ಬೆಂಗಳೂರು: ಸಕ್ಕರೆನಾಡು ಮಂಡ್ಯದಲ್ಲಿ ನಡೆಯಲಿರುವ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ಸಾಹಿತಿ ಗೊ.ರು.ಚನ್ನಬಸಪ್ಪ ಅವರಿಗೆ ಮಂಡ್ಯ ಲೋಕಸಭೆ ಸದಸ್ಯರು ಹಾಗೂ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅಭಿನಂದನೆ ಸಲ್ಲಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು; ಕನ್ನಡ ಪರಿಚಾರಿಕೆ, ಸಂಘಟನೆ, ಜಾನಪದ, ಶಿಕ್ಷಣ, ಮಾಧ್ಯಮ ಸೇರಿ ಹಲವು ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡವರು ಗೊರುಚ ಅವರು, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿಯೂ ಅವರು ಅನನ್ಯ ಸೇವೆ ಸಲ್ಲಿಸಿದ್ದಾರೆ. ಸ್ವಾತಂತ್ರ್ಯ ಹೋರಾಟಕ್ಕೂ ಧುಮುಕಿದ್ದ ಗೊ.ರು.ಚನ್ನಬಸಪ್ಪ ಅವರು, ಕನ್ನಡ ನಾಡುನುಡಿಗೆ ಅಪಾರ ಕೊಡುಗೆ ನೀಡಿರುವ ಸಂಗತಿಯನ್ನು ಸ್ಮರಣೆ ಮಾಡಿಕೊಂಡಿದ್ದಾರೆ.
ಅಲ್ಲದೆ; ಗೊ.ರು.ಚನ್ನಬಸಪ್ಪ ಅವರು ಲೋಕಸಭೆಯಲ್ಲಿ ನಾನು ಪ್ರತಿನಿಧಿಸುವ ಮಂಡ್ಯ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸುತ್ತಿರುವುದು ನನ್ನ ಸಂತೋಷವನ್ನು ಇಮ್ಮಡಿಗೊಳಿಸಿದೆ ಕೇಂದ್ರ ಸಚಿವರು ಹೇಳಿದ್ದಾರೆ.
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…