ಮಂಡ್ಯ: ಈ ಬಾರಿ ವಿನೂತನವಾಗಿ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನೊಂದಣಿಯನ್ನು ಆನ್ ಲೈನ್ ಮೂಲಕ ಮಾಡಲಾಗುತ್ತಿದ್ದು, ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಶನಿವಾರ ಕೆ.ಆರ್.ಎಸ್ ನ ರಾಯಲ್ ಆರ್ಕಿಡ್ ನಲ್ಲಿ ನೊಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದರು.
ನೊಂದಣಿಗೆ ರೂ 600 ನಿಗದಿ
ಈ ಬಾರಿ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರತಿನಿಧಿಯಾಗಿ ನೊಂದಣಿಯಾಗಿ ಭಾಗವಹಿಸಲು ರೂ 600 ನಿಗದಿಯಾಗಿರುತ್ತದೆ.
ಕನ್ನಡ ಸಾಹಿತ್ಯ ಪರಿಷತ್ತಿನ ವೆಬ್ ಸೈಟ್ ನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯತ್ವ ಪಡೆದಿರುವವರು ನೊಂದಣಿ ಮಾಡಿಕೊಳ್ಳಲು ಇಂದಿನಿಂದ 20 ದಿನಗಳ ಕಾಲ ಅವಕಾಶ ನೀಡಲಾಗಿದೆ. ಆನ್ ಲೈನ್ ನಲ್ಲಿ ಅರ್ಜಿ ಭರ್ತಿ ಮಾಡಿದ ನಂತರ ಹಣ ಪಾವತಿ ಕೂಡ ಆನ್‌ಲೈನ್ ಮೂಲಕ ಮಾಡಬೇಕಿರುತ್ತದೆ.
ಜಿಲ್ಲಾಧಿಕಾರಿ ಡಾ: ಕುಮಾರ ಮಾತನಾಡಿ, ನೊಂದಣಿಯಾಗುವವರಿಗೆ ಆನ್ ಲೈನ್ ಮೂಲಕ ವಸತಿ ಒದಗಿಸುವ ಸ್ಥಳ, ವಿಳಾಸ, ನೋಡಲ್ ಅಧಿಕಾರಿಗಳ ಮೊಬೈಲ್ ಸಂಖ್ಯೆ ಹಾಗೂ ಆನ್ ಲೈನ್ ನಲ್ಲೇ ಫೋಟೋ ಸಹಿತ ಗುರುತಿನ ಚೀಟಿ ಒದಗಿಸಲಾಗುವುದು ಎಂದರು.
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ, ಶ್ರೀರಂಗಪಟ್ಟಣ ವಿಧಾನ ಸಭಾ ಕ್ಷೇತ್ರದ ಶಾಸಕ ರಮೇಶ್ ಬಂಡಿಸಿದ್ದೇಗೌಡ, ವಿಧಾನ ಪರಿಷತ್ ಶಾಸಕ ದಿನೇಶ್ ಗೂಳಿಗೌಡ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಕನ್ನಡ ಸಾಹಿತ್ಯ ಪರಿಷತ್ತಿನ ಸಂಚಾಲಕರಾದ ಮೀರಾ ಶಿವಲಿಂಗಯ್ಯ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಡಾ. ಕೃಷ್ಣೇಗೌಡ ಹುಸ್ಕೂರು, ಹರ್ಷ ಪೆನ್ನದೊಡ್ಡಿ, ಅಪ್ಪಾಜಪ್ಪ ಸೇರಿದಂತೆ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು .
ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…
ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…
ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…
ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ…
ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…
ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…