ಮಂಡ್ಯ

ಸಾಹಿತ್ಯ ಸಮ್ಮೇಳನ | ಖರ್ಚು ವೆಚ್ಚದ ಲೆಕ್ಕ ನೀಡುವಂತೆ ಆಗ್ರಹ

ಮಂಡ್ಯ: ಜಿಲ್ಲೆಯಲ್ಲಿ ನಡೆದ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆದು ಮೂರು ತಿಂಗಳಾದರೂ ಅದರ ಖರ್ಚು ವೆಚ್ಚದ ಲೆಕ್ಕ ನೀಡದೇ ಇದ್ದು ಕೂಡಲೇ ಲೆಕ್ಕಪತ್ರವನ್ನು ಸಾರ್ವತ್ರಿಕವಾಗಿ ಬಹಿರಂಗ ಪಡಿಸಬೇಕು ಎಂದು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಎಂ.ಬಿ.ನಾಗಣ್ಣಗೌಡ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪಾರದರ್ಶಕತೆ ಕಾಯ್ದುಕೊಳ್ಳುವ ದೃಷ್ಠಿಯಿಂದ ಜನತೆಯ ಮುಂದಿಡುವುದು ಜಿಲ್ಲಾಡಳಿತ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಜವಾಬ್ದಾರಿಯಾಗಿದೆ ಎಂದರು.

ಸಮ್ಮೇಳನಕ್ಕೆ ಸರ್ಕಾರದಿಂದಲೇ ಕೋಟಿಗಟ್ಟಲೆ ಹಣ ನೀಡಲಾಗಿದೆ. ಸಮಿತಿಗಳನ್ನು ರಚಿಸಿ ಹಣ ಹಂಚಲಾಗಿದ್ದು, ಗಣಕೀಕೃತ ಸಹಾಯವಿರುವ ಕಾಲದಲ್ಲಿ ಲೆಕ್ಕಪತ್ರ ನೀಡಲು ಮೂರು ತಿಂಗಳು ಬೇಕೆ ಎಂದು ಪ್ರಶ್ನಿಸಿದ ಅವರು, ಸಮ್ಮೇಳನಾಪೂರ್ವದಲ್ಲಿಯೇ ಸೋಷಿಯಲ್ ಆಡಿಟಿಂಗ್ ಮಾಡಲು ಕೋರಿ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲಾಯಿತು. ಸಮ್ಮೇಳನದ ತಿಂಗಳ ನಂತರ ಲೆಕ್ಕಪತ್ರ ಬಹಿರಂಗ ಪಡಿಸಲು ಕೋರಲಾಯಿತು. ಆಗ ಒಂದು ತಿಂಗಳ ಕಾಲಾವಕಾಶ ಕೇಳಿದ ಜಿಲ್ಲಾಧಿಕಾರಿಗಳು ೪೫ ದಿನ ಕಳೆದರೂ ಸಮ್ಮೇಳನದ ಲೆಕ್ಕಪತ್ರಗಳನ್ನು ಜನರ ಮುಂದಿರಿಸಿಲ್ಲ ಎಂದು ದೂಡಿದರು.

ಕಂಪ್ಯೂಟರ್‌ಗಳ ಹೆಚ್ಚು ಬಳಕೆಯಿಲ್ಲದ ೧೯೯೪ರಲ್ಲಿ ನಡೆದ ಸಮ್ಮೇಳನದ ಲೆಕ್ಕಪತ್ರವನ್ನು ಒಂದು ತಿಂಗಳಲ್ಲಿಯೇ ನೀಡಲಾಗಿತ್ತು. ಹಾವೇರಿಯಲ್ಲಿ ನಡೆದ ೮೬ನೇ ಸಮ್ಮೇಳನದ ಲೆಕ್ಕಪತ್ರವನ್ನೂ ಒಂದು ತಿಂಗಳಲ್ಲೇ ನೀಡಲಾಯಿತು. ಜಿಲ್ಲೆಯಲ್ಲಿ ನಡೆದ ಸಮ್ಮೇಳನದ ಲೆಕ್ಕಪತ್ರ ನೀಡಲು ವಿಳಂಬ ಮಾಡುತ್ತಿರುವುದರಿಂದೆ ಇರುವ ಮರ್ಮವೇನು ಎಂದು ಪ್ರಶ್ನಿಸಿದರು.

ಲೆಕ್ಕ ಪತ್ರ ಬಹಿರಂಗ ಪಡಿಸಲು ಜಿಲ್ಲಾಡಳಿತಕ್ಕೆ ಈಗಾಗಲೇ ೩ಬಾರಿ ಲಿಖಿತ ಮನವಿ ಮಾಡಿದ್ದು, ಇದುವರೆಗೂ ಲೆಕ್ಕಪತ್ರ ಬಹಿರಂಗ ಪಡಿಸಲಾಗಿಲ್ಲ, ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಜಂಟಿಯಾಗಿ ಸಾರ್ವಜನಿಕ ಲೆಕ್ಕ ಕೊಡದಿದ್ದರೆ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಲಾಗುವುದು ಎಂದು ಎಚ್ಚರಿಸಿದರು.

ಸಮ್ಮೇಳನ ನಡೆದು ಮೂರು ತಿಂಗಳುಗಳಾಗಿದ್ದು, ದೊಡ್ಡ ಮೊತ್ತದ ಲೆಕ್ಕ ಜನರ ಮುಂದಿಡಬೇಕಾದ ಜವಾಬ್ದಾರಿ ಕಸಾಪ ಮತ್ತು ಜಿಲ್ಲಾಡಳಿತದ್ದಾಗಿದೆ. ಒಂದು ವಾರದೊಳಗೆ ಲೆಕ್ಕವನ್ನು ಸಾರ್ವಜನಿಕರ ಮುಂದಿಡದೇ ಇದ್ದರೆ ರಾಜ್ಯಾದ್ಯಂತ ಲೆಕ್ಕ ಕೊಡಿ ಚಳುವಳಿ ಆರಂಭಿಸಲಾಗುವುದು ಎಂದು ಎಚ್ಚರಿಸಿದರು.
ಗೋಷ್ಠಿಯಲ್ಲಿ ಪ್ರೊ.ಜಿ.ಟಿ.ವೀರಪ್ಪ, ಜಿ.ಸಂತೋಷ್, ರಾಜೇಂದ್ರ ಬಾಬು, ಅರವಿಂದಪ್ರಭು, ಹೆಚ್.ಡಿ.ಜಯರಾಂ, ಸಿ.ಕುಮಾರಿ ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

8 mins ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

25 mins ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

2 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

4 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

7 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

8 hours ago