ಮಂಡ್ಯ

ವಿಜ್ಞಾನ ಯಾವಾಗಲೂ ಧರ್ಮದ ಜೊತೆಗಿರಬೇಕು: ಪ್ರತಿಪಕ್ಷ ನಾಯಕ ಆರ್‌.ಅಶೋಕ್

‌ಮಂಡ್ಯ: ವಿಜ್ಞಾನ-ತಂತ್ರಜ್ಞಾನ ಯಾವಾಗಲೂ ಧರ್ಮದ ಜೊತೆಗೆ ಇರಬೇಕು. ವಿಜ್ಞಾನ ವಿವೇಕಿಗಳ ಕೈಯಲ್ಲಿ ಇದ್ದರೆ ಮಾತ್ರ ಸುರಕ್ಷಿತವಾಗಿರುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ.

ನಾಗಮಂಗಲದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ, ಪೂಜ್ಯ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ 12ನೇ ವಾರ್ಷಿಕ ಪಟ್ಟಾಭಿಷೇಕ ಉತ್ಸವದಲ್ಲಿ ಆರ್‌.ಅಶೋಕ ಅವರು ಪಾಲ್ಗೊಂಡರು.

ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಜ್ಞಾನಕ್ಕೂ ಮಠಕ್ಕೂ ಏನು ಸಂಬಂಧ ಎಂಬ ಪ್ರಶ್ನೆ ಬರುತ್ತದೆ. ಈ ಕಾರ್ಯಕ್ರಮದಲ್ಲಿ ವಿಜ್ಞಾನದ ಪ್ರಾತ್ಯಕ್ಷಿತೆಗಳನ್ನು ತೋರಿಸಲಾಗಿದೆ. ಧರ್ಮ ಪಾಲಿಸುವವರ ಕೈಯಲ್ಲಿ ಧರ್ಮ ಇದ್ದರೆ ಮಾತ್ರ ಎಲ್ಲರಿಗೂ ಒಳಿತಾಗುತ್ತದೆ. ಅಧರ್ಮೀಯರ ಕೈಯಲ್ಲಿ ವಿಜ್ಞಾನ ಸಿಕ್ಕಿದರೆ ಅದರಿಂದ ದೊಡ್ಡ ಅನಾಹುತವಾಗುತ್ತದೆ. ಇಂದು ರೈಲು, ವಿಮಾನದ ಮೂಲಕ ವೇಗವಾಗಿ ದೂರದ ಸ್ಥಳಗಳನ್ನು ತಲುಪಬಹುದು. ಧರ್ಮ ಪಾಲನೆ ಮಾಡುವವರು ಇಂತಹ ವಿಜ್ಞಾನ-ತಂತ್ರಜ್ಞಾನದ ಸಾಧನ ಬಳಸಿದರೆ ಏನೂ ಆಗಲ್ಲ. ಅದರೆ ಅಧರ್ಮೀಯರು ಬಳಸಿದರೆ ಅಪಾಯವಾಗುತ್ತದೆ. ವಿಮಾನವನ್ನು ಬಳಸಿಯೇ ಅಮೆರಿಕದ ವರ್ಲ್ಡ್‌ ಟ್ರೇಡ್‌ ಸೆಂಟರ್‌ ಕಟ್ಟಡವನ್ನು ಧ್ವಂಸ ಮಾಡಲಾಯಿತು ಎಂದರು.

ಮಹಾಕುಂಭಮೇಳದಲ್ಲಿ ಸುಮಾರು 40 ಕೋಟಿ ಜನರು ಸೇರಿದ್ದಾರೆ. ಆ ಕಾರ್ಯಕ್ರಮದ ಆಯೋಜಕರಲ್ಲಿ ಜುನಾ ಅಖಾಡದ ಪೂಜ್ಯ ಶ್ರೀ ಅವಧೇಶನಾಂದ ಗಿರಿ ಮಹಾರಾಜ್‌ ಕೂಡ ಒಬ್ಬರು. ಇಂತಹ ಮಹಾ ಕಾರ್ಯಕ್ರಮ ಆಯೋಜಿಸಿದ್ದಕ್ಕಾಗಿ ಅವರಿಗೆ ನಾನು ವಂದಿಸಿದ್ದೇನೆ. ಅವರನ್ನು ನೋಡಿಯೇ ನನಗೆ ಪುಣ್ಯ ಬಂದಿದೆ ಎಂದರು.

