Categories: ಮಂಡ್ಯ

ಜಿಲ್ಲೆಯ ಜನರು ಸಂಭ್ರಮದಿಂದ ನುಡಿಹಬ್ಬ ಯಶಸ್ವಿಗೊಳಿಸಿ: ಚಲುವರಾಯಸ್ವಾಮಿ ಮನವಿ

ಕೃಷ್ಣರಾಜಪೇಟೆ: ಮಂಡ್ಯ ನಗರದಲ್ಲಿ 3೦ ವರ್ಷಗಳ ನಂತರ ನಡೆಯುತ್ತಿರುವ ಅಖಿಲ ಭಾರತ 87ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ರೈತರು, ಮಹಿಳೆಯರು ಹಾಗೂ ಯುವಜನರು ಲಕ್ಷ ಲಕ್ಷ ಸಂಖ್ಯೆಯಲ್ಲಿ ಸಂಭ್ರಮದಿಂದ ಭಾಗವಹಿಸಿ ನುಡಿಹಬ್ಬವನ್ನು ಯಶಸ್ವಿಗೊಳಿಸಿ ಇತಿಹಾಸ ನಿರ್ಮಿಸಬೇಕು ಎಂದು ರಾಜ್ಯದ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ ಮನವಿ ಮಾಡಿದರು.

ಅವರು ಕೃಷ್ಣರಾಜಪೇಟೆ ಪಟ್ಟಣದಲ್ಲಿ ಸಂಚರಿಸಿದ ಕನ್ನಡ ಜ್ಯೋತಿ ಜಾಗೃತಿ ರಥಕ್ಕೆ ವಿಶೇಷ ಪೂಜೆ ಸಲ್ಲಿಸಿ ನೆರೆದಿದ್ದ ಸಾರ್ವಜನಿಕರನ್ನು ಉದ್ಧೇಶಿಸಿ ಮಾತನಾಡಿದರು.

ಮಂಡ್ಯ ನಗರದಲ್ಲಿ ಡಿಸೆಂಬರ್ 20,21 ಹಾಗೂ 22 ರಂದು ಕನ್ನಡ ಜಾತ್ರೆ, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಬ್ಬದಂತೆ ಸಡಗರ ಸಂಭ್ರಮದಿಂದ ಆಚರಿಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಮಂಡ್ಯ ಜಿಲ್ಲೆಯ ಎಲ್ಲಾ ತಾಲೂಕುಗಳ ಗ್ರಾಮ ಪಂಚಾಯಿತಿ ಕೇಂದ್ರಗಳನ್ನು ತಲುಪಿ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವಂತೆ ಜಾಗೃತಿ ಮೂಡಿಸುವ ಕೆಲಸವನ್ನು ನಮ್ಮ ಜಿಲ್ಲೆಯಲ್ಲಿ ವಿಶೇಷವಾಗಿ ಪ್ರಚಾರ ಮಾಡುತ್ತಿದ್ದಾರೆ. ಎಲ್ಲರೂ ಕೈಜೋಡಿಸಿ ಎಂದು ಹೇಳಿದರು.

ರಾಜ್ಯದ ಎಲ್ಲಾ ತಾಲೂಕುಗಳು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಮತ್ತೊಂದು ಕನ್ನಡ ರಥವು ಸಂಚರಿಸುತ್ತಿದೆ. ನಮ್ಮ ದೇಶ ಮಾತ್ರವಲ್ಲದೇ ವಿದೇಶಗಳಲ್ಲಿ ನೆಲೆಸಿರುವ ಅನಿವಾಸಿ ಕನ್ನಡಿಗರು ಲಕ್ಷ ಲಕ್ಷ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಮೂರು ದಿನಗಳ ಕಾಲ ನಡೆಯುವ ಕನ್ನಡದ ಜಾತ್ರೆಯಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳಿಂದಲೂ ಪ್ರತಿ ದಿನವೂ ಕನಿಷ್ಠ 5೦ ಸಾವಿರದಂತೆ ಮಂಡ್ಯದಲ್ಲಿ ಲಕ್ಷ ಲಕ್ಷ ಸಂಖ್ಯೆಯಲ್ಲಿ ಕನ್ನಡಿಗರು ಭಾಗವಹಿಸಿ ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೊಳಿಸಿಕೊಡಬೇಕು ಎಂದು  ಮನವಿ ಮಾಡಿದರು.

