ಮಂಡ್ಯ

ಸ್ಯಾಂಡಲ್‌ವುಡ್‌ ಖ್ಯಾತ ನಿರ್ಮಾಪಕ ನರಹಳ್ಳಿ ಜ್ಞಾನೇಶ್‌ ನಿಧನ

ಪಾಂಡವಪುರ: ಸ್ಯಾಂಡಲ್‌ವುಡ್‌ ನಿರ್ಮಾಪಕ, ನಿರ್ದೇಶಕ, ಸಂಕಲನಕಾರ ಹಾಗೂ ಸಂಘಟಕ ನರಹಳ್ಳಿ ಜ್ಞಾನೇಶ್ (೪೮) ಅವರು ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಕಾರ್ಯನಿಮಿತ್ತ ಮೈಸೂರಿನಿಂದ ಸ್ವಗ್ರಾಮಕ್ಕೆ ಬರುವ ಸಂದರ್ಭದಲ್ಲಿ ಹೃದಯಾಘಾತವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಮೃತ ಜ್ಞಾನೇಶ್ ಅವರು ಇತ್ತೀಚೆಗೆ ನಡೆದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಚುನಾವಣೆಯಲ್ಲಿ ನಿರ್ಮಾಪಕರ ವಲಯದಿಂದ ಸ್ಪರ್ಧಿಸಿ ಮೈಸೂರು-ಮಂಡ್ಯ ಜಿಲ್ಲೆಗಳ ಪ್ರತಿನಿಧಿಸುವ ಮೂಲಕ ನಿರ್ದೇಶಕರಾಗಿ ಆಯ್ಕೆಯಾಗಿದ್ದರು. ಕಳೆದ ಎರಡು ದಶಕಗಳಿಂದ ಕಿರುತೆರೆ ಮತ್ತು ಹಿರಿತೆರೆಯಲ್ಲಿ ಸಕ್ರಿಯರಾಗಿದ್ದ ನರಹಳ್ಳಿ ಜ್ಞಾನೇಶ್ ಸುರೇಶ್ ಅರಸ್ ಅವರ ಬಳಿ ಸಂಕಲನ ಕಲಿತು ಹಲವಾರು ಧಾರವಾಹಿಗಳು, ಸಾಕ್ಷ್ಯ ಚಿತ್ರಗಳು, ಕಿರುಚಿತ್ರಗಳು, ಸಿನಿಮಾಗಳಿಗೆ ಸಂಕಲನಕಾರಾಗಿ ಕೆಲಸ ಮಾಡಿದ್ದರು. ಇವರು ಜಗ್ಗೇಶ್ ಅಭಿನಯದ ‘ಎದ್ದೇಳು ಮಂಜುನಾಥ’ ಸಿನಿಮಾದ ಸಂಕಲನಕ್ಕಾಗಿ ರಾಜ್ಯ ಪ್ರಶಸ್ತಿ ಸಹ ಪಡೆದಿದ್ದರು.

ಹುಟ್ಟೂರು ನರಹಳ್ಳಿಯನ್ನು ಕೇಂದ್ರವಾಗಿಸಿಕೊಂಡು ಹಸಿರುಭೂಮಿ ಟ್ರಸ್ಟ್ ಸ್ಥಾಪಿಸಿ, ಅದರ ಅಧ್ಯಕ್ಷರಾಗಿ ಜ್ಞಾನೇಶ್ ಅವರು ಮಂಡ್ಯ ಮತ್ತು ಮೈಸೂರು ಮತ್ತು ಮಂಡ್ಯ ಜಿಲ್ಲೆಯಾದ್ಯಂತ ಪರಿಸರ, ಸಾಹಿತ್ಯ, ಜನಪದ, ನಾಟಕ, ಸಿನಿಮಾ, ರಂಗಭೂಮಿ ಸಂಬಂಧಿಯಾದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿ ಕಾರ್ಯೋನ್ಮುಖರಾಗುವ ಮೂಲಕ ಸಮಾಜಸೇವೆಯಲ್ಲಿ ನಿರತರಾಗಿದ್ದರು. ಸಿನಿಮಾ ಮತ್ತು ಸಾಹಿತ್ಯ ಕ್ಷೇತ್ರದ ಹಲವು ದಿಗ್ಗಜರ ಜೊತೆಗೆ ನಿಕಟವಾದ ಸಂಪರ್ಕ ಹೊಂದಿದ್ದರು.

ಮೇಲುಕೋಟೆ ಶಾಸಕ ದರ್ಶನ ಪುಟ್ಟಣ್ಣಯ್ಯ, ಚಲನಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್, ಸಾಹಿತಿ ಟಿ. ಸತೀಶ್ ಜವರೇಗೌಡ, ಕೊಳ್ಳೇಗಾಲದ ಮಾಜಿ ಶಾಸಕ ಎಸ್. ಬಾಲರಾಜ್, ಚಲನಚಿತ್ರ ನಾಯಕ ನಟ ಜಯಪ್ರಕಾಶ್ (ಜೆಪಿ), ಸಂಕಲನಕಾರ ನಾಗೇಂದ್ರ ಅರಸ್, ವಿನ್ಯಾಸಕಾರ ಪ್ರಕಾಶ್ ಚಿಕ್ಕಪಾಳ್ಯ, ಸಂಗೀತ ನಿರ್ದೇಶಕ ನಾಗೇಶ್ ಕಂದೇಗಾಲ, ರಂಗಕರ್ಮಿ ಚಂದ್ರು ಮಂಡ್ಯ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ನಿಕಟಪೂರ್ವ ನಿರ್ದೇಶಕ ಜೆ.ಬಿ. ಸಿದ್ದೇಗೌಡ, ಪತ್ರಕರ್ತ ಜೀವನ್ಮುಖಿ ಸುರೇಶ್ ರೈತ ಸಂಘದ ಮುಖಂಡರೂ ಸೇರಿದಂತೆ ನೂರಾರು ಗಣ್ಯರು ನರಹಳ್ಳಿ ಜ್ಞಾನೇಶ್ ಅವರ ಅಂತಿಮ ದರ್ಶನ ಪಡೆದರು.

