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಿನಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಜಿಲ್ಲೆಯ ಆಲೂರು…

52 mins ago

ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿದ ಸಾರಂಗ: ಅರಣ್ಯ ಇಲಾಖೆಯಿಂದ ರಕ್ಷಣೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲ ಬೇಗೆ ತಾಳಲಾರದೆ ನೀರು ಕುಡಿಯಲು ಹೋದ ಸಾರಂಗ ಕೆಸರು…

1 hour ago

ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಯ ಮುಂಚೂಣಿಯಲ್ಲಿದೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮುಂದಿನ ಎರಡು ವರ್ಷಗಳಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ಜಿಲ್ಲೆಯ ಇತರೆ ಕ್ಷೇತ್ರಗಳ ಅಭಿವೃದ್ಧಿಗಿಂತ ಮುಂಚೂಣಿಯಲ್ಲಿರಲಿದ್ದು, ಇದಕ್ಕೆ ಶ್ರಮಿಸುತ್ತಿರುವ ಸ್ಥಳೀಯ…

1 hour ago

ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಅವಮಾನವಾಗುತ್ತಿದೆ: ಸಚಿವ ಪ್ರಿಯಾಂಕ್‌ ಖರ್ಗೆ

ಕಲಬುರ್ಗಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ವಿದೇಶಾಂಗ ಸಚಿವ ಜೈಶಂಕರ್ ಅವರ ವಿದೇಶ ನೀತಿಯಿಂದಾಗಿ ಅಮೇರಿಕಾದ ವಿದೇಶಾಂಗ ಸಚಿವರು ಸೇರಿದಂತೆ…

1 hour ago

ಇರಾನ್-‌ಇಸ್ರೇಲ್‌ ಸಂಘರ್ಷದ ಎಫೆಕ್ಟ್:‌ ಭಾರತದ ಭಾಸುಮತಿ ರಫ್ತು ಉದ್ಯಮಕ್ಕೆ ಹೊಡೆತ

ನವದೆಹಲಿ: ಇರಾನ್‌-ಇಸ್ರೇಲ್‌ ಸಂಘರ್ಷದ ಪರಿಸ್ಥಿತಿಯು ಭಾರತದ ಭಾಸುಮತಿ ಅಕ್ಕಿ ರಫ್ತಿನ ಮೇಲೆ ತೀವ್ರ ಹೊಡೆತ ನೀಡಿದೆ. ದೆಹಲಿಯ ಗೋದಾಮುಗಳಲ್ಲಿ ಸುಮಾರು…

2 hours ago