ಮಂಡ್ಯ

ಸಾಹಿತ್ಯ ಸಮ್ಮೇಳನ: ಅತಿಥಿಗಳಿಗೆ ಸೂಕ್ತ ರೀತಿಯ ವಸತಿ ವ್ಯವಸ್ಥೆ

ಮಂಡ್ಯ, ಮದ್ದೂರು, ಶ್ರೀರಂಗಪಟ್ಟಣದಲ್ಲಿ ವಾಸ್ತವ್ಯಕ್ಕೆ ಸಿದ್ಧತೆ; ಹೋಟಲ್, ಲಾಡ್ಜ್, ವಸತಿ ನಿಲಯ, ಕಲ್ಯಾಣ ಮಂಟಪಗಳ ಕಾಯ್ದಿರಿಸುವಿಕೆ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, ಮತ್ತು 22ರಂದು ಜರುಗಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕ್ಕರೆ ನಗರಿ ಮಂಡ್ಯದಲ್ಲಿ ಸಿದ್ಧತೆಗಳು ಭರದಿಂದ ಸಾಗುತ್ತಿವೆ.

ಆತಿಥ್ಯಕ್ಕೆ ಹೆಸರಾಗಿರುವ ಮಂಡ್ಯ ದೇಶ, ವಿದೇಶಗಳಿಂದ ಹಾಗೂ ರಾಜ್ಯದ ನಾನಾ ಭಾಗಗಳಿಂದ ಆಗಮಿಸುವ ಗಣ್ಯರು, ನೋಂದಾಯಿತ ಪ್ರತಿನಿಧಿಗಳು ಹಾಗೂ ಸಾಹಿತ್ಯಾಸಕ್ತರ ಆತಿಥ್ಯಕ್ಕೆ ಎಲ್ಲ ರೀತಿಯಲ್ಲೂ ತಯಾರಾಗುತ್ತಿದೆ.

ಮೂರು ದಿನಗಳ ಕಾಲ ನಡೆಯಲಿರುವ ನುಡಿ ಜಾತ್ರೆಗೆ ಆಗಮಿಸುವವರ ವಾಸ್ತವ್ಯಕ್ಕೆ ಮಂಡ್ಯ, ಮದ್ದೂರು ಮತ್ತು ಶ್ರೀರಂಗಪಟ್ಟಣದಲ್ಲಿ ವಸತಿ ವ್ಯವಸ್ಥೆ ಮಾಡಲಾಗುತ್ತಿದ್ದು ಈ ಸಂಬಂಧ ಈಗಾಗಲೇ ಹೋಟೆಲ್, ಲಾಡ್ಜ್, ವಸತಿ ನಿಲಯಗಳು, ಕಲ್ಯಾಣ ಮಂಟಪಗಳು ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ಬಳಸಿಕೊಳ್ಳಲಾಗುತ್ತಿದೆ.

ಅಂದಾಜು 10 ರಿಂದ 15 ಸಾವಿರದಷ್ಟು ಗಣ್ಯರು, ಜನಪ್ರತಿನಿಧಿಗಳು, ಮಾಧ್ಯಮ ಮಿತ್ರರು ಹಾಗು ಕನ್ನಡ ಪ್ರೇಮಿಗಳು ನುಡಿ ಹಬ್ಬಕ್ಕೆ ಆಗಮಿಸುವ ನಿರೀಕ್ಷೆಯಿದ್ದು ಇವರ ವಾಸ್ತವಕ್ಕಾಗಿ ಹೋಟೆಲ್, ಲಾಡ್ಜ್ ಮತ್ತು ಕಲ್ಯಾಣಮಂಟಪಗಳನ್ನು ಮುಂಗಡವಾಗಿ ಕಾಯ್ದಿರಿಸಲಾಗಿದೆ. ಉತ್ತಮ ರೀತಿಯ ಶೌಚಾಲಯ ವ್ಯವಸ್ಥೆ ಜೊತೆಗೆ ನೀರಿನ ಸಮಸ್ಯೆ ಉಂಟಾಗದ ರೀತಿಯಲ್ಲಿ ಕ್ರಮವಹಿಸಲು ಜಿಲ್ಲಾಡಳಿತ ಈಗಾಗಲೇ ಕಾರ್ಯಪ್ರವೃತ್ತವಾಗಿದೆ.