ಮೃತರ ಅಂತ್ಯಕ್ರಿಯೆ ಅವರ ಸ್ವಗ್ರಾಮ ಪಾಂಡವಪುರ ತಾಲ್ಲೂಕಿನ ನರಹಳ್ಳಿಯಲ್ಲಿ ನೆರವೇರಿತು. ಮೃತರಿಗೆ ಪಾಂಡವಪರ ತಾಲ್ಲೂಕು ರೈತ ಸಂಘದ ಮಹಿಳಾ ಘಟಕದ ಅಧ್ಯಕ್ಷೆ ಕೋಕಿಲ, ಪುತ್ರ ಚಿರಾಗ್, ಪುತ್ರಿ ಇಂಪನಾ ಅವರನ್ನು ಅಗಲಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಉಡುತೊರೆ ಹಳ್ಳ ಜಲಾಶಯ ಕಾಮಗಾರಿಗೆ ಸಿಎಂ ಅನುಮೋದನೆ: ಮಲೆ ಮಹದೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಉಡುತೊರೆ ಹಳ್ಳ ಜಲಾಶಯ ಏತ ನೀರಾವರಿ ಯೋಜನೆ ಹಾಗೂ…

6 mins ago

ಮತ್ತೆ ಇರಾನ್‌ನ ನಾಲ್ಕು ತೈಲ ಘಟಕಗಳನ್ನು ಉಡೀಸ್‌ ಮಾಡಿದ ಅಮೇರಿಕಾ

ಟೆಹರಾನ್:‌ ಇರಾನ್‌ ಮೇಲೆ ಇಸ್ರೇಲ್‌ ಹಾಗೂ ಅಮೇರಿಕಾ ದಾಳಿ ಮುಂದುವರಿಸಿದ್ದು, ಪ್ರಕ್ಷುಬ್ಧ ಸ್ಥಿತಿ ನಿರ್ಮಾಣವಾಗಿದೆ. ಇರಾನ್‌ನ ಬೀದಿ ಬೀದಿಗಳಲ್ಲಿ ಬೆಂಕಿ…

25 mins ago

ಜೆಡಿಯುಗೆ ಸೇರ್ಪಡೆಯಾದ ಬಿಹಾರ ಸಿಎಂ ನಿತೀಶ್‌ ಪುತ್ರ ನಿಶಾಂತ್ ಕುಮಾರ್‌

ಪಾಟ್ನಾ: ಬಿಹಾರ ಸಿಎಂ ನಿತೀಶ್‌ ಕುಮಾರ್‌ ಪುತ್ರ ನಿಶಾಂತ್‌ ಕುಮಾರ್‌ ಅವರಿಂದು ಪಾಟ್ನಾದ ಜೆಡಿಯು ಪಕ್ಷದ ಪ್ರಧಾನ ಕಚೇರಿಯಲ್ಲಿ ಜೆಡಿಯು…

52 mins ago

ಇರಾನ್-‌ಇಸ್ರೇಲ್‌ ಸಂಘರ್ಷ: ಬೆಂಗಳೂರಿನಲ್ಲಿ ಅಡುಗೆ ಎಣ್ಣೆ ದರ ಏರಿಕೆ

ಬೆಂಗಳೂರು: ಇರಾನ್‌ ಮೇಲೆ ಇಸ್ರೇಲ್‌, ಅಮೇರಿಕಾ ದಾಳಿ ನಡೆಸುತ್ತಿರುವ ಪರಿಣಾಮ ಮಧ್ಯಪ್ರಾಚ್ಯದಲ್ಲಿ ಸಂಘರ್ಷದ ಹಿನ್ನೆಲೆಯಲ್ಲಿ ಅದರ ಬಿಸಿ ರಾಜಧಾನಿ ಬೆಂಗಳೂರಿಗೆ…

1 hour ago

ನಿಮ್ಮ ಕೆಲಸ ಎಷ್ಟಿದೆ ಅದನ್ನು ನೋಡಿಕೊಳ್ಳಿ: ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ

ನವದೆಹಲಿ: ಭಾರತಕ್ಕೆ ರಷ್ಯಾ ತೈಲ ಖರೀದಿಗೆ ಅನುಮತಿ ಕೊಟ್ಟಿದ್ದೇವೆ ಎಂದ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌…

1 hour ago

ರಾಷ್ಟ್ರಪತಿ ದ್ರೌಪದಿ ಮುರ್ಮು ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಲೋಪ: ಬಂಗಾಳ ಸರ್ಕಾರದಿಂದ ವರದಿ ಕೇಳಿದ ಗೃಹ ಕಾರ್ಯದರ್ಶಿ

ನವದೆಹಲಿ: ಡಾರ್ಜಿಲಿಂಗ್‌ನಲ್ಲಿ ನಡೆದ 9ನೇ ಅಂತರಾಷ್ಟ್ರೀಯ ಸಂತಾಲ್‌ ಸಮ್ಮೇಳನದ ಸ್ಥಳ ಬದಲಾವಣೆ ಮತ್ತು ಸಂಬಂಧಿತ ವ್ಯವಸ್ಥೆಗಳು ಸೇರಿದಂತೆ ರಾಷ್ಟ್ರಪತಿ ದ್ರೌಪದಿ…

2 hours ago