Mysore
19
scattered clouds

Social Media

ಭಾನುವಾರ, 15 ಫೆಬ್ರವರಿ 2026
Light
Dark

ಸಾಹಿತ್ಯ ಸಮ್ಮೇಳನ: ಸ್ಥಳ ಪರಿಶೀಲನೆ ನಡೆಸಿದ ಕಸಾಪ ಅಧ್ಯಕ್ಷ ಮಹೇಶ್‌ ಜೋಷಿ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಈ ಬಾರಿ ಮಂಡ್ಯದಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದ್ದು, ಡಿಸೆಂಬರ್‌ 20, 21, 22 ರಂದು ಮೂರು ದಿನಗಳ ಕಾಲ ಸಾಹಿತ್ಯ ಸಮ್ಮೇಳನ ನಡೆಯಲಿದೆ.

ಸಾಹಿತ್ಯ ಸಮ್ಮೇಳನದ ಕೆಲಸಗಳು ಭರದಿಂದ ಸಾಗಲಿ ಎಂದು ಮಂಡ್ಯ ಜಿಲ್ಲಾ ಸಚಿವ ಎನ್‌ ಚಲುವರಾಯಸ್ವಾಮಿ ಕಸಾಪ ಅಧ್ಯಕ್ಷರು ಹಾಗೂ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ಹಿನ್ನಲೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಮಹೇಶ್‌ ಜೋಷಿ ಅವರು ಭಾನುವಾರ(ಜೂ.30) ಚಿಕ್ಕ ಮಂಡ್ಯದ ಕೆರೆಯಂಗಳ ಹಾಗೂ ಸೆಂಜೋ ಆಸ್ಪತ್ರೆ ಹಿಂಭಾಗವಿರುವ ಸ್ಥಳ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ: ಕುಮಾರ, ಅಪರ ಜಿಲ್ಲಾಧಿಕಾರಿ ಡಾ; ಹೆಚ್.ಎಲ್ ನಾಗರಾಜು ಹಾಗೂ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು.

Tags:
error: Content is protected !!