ಮಂಡ್ಯ: ವಿಜ್ಞಾನ-ತಂತ್ರಜ್ಞಾನ ಯಾವಾಗಲೂ ಧರ್ಮದ ಜೊತೆಗೆ ಇರಬೇಕು. ವಿಜ್ಞಾನ ವಿವೇಕಿಗಳ ಕೈಯಲ್ಲಿ ಇದ್ದರೆ ಮಾತ್ರ ಸುರಕ್ಷಿತವಾಗಿರುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ.
ನಾಗಮಂಗಲದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ, ಪೂಜ್ಯ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ 12ನೇ ವಾರ್ಷಿಕ ಪಟ್ಟಾಭಿಷೇಕ ಉತ್ಸವದಲ್ಲಿ ಆರ್.ಅಶೋಕ ಅವರು ಪಾಲ್ಗೊಂಡರು.
ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಜ್ಞಾನಕ್ಕೂ ಮಠಕ್ಕೂ ಏನು ಸಂಬಂಧ ಎಂಬ ಪ್ರಶ್ನೆ ಬರುತ್ತದೆ. ಈ ಕಾರ್ಯಕ್ರಮದಲ್ಲಿ ವಿಜ್ಞಾನದ ಪ್ರಾತ್ಯಕ್ಷಿತೆಗಳನ್ನು ತೋರಿಸಲಾಗಿದೆ. ಧರ್ಮ ಪಾಲಿಸುವವರ ಕೈಯಲ್ಲಿ ಧರ್ಮ ಇದ್ದರೆ ಮಾತ್ರ ಎಲ್ಲರಿಗೂ ಒಳಿತಾಗುತ್ತದೆ. ಅಧರ್ಮೀಯರ ಕೈಯಲ್ಲಿ ವಿಜ್ಞಾನ ಸಿಕ್ಕಿದರೆ ಅದರಿಂದ ದೊಡ್ಡ ಅನಾಹುತವಾಗುತ್ತದೆ. ಇಂದು ರೈಲು, ವಿಮಾನದ ಮೂಲಕ ವೇಗವಾಗಿ ದೂರದ ಸ್ಥಳಗಳನ್ನು ತಲುಪಬಹುದು. ಧರ್ಮ ಪಾಲನೆ ಮಾಡುವವರು ಇಂತಹ ವಿಜ್ಞಾನ-ತಂತ್ರಜ್ಞಾನದ ಸಾಧನ ಬಳಸಿದರೆ ಏನೂ ಆಗಲ್ಲ. ಅದರೆ ಅಧರ್ಮೀಯರು ಬಳಸಿದರೆ ಅಪಾಯವಾಗುತ್ತದೆ. ವಿಮಾನವನ್ನು ಬಳಸಿಯೇ ಅಮೆರಿಕದ ವರ್ಲ್ಡ್ ಟ್ರೇಡ್ ಸೆಂಟರ್ ಕಟ್ಟಡವನ್ನು ಧ್ವಂಸ ಮಾಡಲಾಯಿತು ಎಂದರು.
ಮಹಾಕುಂಭಮೇಳದಲ್ಲಿ ಸುಮಾರು 40 ಕೋಟಿ ಜನರು ಸೇರಿದ್ದಾರೆ. ಆ ಕಾರ್ಯಕ್ರಮದ ಆಯೋಜಕರಲ್ಲಿ ಜುನಾ ಅಖಾಡದ ಪೂಜ್ಯ ಶ್ರೀ ಅವಧೇಶನಾಂದ ಗಿರಿ ಮಹಾರಾಜ್ ಕೂಡ ಒಬ್ಬರು. ಇಂತಹ ಮಹಾ ಕಾರ್ಯಕ್ರಮ ಆಯೋಜಿಸಿದ್ದಕ್ಕಾಗಿ ಅವರಿಗೆ ನಾನು ವಂದಿಸಿದ್ದೇನೆ. ಅವರನ್ನು ನೋಡಿಯೇ ನನಗೆ ಪುಣ್ಯ ಬಂದಿದೆ ಎಂದರು.
ಮಹಾಕುಂಭಮೇಳಕ್ಕೆ ಹೋದರೆ ಪುಣ್ಯ ಬರುತ್ತದೆಯೇ ಎಂದು ಕೆಲವರು ಪ್ರಶ್ನಿಸಿದ್ದಾರೆ. ಈ ಮೂರು ದಿನದ ಸಂತೆಯಲ್ಲಿ ನಾವು ಪಾಪವನ್ನು ಕಳೆದು ಪುಣ್ಯ ಸಂಪಾದಿಸಬೇಕು. ನಾವು ಮಾಡುವ ಒಳ್ಳೆಯ ಕೆಲಸದಲ್ಲಿ ಸದಾ ದೇವರು ಇರುತ್ತಾರೆ. ಅದನ್ನು ಅರ್ಥ ಮಾಡಿಕೊಂಡು ನಾವು ಕೆಲಸ ಮಾಡಬೇಕು ಎಂದರು.
ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ 12ನೇ ವರ್ಷದ ಪಟ್ಟಾಭಿಷೇಕವನ್ನು ಆಚರಿಸಲಾಗುತ್ತಿದೆ. ಈ ಹಿಂದೆ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರು ಮಠವನ್ನು ಮುನ್ನಡೆಸುತ್ತಿದ್ದರು. ಆಗ ನಾನು ಅವರ ಜೊತೆ ವೇದಿಕೆ ಹಂಚಿಕೊಳ್ಳುತ್ತಿದ್ದೆ. ಅವರ ಬಳಿಕ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಮಠವನ್ನು ಉತ್ತಮವಾಗಿ ಮುನ್ನಡೆಸುತ್ತಿದ್ದಾರೆ ಎಂದರು.
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…
ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…
ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…
ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…
ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…