ಮಂಡ್ಯ, ಮದ್ದೂರು ಮತ್ತು ಶ್ರೀರಂಗಪಟ್ಟಣದಲ್ಲಿನ 30 ಕಲ್ಯಾಣ ಮಂಟಪಗಳು, 16 ಸಮುದಾಯ ಭವನಗಳು, 37 ವಸತಿ ನಿಲಯಗಳಲ್ಲಿ ವಾಸ್ತವ್ಯದ ವ್ಯವಸ್ಥೆ ಮಾಡಲಾಗುತ್ತಿದೆ. ಇದರ ಜೊತೆಗೆ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲೂ ವಾಸ್ತವ್ಯಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತಿದ್ದು, ಮಂಡ್ಯದ ಪಿಇಎಸ್ ಶಿಕ್ಷಣ ಸಂಸ್ಥೆ, ಕೊಮ್ಮೇರಹಳ್ಳಿಯಲ್ಲಿನ ವಿಶ್ವಮಾನವ ಶಿಕ್ಷಣ ಸಂಸ್ಥೆ ಹಾಗೂ ಯಲಿಯೂರಿನಲ್ಲಿನ ಅನಿಕೇತನ ಶಿಕ್ಷಣ ಸಂಸ್ಥೆಯಲ್ಲಿ ವಸತಿ ವ್ಯವಸ್ಥೆ ಮಾಡಲಾಗಿದೆ.

ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವ ಪ್ರತಿನಿಧಿಗಳ ನೋಂದಣಿಗೆ ಇದೇ ಮೊದಲ ಬಾರಿಗೆ ಆನ್ ಲೈನ್ ನಲ್ಲಿ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ನೋಂದಾಯಿತ ಪ್ರತಿನಿಧಿಗಳಿಗೆ ವಸತಿ ಸ್ಥಳದ ಸಂಪೂರ್ಣ ವಿವರವನ್ನು ಅವರ ಮೊಬೈಲ್ ಗೆ ಕಳುಹಿಸಲಾಗುತ್ತದೆ. ವಾಸ್ತವ್ಯದ ಸ್ಥಳದ ಲೊಕೇಷನ್ ಸಹ ಒಳಗೊಂಡ ಸಂಪೂರ್ಣ ಮಾಹಿತಿಯನ್ನು ನೋಂದಾಯಿತ ಪ್ರತಿನಿಧಿಗಳ ಮೊಬೈಲ್ ಗೆ ತಲುಪಿಸುವ ವ್ಯವಸ್ಥೆ ಮಾಡಲಾಗುತ್ತಿದೆ. ಎ, ಬಿ ಮತ್ತು ಸಿ ಶ್ರೇಣಿಯಲ್ಲಿ ವಸತಿ ವ್ಯವಸ್ಥೆ ಮಾಡಲಾಗಿದ್ದು, ಎಲ್ಲಿಯೂ ಯಾರಿಗೂ ತೊಂದರೆಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳು ಮತ್ತು ಸಿಬ್ಬಂದಿಗಳ ತಂಡ ಅಣಿಯಾಗಿದೆ.