ಸಮ್ಮೇಳನ ನಡೆಸಲು ಬೆಂಗಳೂರು ರಸ್ತೆಯಲ್ಲಿರುವ ಸ್ಯಾಂಜೋ ಆಸ್ಪತ್ರೆಯ ಹಿಂಭಾಗದಲ್ಲಿನ ವಿಶಾಲವಾದ ಸ್ಥಳವನ್ನು ನಿಗಧಿ ಮಾಡಿದೆ. ಸಮ್ಮೇಳನಾಧ್ಯಕ್ಷರ ಆಯ್ಕೆಯ ಪ್ರಕ್ರಿಯೆಯು ಮಾತ್ರ ಬಾಕಿಯಿದ್ದು ಸೂಕ್ತವಾದ ವ್ಯಕ್ತಿಯನ್ನು ಸಮ್ಮೇಳನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗುವುದು ಎಂದು ತಿಳಿಸಿದ ಸಚಿವರು ಮಂಡ್ಯ ಜಿಲ್ಲೆಯ ಜನರಿಗೆ 3೦ ವರ್ಷಗಳ ನಂತರ ದೊರೆತಿರುವ ಅಪರೂಪದ ಅವಕಾಶವನ್ನು ಜಿಲ್ಲೆಯ ಜನತೆ ಪ್ರೀತಿಯಿಂದ ಸ್ವಾಗತಿಸಿ ಹೆಚ್ಚಿನ ಸಂಖ್ಯೆಯಲ್ಲಿ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿಕೊಡಬೇಕು ಎಂದರು.

ಕೆ.ಆರ್.ನಗರ ಶಾಸಕ ಡಿ.ರವಿಶಂಕರ್, ತಹಶೀಲ್ದಾರ್ ಲೆಪ್ಟಿನೆಂಟ್ ಕರ್ನಲ್ ಅಶೋಕ್, ಕಸಾಪ ಪೂರ್ಣಚಂದ್ರತೇಜಸ್ವಿ, ಮಾಜಿಅಧ್ಯಕ್ಷ ಕೆ.ಆರ್.ನೀಲಕಂಠ, ಮಾಜಿಶಾಸಕರಾದ ಕೆ.ಬಿ.ಚಂದ್ರಶೇಖರ್, ಬಿ.ಪ್ರಕಾಶ್, ಪುರಸಭೆ ಅಧ್ಯಕ್ಷೆ ಪಂಕಜಾ, ಮುಖ್ಯಾಧಿಕಾರಿ ನಟರಾಜು, ಕ್ಷೇತ್ರಶಿಕ್ಷಣಾಧಿಕಾರಿ ತಿಮ್ಮೇಗೌಡ, ತಾಲೂಕು ಆರೋಗ್ಯಾಧಿಕಾರಿ ಅಜಿತ್, ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಶಶಿಧರ್, ಶಿಶು ಅಭಿವೃದ್ಧಿ ಅಧಿಕಾರಿ ಅರುಣಕುಮಾರ್, ತಾಲೂಕು ಸಮಾಜ ಕಲ್ಯಾಣಾಧಿಕಾರಿ ದಿವಾಕರ್, ಕ್ಷೇತ್ರ ಸಮನ್ವಯಾಧಿಕಾರಿ ಚಂದ್ರಶೇಖರ್, ತಾ.ಪಂ ಇಓ ಡಾ.ನರಸಿಂಹರಾಜು ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

56 mins ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

1 hour ago

ಮಂಡ್ಯ ಸಮ್ಮೇಳನ | ನಗರ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…

1 hour ago

ನಕಲಿ ಚಿನ್ನಾಭರಣ ಅಡವಿಟ್ಟು ಬರೋಬ್ಬರಿ 34 ಲಕ್ಷ ರೂ. ವಂಚನೆ..!

ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…

2 hours ago

ಮುಡಾ ಪ್ರಕರಣ | ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ಜ.15ಕ್ಕೆ ಮುಂದೂಡಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಜನವರಿ…

2 hours ago

ಸಮ್ಮೇಳನಕ್ಕೆ ಕ್ಷಣಗಣನೆ | ಸಮ್ಮೇಳನ ಸರ್ವಾಧ್ಯಕ್ಷ ಗೊ.ರು ಚನ್ನಬಸಪ್ಪಗೆ ಆತ್ಮೀಯ ಸ್ವಾಗತ

ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…

2 hours ago