ಮಹಾಕುಂಭಮೇಳಕ್ಕೆ ಹೋದರೆ ಪುಣ್ಯ ಬರುತ್ತದೆಯೇ ಎಂದು ಕೆಲವರು ಪ್ರಶ್ನಿಸಿದ್ದಾರೆ. ಈ ಮೂರು ದಿನದ ಸಂತೆಯಲ್ಲಿ ನಾವು ಪಾಪವನ್ನು ಕಳೆದು ಪುಣ್ಯ ಸಂಪಾದಿಸಬೇಕು. ನಾವು ಮಾಡುವ ಒಳ್ಳೆಯ ಕೆಲಸದಲ್ಲಿ ಸದಾ ದೇವರು ಇರುತ್ತಾರೆ. ಅದನ್ನು ಅರ್ಥ ಮಾಡಿಕೊಂಡು ನಾವು ಕೆಲಸ ಮಾಡಬೇಕು ಎಂದರು.

ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ 12ನೇ ವರ್ಷದ ಪಟ್ಟಾಭಿಷೇಕವನ್ನು ಆಚರಿಸಲಾಗುತ್ತಿದೆ. ಈ ಹಿಂದೆ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರು ಮಠವನ್ನು ಮುನ್ನಡೆಸುತ್ತಿದ್ದರು. ಆಗ ನಾನು ಅವರ ಜೊತೆ ವೇದಿಕೆ ಹಂಚಿಕೊಳ್ಳುತ್ತಿದ್ದೆ. ಅವರ ಬಳಿಕ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಮಠವನ್ನು ಉತ್ತಮವಾಗಿ ಮುನ್ನಡೆಸುತ್ತಿದ್ದಾರೆ ಎಂದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ: ಲೇಖಕಿಯರಿಂದ ಕಥಾಸಂಕಲನ ಆಹ್ವಾನ

ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…

7 mins ago

ಗುಂಡ್ಲುಪೇಟೆ: ಬೊಮ್ಮಲಾಪುರದಲ್ಲಿ ವಾಸದ ಮನೆಗೆ ನುಗ್ಗಿದ ಕಡವೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…

20 mins ago

ಶಿಕ್ಷಣದಿಂದ ಮಾತ್ರ ಮುಖ್ಯವಾಹಿನಿಗೆ ಬರಲು ಸಾಧ್ಯ: ಡಾ.ಕುಮಾರ

ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ…

37 mins ago

ಮಂಡ್ಯ| ಬೂದನೂರು ಉತ್ಸವಕ್ಕೆ ಭರದ ಸಿದ್ಧತೆ: ಈ ಬಾರಿ ಹೆಲಿ ಟೂರಿಸಂ ಆಕರ್ಷಣೆ

ಮಂಡ್ಯ: ತಾಲ್ಲೂಕಿನ ಹೊಸ ಬೂದನೂರಿನಲ್ಲಿ ನೆಲೆಯಾಗಿರುವ ಕಾಶಿ ವಿಶ್ವನಾಥ ಹಾಗೂ ಅನಂತಪದ್ಮನಾಭಸ್ವಾಮಿ ಉತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈ ಬಾರಿ ಉತ್ಸವಕ್ಕೆ…

52 mins ago

ಈ ವರ್ಷ ಬಿಸಿಲ ಝಳವೂ ಹೆಚ್ಚಳ: ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ಈ ವರ್ಷ ಚಳಿ ಪ್ರಮಾಣ ಹೆಚ್ಚಾಗಿದ್ದರಿಂದ ಬಿಸಿಲ ಝಳವೂ ಹೆಚ್ಚಾಗಿರಲಿದ್ದು, ಮುಂದಿನ ಬೇಸಿಗೆಯಲ್ಲಿ ವಿಪರೀತ ಬಿಸಿಲು ಹವಾಮಾನ ಇರಲಿದೆ…

1 hour ago

ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರು: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರು ಇಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಫ್ರೀಡಂಪಾರ್ಕ್ ನಲ್ಲಿ…

1 hour ago