ನೋಂದಾಯಿತ ಪ್ರತಿನಿಧಿಗಳಿಗೆ ಸಮ್ಮೇಳನ ನಡೆಯುವ ಸ್ಥಳದಲ್ಲಿ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ವಾಸ್ತವ್ಯ ಸ್ಥಳದಿಂದ ಸಮ್ಮೇಳನದ ಸ್ಥಳಕ್ಕೆ ತೆರಳಲು ಉಚಿತ ಬಸ್ ವ್ಯವಸ್ಥೆ ಕೂಡ ಕಲ್ಪಿಸಲಾಗುತ್ತಿದೆ. ಕರ್ತವ್ಯ ನಿಯೋಜಿತವಾಗಿ ಅನ್ಯ ಜಿಲ್ಲೆಗಳಿಂದ ಆಗಮಿಸುವ ಸಿಬ್ಬಂದಿ, ಅಧಿಕಾರಿಗಳು, ಪೊಲೀಸರೆಲ್ಲರಿಗೂ ಉಳಿದುಕೊಳ್ಳಲು ಸೂಕ್ತ ರೀತಿಯಲ್ಲಿ ವಸತಿ ವ್ಯವಸ್ಥೆ ಕಲ್ಪಿಸಲು ಜಿಲ್ಲಾಡಳಿತ ಸಜ್ಜಾಗಿದ್ದು, ಎಲ್ಲಿಯೂ ಆಹಾರ, ವಸತಿ, ಶೌಚಾಲಯದ ವ್ಯವಸ್ಥೆಯಲ್ಲಿ ಚ್ಯುತಿ ಬಾರದ ರೀತಿಯಲ್ಲಿ ಕ್ರಮಕೈಗೊಳ್ಳಲು ಮುಂದಾಗಿದೆ.

ಸಮ್ಮೇಳನಕ್ಕೆ ಆಗಮಿಸುವವರ ಆರೋಗ್ಯದ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಹೆಲ್ತ್ ಡೆಸ್ಕ್ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಹ ಸ್ಥಾಪಿಸಲಾಗುತ್ತಿದ್ದು ನುಡಿ ಹಬ್ಬಕ್ಕೆ ಆಗಮಿಸುವವರ ಆತಿಥ್ಯದಲ್ಲಿ ಎಲ್ಲೂ ಲೋಪವಾಗದ ರೀತಿಯಲ್ಲಿ ಅತಿಥಿಗಳನ್ನು ಸತ್ಕರಿಸಲು ಜಿಲ್ಲಾಡಳಿತ, ಕನ್ನಡ ಸಾಹಿತ್ಯ ಪರಿಷತ್ತು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದ್ದು ಮಂಡ್ಯದಲ್ಲಿ ಜರುಗಲಿರುವ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಕಂಕಣಬದ್ಧವಾಗಿದೆ.

 

ಮಂಡ್ಯದ ಜನ ಹೃದಯ ಶ್ರೀಮಂತಿಕೆ, ಆತಿಥ್ಯಕ್ಕೆ ಹೆಸರುವಾಸಿ. ಮೂರನೇ ಬಾರಿಗೆ ಮಂಡ್ಯದಲ್ಲಿ ಸಾಹಿತ್ಯ ಸಮ್ಮೇಳನ ಜರುಗುತ್ತಿರುವುದು ನಮ್ಮೆಲ್ಲರ ಹೆಮ್ಮೆ. ಜಿಲ್ಲೆಯ ಹೆಮ್ಮೆ, ಗರಿಮೆಯನ್ನು ಕಾಪಾಡುವುದು ನಮ್ಮ ಕರ್ತವ್ಯ. ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವವರಿಗೆ ಉಳಿದುಕೊಳ್ಳಲು ಸಕಲ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಎಲ್ಲೂ ಲೋಪವಾಗದಂತೆ ನೋಡಿಕೊಳ್ಳಲಾಗುವುದು. ಸಮ್ಮೇಳನಕ್ಕೆ ಆಗಮಿಸುವ ಎಲ್ಲರನ್ನೂ ಗೌರವದಿಂದ ಕಾಣಲಾಗುವುದು. ವಾಸ್ತವ್ಯಕ್ಕೆ ಏನೂ ತೊಂದರೆ ಆಗದ ರೀತಿಯಲ್ಲಿ ನೋಡಿಕೊಳ್ಳಲಾಗುವುದು. ಈಗಾಗಲೇ ಹೋಟೆಲ್, ಲಾಡ್ಜ್ ಗಳನ್ನು ಬುಕ್ ಮಾಡಲಾಗಿದೆ. ಸರ್ಕಾರ, ಜಿಲ್ಲಾಡಳಿತ, ಕಸಾಪ ಒಗ್ಗೂಡಿ ಕೆಲಸ ಮಾಡುತ್ತಿದ್ದು ಮಂಡ್ಯ ಸಾಹಿತ್ಯ ಸಮ್ಮೇಳನ ಇತಿಹಾಸದ ಪುಟದಲ್ಲಿ ದಾಖಲಾಗುವ ರೀತಿಯಲ್ಲಿ ನೋಡಿಕೊಳ್ಳಲಾಗುವುದು.
-ರವಿಕುಮಾರ್, ಶಾಸಕರು ಹಾಗೂ ವಸತಿ ಸಮಿತಿ ಅಧ್ಯಕ್ಷರು

