ಮಂಡ್ಯ

ಸಾಹಿತ್ಯ ಸಮ್ಮೇಳನ: ಪ್ರಚಾರದ ವೆಚ್ಚ ಪಾರದರ್ಶಕವಾಗಿರಲಿ; ದರ್ಶನ್ ಪುಟ್ಟಣ್ಣಯ್ಯ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ ಮಾಹೆಯಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರವನ್ನು ಕೈಗೊಳ್ಳಲು 1 ಕೋಟಿ 30 ಲಕ್ಷ ರೂ.ಗಳ ತಾತ್ಕಾಲಿಕ ಬಜೆಟ್ ಅನ್ನು ಮಂಡನೆ ಮಾಡಿದ್ದು, ಪ್ರಚಾರದ ವೆಚ್ಚವು ಪಾರದರ್ಶಕವಾಗಿರಲಿ ಎಂದು ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಪ್ರಚಾರ ಸಮಿತಿ ಅಧ್ಯಕ್ಷ ದರ್ಶನ್ ಪುಟ್ಟಣ್ಣಯ್ಯ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಗುರುವಾರ ನಡೆದ ಪ್ರಚಾರ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಚಾರ ಸಮಿತಿಯ ಉಪ ಸಮಿತಿಗಳು ಪ್ರಚಾರಕ್ಕೆ ಸಂಬಂಧಿಸಿದಂತೆ ಸಭೆ ಸೇರುವ ಮೂಲಕ ಕಾರ್ಯಭಾರವನ್ನು ನಿರ್ವಹಿಸಬೇಕು. ಬಸ್‌ಗಳ ಮೇಲೆ ಪ್ರಚಾರದ ಪೋಸ್ಟರ್ ಗಳಲ್ಲಿ ಮುಖ್ಯವಾಗಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುವ ದಿನಾಂಕ, ಸ್ಥಳವನ್ನು ಬರೆದಿರಬೇಕು. ಜೊತೆಗೆ ಹಾಸನಾಂಬ ಜಾತ್ರೆಯಲ್ಲಿಯೂ ಕೂಡ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರವನ್ನು ನಡೆಸಬೇಕು ಎಂದರು.

ಪ್ರಚಾರ ಸಮಿತಿಯ ಉಪ ಸಮಿತಿಯವರು ಈಗಾಗಲೇ ಪ್ರತ್ಯೇಕವಾಗಿ ಸಭೆ ನಡೆಸಿ ಆಯಾಯ ಸಮಿತಿಯಲ್ಲಿ ಪ್ರಚಾರಕ್ಕೆ ಸಂಬಂಧಪಟ್ಟಂತೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಇಲ್ಲಿಯವರೆಗೆ ನಡೆದಿರುವ ರೂಪುರೇಷೆಯ ಕ್ರಿಯಾಯೋಜನೆ ಹಾಗೂ ಬಜೆಟ್ ವಿವರವನ್ನು ಸಭೆಗೆ ವಿವರವಾಗಿ ತಿಳಿಸಿದರು.

ಮನೆಗಳ ಮೇಲೆ, ಆಟೋ, ಕಾರ್ ಸ್ಟಿಕ್ಕರ್, ಗೋಡೆ ಬರಹ, ಸ್ಟಿಕ್ಕರ್, ಸರ್ಕಾರಿ ಹೋರ್ಡಿಂಗ್ಸ್ ಗಳಲ್ಲಿ ಪ್ರಮುಖ ವೃತ್ತಗಳಲ್ಲಿ ರಿಂಗ್ಸ್ ಹಾಗೂ ಇತರೆ ಫ್ಲೆಕ್ಸ್ ಅಳವಡಿಕೆ ಬಗ್ಗೆ ಜೊತೆಗೆ ಡಿಜಿಟಲ್ ಹಾಗೂ ಸಾಮಾಜಿಕ ಜಾಲತಾಣ, ಮುದ್ರಣ ಮಾಧ್ಯಮಗಳಲ್ಲಿ ಹೆಚ್ಚು ಹೆಚ್ಚು ಪ್ರಚಾರ ಮಾಡುವ ಬಗ್ಗೆ ವಿವರವಾದ ವರದಿಯನ್ನು ಸಭೆಗೆ ತಂದು ಪ್ರಚಾರ ಸಮಿತಿಯ ಅಧ್ಯಕ್ಷರಿಗೆ ಸಲ್ಲಿಸಲಾಯಿತು.

ಜಿಲ್ಲೆಯ ಜನರು ಸಮ್ಮೇಳನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಪರಿಣಾಮಕಾರಿ ಪ್ರಚಾರದ ಅವಶ್ಯಕವಿದೆ. ಸುತ್ತಮುತ್ತಲಿನ ಹಳ್ಳಿ, ನಗರ ಪ್ರದೇಶದ ಜನರು ಸಮ್ಮೇಳನದಲ್ಲಿ ಭಾಗವಹಿಸುವಂತೆ ಮಾಡುವುದು ಪ್ರಚಾರ ಸಮಿತಿಯ ಜವಾಬ್ದಾರಿಯಾಗಿದ್ದು, ಎಲ್ಲರೂ ವ್ಯವಸ್ಥಿತ ಹಾಗೂ ಕ್ರಿಯಾಶೀಲತೆಯಿಂದ ಕಾರ್ಯ ನಿರ್ವಹಿಸೋಣ ಎಂದರು.

