ಮಂಡ್ಯ: ಜಿಲ್ಲೆಯಲ್ಲಿ ನಡೆದ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆದು ಮೂರು ತಿಂಗಳಾದರೂ ಅದರ ಖರ್ಚು ವೆಚ್ಚದ ಲೆಕ್ಕ ನೀಡದೇ ಇದ್ದು ಕೂಡಲೇ ಲೆಕ್ಕಪತ್ರವನ್ನು ಸಾರ್ವತ್ರಿಕವಾಗಿ ಬಹಿರಂಗ ಪಡಿಸಬೇಕು ಎಂದು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಎಂ.ಬಿ.ನಾಗಣ್ಣಗೌಡ ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪಾರದರ್ಶಕತೆ ಕಾಯ್ದುಕೊಳ್ಳುವ ದೃಷ್ಠಿಯಿಂದ ಜನತೆಯ ಮುಂದಿಡುವುದು ಜಿಲ್ಲಾಡಳಿತ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಜವಾಬ್ದಾರಿಯಾಗಿದೆ ಎಂದರು.
ಸಮ್ಮೇಳನಕ್ಕೆ ಸರ್ಕಾರದಿಂದಲೇ ಕೋಟಿಗಟ್ಟಲೆ ಹಣ ನೀಡಲಾಗಿದೆ. ಸಮಿತಿಗಳನ್ನು ರಚಿಸಿ ಹಣ ಹಂಚಲಾಗಿದ್ದು, ಗಣಕೀಕೃತ ಸಹಾಯವಿರುವ ಕಾಲದಲ್ಲಿ ಲೆಕ್ಕಪತ್ರ ನೀಡಲು ಮೂರು ತಿಂಗಳು ಬೇಕೆ ಎಂದು ಪ್ರಶ್ನಿಸಿದ ಅವರು, ಸಮ್ಮೇಳನಾಪೂರ್ವದಲ್ಲಿಯೇ ಸೋಷಿಯಲ್ ಆಡಿಟಿಂಗ್ ಮಾಡಲು ಕೋರಿ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲಾಯಿತು. ಸಮ್ಮೇಳನದ ತಿಂಗಳ ನಂತರ ಲೆಕ್ಕಪತ್ರ ಬಹಿರಂಗ ಪಡಿಸಲು ಕೋರಲಾಯಿತು. ಆಗ ಒಂದು ತಿಂಗಳ ಕಾಲಾವಕಾಶ ಕೇಳಿದ ಜಿಲ್ಲಾಧಿಕಾರಿಗಳು ೪೫ ದಿನ ಕಳೆದರೂ ಸಮ್ಮೇಳನದ ಲೆಕ್ಕಪತ್ರಗಳನ್ನು ಜನರ ಮುಂದಿರಿಸಿಲ್ಲ ಎಂದು ದೂಡಿದರು.
ಕಂಪ್ಯೂಟರ್‌ಗಳ ಹೆಚ್ಚು ಬಳಕೆಯಿಲ್ಲದ ೧೯೯೪ರಲ್ಲಿ ನಡೆದ ಸಮ್ಮೇಳನದ ಲೆಕ್ಕಪತ್ರವನ್ನು ಒಂದು ತಿಂಗಳಲ್ಲಿಯೇ ನೀಡಲಾಗಿತ್ತು. ಹಾವೇರಿಯಲ್ಲಿ ನಡೆದ ೮೬ನೇ ಸಮ್ಮೇಳನದ ಲೆಕ್ಕಪತ್ರವನ್ನೂ ಒಂದು ತಿಂಗಳಲ್ಲೇ ನೀಡಲಾಯಿತು. ಜಿಲ್ಲೆಯಲ್ಲಿ ನಡೆದ ಸಮ್ಮೇಳನದ ಲೆಕ್ಕಪತ್ರ ನೀಡಲು ವಿಳಂಬ ಮಾಡುತ್ತಿರುವುದರಿಂದೆ ಇರುವ ಮರ್ಮವೇನು ಎಂದು ಪ್ರಶ್ನಿಸಿದರು.
ಲೆಕ್ಕ ಪತ್ರ ಬಹಿರಂಗ ಪಡಿಸಲು ಜಿಲ್ಲಾಡಳಿತಕ್ಕೆ ಈಗಾಗಲೇ ೩ಬಾರಿ ಲಿಖಿತ ಮನವಿ ಮಾಡಿದ್ದು, ಇದುವರೆಗೂ ಲೆಕ್ಕಪತ್ರ ಬಹಿರಂಗ ಪಡಿಸಲಾಗಿಲ್ಲ, ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಜಂಟಿಯಾಗಿ ಸಾರ್ವಜನಿಕ ಲೆಕ್ಕ ಕೊಡದಿದ್ದರೆ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಲಾಗುವುದು ಎಂದು ಎಚ್ಚರಿಸಿದರು.
ಸಮ್ಮೇಳನ ನಡೆದು ಮೂರು ತಿಂಗಳುಗಳಾಗಿದ್ದು, ದೊಡ್ಡ ಮೊತ್ತದ ಲೆಕ್ಕ ಜನರ ಮುಂದಿಡಬೇಕಾದ ಜವಾಬ್ದಾರಿ ಕಸಾಪ ಮತ್ತು ಜಿಲ್ಲಾಡಳಿತದ್ದಾಗಿದೆ. ಒಂದು ವಾರದೊಳಗೆ ಲೆಕ್ಕವನ್ನು ಸಾರ್ವಜನಿಕರ ಮುಂದಿಡದೇ ಇದ್ದರೆ ರಾಜ್ಯಾದ್ಯಂತ ಲೆಕ್ಕ ಕೊಡಿ ಚಳುವಳಿ ಆರಂಭಿಸಲಾಗುವುದು ಎಂದು ಎಚ್ಚರಿಸಿದರು.
ಗೋಷ್ಠಿಯಲ್ಲಿ ಪ್ರೊ.ಜಿ.ಟಿ.ವೀರಪ್ಪ, ಜಿ.ಸಂತೋಷ್, ರಾಜೇಂದ್ರ ಬಾಬು, ಅರವಿಂದಪ್ರಭು, ಹೆಚ್.ಡಿ.ಜಯರಾಂ, ಸಿ.ಕುಮಾರಿ ಇದ್ದರು.
ಮೈಸೂರು : ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ಬೆಳ್ಳಂಬೆಳಿಗ್ಗೆಯೇ ಮಚ್ಚು ಲಾಂಗುಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿರುವ ಘಟನೆ…
ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…
ನ್ಯೂಯಾರ್ಕ್ : ಭಾರತದ ಮೇಲೆ ಡೊನಾಲ್ಡ್ ಟ್ರಂಪ್ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…
ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…