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಮಿತ್ ಶಾ ಹೇಳಿಕೆ ಖಂಡಿಸಿ ವಿಧಾನಸಭೆಯಲ್ಲೂ ಪ್ರತಿಭಟನೆ

ಬೆಳಗಾವಿ: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ಕುರಿತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಕರ್ನಾಟಕ…

13 mins ago

ಅಕ್ರಮ ವಾಸಿಗಳ ಪತ್ತೆಗೆ ಸರ್ಕಾರದಿಂದ ಹೊಸ ಕ್ರಮ: ಸಚಿವ ಜಿ.ಪರಮೇಶ್ವರ್‌ ಮಾಹಿತಿ

ಬೆಳಗಾವಿ: ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ರಾಜ್ಯದಲ್ಲಿ ನೆಲೆಸಿರುವ ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ…

36 mins ago

ಮಂಡ್ಯ ನುಡಿಜಾತ್ರೆಗೆ ಬರುವವರಿಗೆ ಭರ್ಜರಿ ಭೋಜನ ವ್ಯವಸ್ಥೆ

ಮಂಡ್ಯ: ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ ಕನ್ನಡ ನುಡಿ ಜಾತ್ರೆಗೆ ನಾಳೆ ಅದ್ಧೂರಿ ಚಾಲನೆ ಸಿಗಲಿದ್ದು,…

50 mins ago

ಅಂಬೇಡ್ಕರ್‌ ಕುರಿತು ಅಮಿತ್‌ ಶಾ ವಿವಾದಾತ್ಮಕ ಹೇಳಿಕೆ: ದೇಶಾದ್ಯಂತ ಕಾಂಗ್ರೆಸ್‌ ಪ್ರತಿಭಟನೆ

ನವದೆಹಲಿ: ಬಾಬಾಸಾಹೇಬ್‌ ಅಂಬೇಡ್ಕರ್‌ ಕುರಿತಂತೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ನೀಡಿರುವ ಹೇಳಿಕೆಯ ವಿರುದ್ಧ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದೆ.…

2 hours ago

ಸಿದ್ಧಗಂಗಾ ಮಠಕ್ಕೆ ನೀಡಿದ್ದ ನೋಟಿಸ್‌ ಹಿಂಪಡೆದ ರಾಜ್ಯ ಸರ್ಕಾರ

ತುಮಕೂರು: 70 ಲಕ್ಷ ಕರೆಂಟ್‌ ಬಿಲ್‌ ಕಟ್ಟುವಂತೆ ಸಿದ್ಧಗಂಗಾ ಮಠಕ್ಕೆ ನೀಡಿದ್ದ ನೋಟಿಸನ್ನು ಸರ್ಕಾರ ಹಿಂಪಡೆದಿದೆ. ಸರ್ಕಾರಿ ನೀರಾವರಿ ಯೋಜನೆಗೆ…

2 hours ago

ಪದ್ಮಶ್ರೀ ಪುರಸ್ಕೃತ ಜಾನಪದ ಕಲಾವಿದ ಮೊಗಿಲಯ್ಯ ವಿಧಿವಶ

ಹೈದರಾಬಾದ್:‌ ಟಾಲಿವುಡ್‌ ಚಲನಚಿತ್ರ ಬಳಗಂ ಮೂಲಕ ಪ್ರಖ್ಯಾತಿ ಗಳಿಸಿದ್ದ ಜನಪ್ರಿಯ ಜಾನಪದ ಕಲಾವಿದ ದರ್ಶನಂ ಮೊಗಿಲಯ್ಯ ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ.…

2 hours ago