ತುಮಕೂರು: ನಗರದ ವಿದ್ಯಾನಿಧಿ ಕಾಲೇಜಿನ ಎಂ. ಜ್ಞಾನವಿ ಎಂಬ ವಿದ್ಯಾರ್ಥಿನಿ ಈ ಬಾರಿಯ ದ್ವಿತೀಯ ಪಿಯು ಪರೀಕ್ಷೆಯಲ್ಲಿ 600ಕ್ಕೆ 597 ಅಂಕಗಳನ್ನು ಪಡೆದುಕೊಳ್ಳುವ ಮೂಲಕ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಸಾಧನೆ ಮಾಡಿದ್ದಾರೆ.
ಮೂಲತಃ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬೀಚನಹಳ್ಳಿ ಗ್ರಾಮದ ಡಿಎಲ್ ಮಂಜುನಾಥ್ ಹಾಗೂ ಡಿ ಮಂಜುಳಾ ದಂಪತಿಯ ಪುತ್ರಿ ಜ್ಞಾನವಿ ತುಮಕೂರಿನ ವಿದ್ಯಾನಿಧಿ ಕಾಲೇಜು ಹಾಸ್ಟೆಲ್‌ನಲ್ಲಿದ್ದುಕೊಂಡು ವ್ಯಾಸಂಗ ಮಾಡಿದ್ದು, ಪ್ರಥಮ ಪಿಯುಸಿಯಲ್ಲಿ 600ಕ್ಕೆ 600 ಅಂಕವನ್ನು ಗಳಿಸಿದ್ದರು.
ಇನ್ನು ಜ್ಞಾನವಿಯ ಪೋಷಕರು ಬೀಚನಹಳ್ಳಿಯಲ್ಲಿ ಹೊಟೇಲ್ ನಡೆಸುತ್ತಿದ್ದಾರೆ. ಫಲಿತಾಂಶ ಹೊರಬಿದ್ದ ಬಳಿಕ ಮಾತನಾಡಿದ ಜ್ಞಾನವಿ ʼಹಾಸ್ಟೆಲ್‌ನಲ್ಲಿ ಇದ್ದುಕೊಂಡು ಅಭ್ಯಾಸ ಮಾಡಿದ್ದು ನೆರವಾಯಿತು. ಯಾವುದೇ ಒಂದು ವಿಷಯವನ್ನು ಓದಲು ಕುಳಿತರೆ ಅದು ಪೂರ್ತಿಯಾಗುವ ತನಕ ಬಿಡುತ್ತಿರಲಿಲ್ಲ. ಸಾಮಾಜಿಕ ಜಾಲತಾಣದ ಹಾಗೂ ಮೊಬೈಲ್‌ನಿಂದ ನಾನು ದೂರ ದೂರ. ಫಲಿತಾಂಶ ನೋಡಿ ತುಂಬಾ ಖುಷಿಯಾಗಿದೆ. ಮನೆಯಲ್ಲಿ ಹಬ್ಬದ ವಾತಾವರಣ ಇದೆʼ ಎಂದು ಹೇಳಿಕೊಂಡರು.
ಪ್ರತಿದಿನ ರಾತ್ರಿ ಅರಮನೆಗೆ ದೀಪಾಲಂಕಾರ ಹೂವಿನಿಂದ ಶೃಂಗೇರಿ ದೇವಸ್ಥಾನದ ಮಾದರಿ ನಿರ್ಮಾಣ ಪುಷ್ಪ ಪ್ರಿಯರ ಕಣ್ಮನ ಸೆಳೆಯಲಿರುವ ವಿವಿಧ ಮಾದರಿಗಳು…
ಎಸ್.ಎಸ್.ಭಟ್ ಹಾಗಂತ ಇಲ್ಲಿ ಫಲಕ ಹಾಕಿಲ್ಲ, ವಾಹನ ನಿಲ್ಲುವುದು ತಪ್ಪುತ್ತಿಲ್ಲ; ಇದು ನಂಜನಗೂಡಿನ ತಾಯಿ-ಮಕ್ಕಳ ಆಸ್ಪತ್ರೆ ಆವರಣದ ಸ್ಥಿತಿ ನಂಜನಗೂಡು:…
ಮೈಸೂರು: ಕೇಂದ್ರದ ಯುಪಿಎ ಸರ್ಕಾರ ೨೦೦೫ರಲ್ಲಿ ಜಾರಿಗೆ ತಂದ ರಾಷ್ಟ್ರೀಯ ಉದ್ಯೋಗ ಖಾತರಿ ಕಾಯ್ದೆಯಡಿ ಗ್ರಾಮೀಣ ಕುಟುಂಬಗಳಲ್ಲಿ ಜೀವನೋಪಾಯಕ್ಕೆ ಭದ್ರತೆ…
ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…
ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರು ಆದ ಕಾರಣ, ಇಂದು (ಡಿಸೆಂಬರ್ 17) ವಿಧಾನಸಭೆ ಅಧಿವೇಶನದಲ್ಲಿ…