ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವಿವಿಧ ಸ್ಥಳಗಳಿಂದ ಆಗಮಿಸುವವರಿಗೆ ಅಗತ್ಯವಿರುವ ಸ್ಥಳಗಳ ಬಗ್ಗೆ ಯಾವುದೇ ಗೊಂದಲವಿಲ್ಲದೇ ತಿಳಿದುಕೊಳ್ಳಲು ರೂಟ್ ಮ್ಯಾಪ್ ಸಿದ್ಧಪಡಿಸುವಂತೆ ಜಿಲ್ಲಾಧಿಕಾರಿ ಡಾ: ಕುಮಾರ ಹೇಳಿದರು.
ಇಂದು(ನ.20) ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಭೆ ನಡೆಸಿ ಮಾತನಾಡಿದ ಅವರು, ರೂಟ್ ಮ್ಯಾಪ್ ಸಿದ್ದಪಡಿಸಿ, ಅವುಗಳನ್ನು ಮುಖ್ಯ ರಸ್ತೆಗಳಲ್ಲಿ ಹಾಗೂ ಹೆಚ್ಚು ಜನರಿಗೆ ಮಾಹಿತಿ ಸಿಗುವ ಸ್ಥಳಗಳಲ್ಲಿ ಅನಾವರಣಗೊಳಿಸಬೇಕು ಎಂದರು.
ನಗರದ ಮುಖ್ಯ ಬಸ್ ನಿಲ್ದಾಣ ಹಾಗೂ ಪಾರ್ಕಿಂಗ್ ಸ್ಥಳದಿಂದ ಮಾಡುವ ಉಚಿತ ಬಸ್ ಸೇವೆಯ ಬಸ್ ಗಳ ಮೇಲೆ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಉಚಿತ ಬಸ್ ಸೇವೆ ಎಂದು ಫಲಕವನ್ನು ಅಳವಡಿಸಬೇಕು. ಸಾಹಿತ್ಯ ಸಮ್ಮೇಳನದ ಸಂದರ್ಭದಲ್ಲಿ ನೊಂದಣಿಯಾಗುವ ಪ್ರತಿನಿಧಿಗಳಿಗೆ ವಸತಿ ಒದಗಿಸುವ ಸ್ಥಳದಿಂದ ಬಸ್ ವ್ಯವಸ್ಥೆ ಮಾಡಬೇಕು. ಇವುಗಳಿಗೆ ಬೇಕಿರುವ ಸೂಚನಾ ಫಲಕಗಳನ್ನು ಸಿದ್ಧಪಡಿಸಿಕೊಂಡು ಅನಾವರಣ ಮಾಡಬೇಕು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿ, ಸಾರಿಗೆ ಬಸ್‌ಗಳು ದುರಸ್ತಿಗೆ ಒಳಗಾದ ಸಂದರ್ಭದಲ್ಲಿ ತಕ್ಷಣ ತೆರವುಗೊಳಿಸಲು ಎರಡು ಟೋಯಿಂಗ್ ವಾಹನಗಳ ವ್ಯವಸ್ಥೆ ಮಾಡಿಕೊಳ್ಳುವಂತೆ ಪೊಲೀಸರಿಗೆ ತಿಳಿಸಿದರು.
ಸಮ್ಮೇಳನದ ಸ್ಥಳದ ಮುಖ್ಯ ದ್ವಾರದಲ್ಲಿ ಸಹಾಯವಾಣಿ ಕಿಯೋಸ್ಕ್ ಗೆ ಇಬ್ಬರೂ ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿಗಳನ್ನು ನಿಯೋಜಿಸಿ ಸಾರ್ವಜನಿಕರಿಗೆ ಬಸ್ ಗಳ ಬಗ್ಗೆ ಮಾಹಿತಿ ಒದಗಿಸಬೇಕು ಎಂದರು.
ಸಭೆಯಲ್ಲಿ ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ, ಗಂಗಾಧರ ಸ್ವಾಮಿ ಉಪವಿಭಾಗಾಧಿಕಾರಿ ಶಿವಮೂರ್ತಿ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಸಭೆಗೂ ಮುನ್ನ ಜಿಲ್ಲಾಧಿಕಾರಿ ಡಾ: ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಕನ್ನಡ ಸಾಹಿತ್ಯ ಸಮ್ಮೇಳನ ಸಂಬಂಧ ವಸತಿ ವ್ಯವಸ್ಥೆ ಮತ್ತು ಪಾರ್ಕಿಂಗ್ ವ್ಯವಸ್ಥೆಗಳ ಬಗ್ಗೆ ಶಶಿ ಕಿರಣ ಸಮುದಾಯ ಭವನ, ಚೈತನ್ಯ ಟೆಕ್ನೋ ಶಾಲೆ,
ಮಾಂಡವ್ಯ ಕಾಲೇಜು ಸೇರಿದಂತೆ ಇನ್ನಿತರೆ ಸ್ಥಳ ಪರಿಶೀಲಿಸಿದರು.
ಪಕ್ಷದ ಗೆಲುವಿಗೆ ಶ್ರಮಿಸಲು ರಾಜ್ಯದ ನಾಯಕರಿಗೆ ಹೈಕಮಾಂಡ್ ಸೂಚನೆ ಕಳೆದ ವಾರ ಬಿಜೆಪಿ ಪಾಳೆಯದಲ್ಲಿ ಹರಿದಾಡಿದ ಒಂದು ಸುದ್ದಿ ಕುತೂಹಲಕ್ಕೆ ಕಾರಣವಾಯಿತು.…
ಮಕ್ಕಳ ಸುರಕ್ಷತೆ ಮತ್ತು ಶಾಲಾ ಪ್ರಯಾಣ ಸುಗಮಗೊಳಿಸುವ ಉದ್ದೇಶ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸು ೧೨…
ಪ್ರಶಾಂತ್ ಎಸ್. ಮೈಸೂರು: ವಾಹನಗಳು ರಸ್ತೆಯಲ್ಲಿ ಸಂಚರಿಸಿದರೆ, ಪಾದಚಾರಿಗಳು ಫುಟ್‌ಪಾತ್‌ನಲ್ಲಿ ಓಡಾಡ ಬೇಕು ಎನ್ನುವುದು ಸಾಮಾನ್ಯ ಸಂಗತಿ. ಆದರೆ, ಕುವೆಂಪುನಗರದ…
ಎಸ್.ನಾಗಸುಂದರ್ ಪಾಂಡವಪುರ ಪಾಂಡವಪುರ: ದಾನಿಗಳ ನೆರವು, ಸ್ಥಳೀಯರ ಸಹಕಾರದಿಂದ ಆರಂಭಗೊಂಡ ಶಾಲೆಯು ನೂರು ವರ್ಷಗಳ ಗಡಿ ದಾಟಿ ಹೆಜ್ಜೆ ಮುಂದಿರಿಸಿದೆ.…
ಅಬ್ದುಲ್ ರಶೀದ್ ಕೊಡಗಿನ ಪರಿಶಿಷ್ಟ ಅಡಿಯ ಜನಾಂಗದ ಕೂಲಿ ಕಾರ್ಮಿಕ ಯುವಕರಾದ ಸುಬ್ರಮಣಿ, ರಾಜು, ಅಯ್ಯಪ್ಪ, ಮಣಿಕಂಠ, ಮಣಿ ಸಾಹಸಗಾಥೆ…