ಮಂಡ್ಯ

ಪ್ರತ್ಯೇಕ ಕಳವು ಪ್ರಕರಣ : 11 ಮಂದಿ ಬಂಧನ

19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್‌ಪಿ ಶೋಭಾರಾಣಿ

ಮಂಡ್ಯ : ಮಳವಳ್ಳಿಯಲ್ಲಿ ಪ್ರತ್ಯೇಕವಾಗಿ ನಡೆದಿದ್ದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಮಂದಿ ಆರೋಪಿಗಳನ್ನು ಬಂಧಿಸಿ, 19 ಬೈಕ್‌ಗಳು ಹಾಗೂ ಚಿನ್ನಾಭರಣ ಸೇರಿದಂತೆ ಸುಮಾರು 34 ಲಕ್ಷ ರೂ.ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳುವಲ್ಲಿ ಮಳವಳ್ಳಿ ಉಪವಿಭಾಗದ ಪೊಲೀಸರ ತಂಡ ಯಶಸ್ವಿಯಾಗಿದೆ.

ಜ.9ರಂದು ಮಳವಳ್ಳಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಕ್ಕದ ಜಾಗದಲ್ಲಿ ನಿಲ್ಲಿಸಲಾಗಿದ್ದ ದ್ವಿಚಕ್ರ ವಾಹನವನ್ನು ದುಷ್ಕರ್ಮಿಗಳು ಕಳವು ಮಾಡಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪಟ್ಟಣ ಪೊಲೀಸರು, ಜ.18ರಂದು ಸಂಜೆ ಮಳವಳ್ಳಿ ಪಟ್ಟಣದಲ್ಲಿಯೇ ಮೈಸೂರು ತಾಲ್ಲೂಕು ಕಾಮನಕೆರೆ ಹುಂಡಿ ಗ್ರಾಮದ ಕಾರ್ತಿಕ್ (23), ಮಳವಳ್ಳಿ ತಾಲ್ಲೂಕು ಬಾಣಸಮುದ್ರ ಗ್ರಾಮದ ಸಾಗರ್(23) ಮತ್ತು ಮಳವಳ್ಳಿ ಪಟ್ಟಣದ ಪ್ರಜ್ವಲ್ (23) ಎಂಬುವರನ್ನು ಬಂಧಿಸಿ ವಿಚಾರಣೆಗೊಳಪಡಿಸಿದಾಗ ವಿವಿಧ ಕಂಪೆನಿಗೆ ಸೇರಿದ ಬೈಕ್‌ಗಳನ್ನು ಕಳವು ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ಅಧಿಕ್ಷಕಿ ಡಾ.ವಿ.ಜೆ. ಶೋಭಾರಾಣಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಬನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 11, ಕೊಳ್ಳೇಗಾಲ ಪಟ್ಟಣ ಹಾಗೂ ಗ್ರಾಮಾಂತರ ಠಾಣೆಯಲ್ಲಿ ತಲಾ ಎರಡು ಪ್ರಕರಣಗಳು, ಕಿರುಗಾವಲಿನಲ್ಲಿ ಒಂದು, ಮಂಡ್ಯ ಪೂರ್ವ ಠಾಣೆಯಲ್ಲಿ ಎರಡು, ಮೈಸೂರು ನಗರ, ಮಳವಳ್ಳಿ ಟೌನ್ ವ್ಯಾಪ್ತಿಯಲ್ಲಿ ತಲಾ ಒಂದು ಸೇರಿದಂತೆ ಒಟ್ಟು 19 ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳ ಅಂದಾಜು ಮೌಲ್ಯ ಏಳು ಲಕ್ಷ ರೂ.ಗಳು ಎಂದು ಎಸ್‌ಪಿ ಮಾಹಿತಿ ನೀಡಿದರು.

