ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಈ ಬಾರಿ ಮಂಡ್ಯದಲ್ಲಿ ಡಿಸೆಂಬರ್ ತಿಂಗಳಿನಲ್ಲಿ ನಡೆಯಲಿದೆ.
ಡಿಸೆಂಬರ್ 20, 21, 22 ರಂದು ಮೂರು ದಿನಗಳ ಕಾಲ ನಡೆಯುವ ಈ ಸಾಹಿತ್ಯ ಸಮ್ಮೇಳನಕ್ಕೆ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಮಹಾಪೋಷಕರಾಗಿ ಆಯ್ಕೆಯಾಗಿದ್ದಾರೆ.
ಈ ಹಿನ್ನೆಲ್ಲೆ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಹೇಶ್ ಜೋಶಿ ಅವರು ಶ್ರೀಗಳನ್ನು ಸನ್ಮಾನಿಸಿದರು. ಈ ಸಂದರ್ಭ ಜಿಲ್ಲಾಧಿಕಾರಿ ಡಾ. ಕುಮಾರ ಹಾಗೂ ಅಪರ ಜಿಲ್ಲಾಧಿಕಾರಿ ಡಾ. ಎಚ್.ಎಲ್. ನಾಗರಾಜು ಹಾಜರಿದ್ದರು.