ಸಾಮಾಜಿಕ ಜಾಲತಾಣದಲ್ಲಿ ಸಮ್ಮೇಳನದ ಪ್ರಚಾರ ಮಾಡಲು ೧೫ ಲಕ್ಷ ರೂ.ವನ್ನು ನಿಗದಿಪಡಿಸಲಾಗಿದೆ. ಇರುವ ವೆಚ್ಚದಲ್ಲಿಯೇ ಬಹಳ ಚುರುಕಾಗಿ ಪ್ರಚಾರ ನಡೆಯಬೇಕು ಎಂದರು.

ಕ.ಸಾ.ಪ. ಸಮ್ಮೇಳನದ ಸಂಚಾಲಕಿ ಮೀರಾ ಶಿವಲಿಂಗಯ್ಯ ಮಾತನಾಡಿ, ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಂಬಂಧಿಸಿದಂತೆ ಈಗಾಗಲೇ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಪ್ರಚಾರ ಸಮಿತಿಯ ಖರ್ಚು ಹಾಗೂ ವೆಚ್ಚವನ್ನು ಹೇಗೆ ನಿಭಾಯಿಸಬೇಕು ಎಂದು ತಿಳಿಸಲಾಗಿದೆ. ಅದರಂತೆಯೇ ಎಲ್ಲರೂ ಲಭ್ಯವಿರುವ ಅನುದಾನದಲ್ಲಿ ಪರಿಣಾಮಕಾರಿ ಪ್ರಚಾರವನ್ನು ಕೈಗೊಳ್ಳಬೇಕು. ಇನ್ನೆರಡು ದಿನಗಳಲ್ಲಿ ಮೊದಲ ಕಂತಿನ ಹಣ ಬಿಡುಗಡೆಯಾಗುತ್ತದೆ ಎಂದರು.

ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಂಬಂಧಿಸಿದ ಬೈಸಿಕಲ್ ಜಾಥಾ, ಪ್ರತಿ ಬಸ್ ನಿಲ್ದಾಣಗಳಲ್ಲಿ ಫ್ಲೆಕ್ಸ್ ಅಳವಡಿಕೆ, ಆಟೋ ಚಾಲಕರುಗಳಿಗೆ ಕನ್ನಡದ ಬಾವುಟ ಹಾಗೂ ಸ್ಟಿಕ್ಕರ್ಸ್ಗಳನ್ನು ನೀಡಿ ಆ ಮೂಲಕ ನವೆಂಬರ್ ತಿಂಗಳಿನಿಂದ ಡಿಸೆಂಬರ್ ತಿಂಗಳವರೆಗೂ ಪ್ರಚಾರ ನಡೆಸಬಹುದು. ಲಾರಿ ಹಾಗೂ ಬಸ್ -ಇತರೆ ವಾಹನಗಳ ಮಾಲೀಕರ/ಚಾಲಕರ ಸಂಘದವರಲ್ಲಿ ಮನವಿ ಮಾಡಿ ತಮ್ಮ ತಮ್ಮ ವಾಹನಗಳಲ್ಲಿ ಸಮ್ಮೇಳನದ ಭಿತ್ತಿಪತ್ರ -ಸ್ಟಿಕ್ಕರ್‌ಗಳನ್ನು ಅಂಟಿಸಿ ಪ್ರಚಾರ ಮಾಡುವುದರ ಜೊತೆಗೆ ಎಲ್ಲರೂ ಸಹಕರಿಸಲು ಮನವಿ ಮಾಡಲಾಯಿತು.

ಸಭೆಯಲ್ಲಿ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಹಾಗೂ ಪ್ರಚಾರ ಸಮಿತಿಯ ಸದಸ್ಯ ಕಾರ್ಯದರ್ಶಿ ರಾಘವೇಂದ್ರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕಿ ಹಾಗೂ ಸಂಚಾಲಕರು ಆದ ಎಸ್ ಹೆಚ್ ನಿರ್ಮಲ, ಕಸಾಪ ಪದಾಧಿಕಾರಿಗಳಾದ ಹರ್ಷ ಪಣ್ಣೆದೊಡ್ಡಿ ,ಹೊಳಲು ಶ್ರೀಧರ್, ಜಿ.ಧನಂಜಯ ದರಸಗುಪ್ಪೆ, ಎಲ್. ಕೃಷ್ಣ, ಚಂದ್ರಲಿಂಗು, ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ಪಿ.ಪ್ರಕಾಶ್, ಸಮಿತಿಯ ಸದಸ್ಯರಾದ ಸಬ್ಬನಹಳ್ಳಿ ಶಶಿಧರ, ವಿನಯ್ ಕುಮಾರ್, ಮಂಚಶೆಟ್ಟಿ, ಚಿಕ್ಕನಾಗೇಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ನಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

3 hours ago

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

5 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

5 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

6 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

6 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

7 hours ago