ಈ ಮೂವರು ಹಿಂದೆ ಬಾರ್‌ನಲ್ಲಿ ಒಟ್ಟಿಗೆ ಕೆಲಸ ಮಾಡುತ್ತಿದ್ದಾಗ ಪರಿಚಯವಾಗಿದ್ದರು. ನಂತರ ಐಷಾರಾಮಿ ಜೀವನಕ್ಕಾಗಿ ಬೈಕ್ ಕಳ್ಳತನಕ್ಕಿಳಿದಿದ್ದರು. ಕಳವು ಮಾಡಿದ ಬೈಕ್‌ಗಳನ್ನು ಅಡವಿಟ್ಟು ಹಣ ಪಡೆದುಕೊಳ್ಳುತ್ತಿದ್ದರು. ಈ ರೀತಿ ಅಡವಿಟ್ಟುಕೊಂಡಿದ್ದವರಿಂದ ಪೊಲೀಸರು ಬೈಕ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣ ಪತ್ತೆ ಮಾಡಿದ ತನಿಖಾ ತಂಡದಲ್ಲಿದ್ದ ಮಳವಳ್ಳಿ ಡಿವೈಎಸ್ಪಿ ಎಸ್.ಬಿ.ಯಶವಂತ್ ಕುಮಾರ್, ಹಲಗೂರು ವೃತ್ತ ನಿರೀಕ್ಷಕ ಬಿ.ಎಸ್.ಶ್ರೀಧರ್, ಮಳವಳ್ಳಿ ಪಟ್ಟಣ ಠಾಣೆ ವೃತ್ತ ನಿರೀಕ್ಷಕ ಶಿವಲಿಂಗ ದಳವಾಯಿ, ಎಎಸ್‌ಐಗಳಾದ ಸುರೇಶ್, ಗೋಪಾಲ್, ಸಿಬ್ಬಂದಿಗಳಾದ ಮಾದೇಶ್, ಮಹದೇವಸ್ವಾಮಿ, ಹರ್ಷವರ್ಧನ್, ಪ್ರಭುಸ್ವಾಮಿ, ರಿಯಾಜ್‌ಪಾಷಾ, ವಿಕಾಸ್, ಶ್ರೀನಿವಾಸ್ ಮಧುಕಿರಣ್ ತಂಡವನ್ನು ಅಭಿನಂದಿಸಿದರು.

ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಸಿ.ಇ.ತಿಮ್ಮಯ್ಯ, ಎಸ್.ಇ.ಗಂಗಾಧರಸ್ವಾಮಿ, ಮಳವಳ್ಳಿ ಡಿವೈಎಸ್ಪಿ ಎಸ್.ಬಿ.ಯಶವಂತ್ ಕುಮಾರ್, ಹಲಗೂರು ವೃತ್ತ ನಿರೀಕ್ಷಕ ಬಿ.ಎಸ್.ಶ್ರೀಧರ್, ಎಸ್‌ಐ ಶಿವಲಿಂಗ ದಳವಾಯಿ ಇತರರು ಹಾಜರಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಉಪಚುನಾವಣೆ: ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ವರಿಷ್ಠರು

ಪಕ್ಷದ ಗೆಲುವಿಗೆ ಶ್ರಮಿಸಲು ರಾಜ್ಯದ ನಾಯಕರಿಗೆ ಹೈಕಮಾಂಡ್ ಸೂಚನೆ ಕಳೆದ ವಾರ ಬಿಜೆಪಿ ಪಾಳೆಯದಲ್ಲಿ ಹರಿದಾಡಿದ ಒಂದು ಸುದ್ದಿ ಕುತೂಹಲಕ್ಕೆ ಕಾರಣವಾಯಿತು.…

20 mins ago

‘ವಿದ್ಯಾರ್ಥಿ ಸ್ನೇಹಿ ಸಾರಿಗೆʼ

ಮಕ್ಕಳ ಸುರಕ್ಷತೆ ಮತ್ತು ಶಾಲಾ ಪ್ರಯಾಣ ಸುಗಮಗೊಳಿಸುವ ಉದ್ದೇಶ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸು ೧೨…

25 mins ago

ಫುಟ್‌ಪಾತ್ ಏರಿದ ವಾಹನಗಳು; ಜನರಿಗೆ ಗೋಳು

ಪ್ರಶಾಂತ್ ಎಸ್. ಮೈಸೂರು: ವಾಹನಗಳು ರಸ್ತೆಯಲ್ಲಿ ಸಂಚರಿಸಿದರೆ, ಪಾದಚಾರಿಗಳು ಫುಟ್‌ಪಾತ್‌ನಲ್ಲಿ ಓಡಾಡ ಬೇಕು ಎನ್ನುವುದು ಸಾಮಾನ್ಯ ಸಂಗತಿ. ಆದರೆ, ಕುವೆಂಪುನಗರದ…

32 mins ago

ಶತಕದ ಗಡಿ ದಾಟಿದ ಬನ್ನಂಗಾಡಿ ಶಾಲೆ

ಎಸ್.ನಾಗಸುಂದರ್ ಪಾಂಡವಪುರ ಪಾಂಡವಪುರ: ದಾನಿಗಳ ನೆರವು, ಸ್ಥಳೀಯರ ಸಹಕಾರದಿಂದ ಆರಂಭಗೊಂಡ ಶಾಲೆಯು ನೂರು ವರ್ಷಗಳ ಗಡಿ ದಾಟಿ ಹೆಜ್ಜೆ ಮುಂದಿರಿಸಿದೆ.…

40 mins ago

ಕಾಡಿನಲ್ಲಿ ಶರಣ್ಯಳನ್ನು ಹುಡುಕಿದ್ದು ಯಾರು?

ಅಬ್ದುಲ್ ರಶೀದ್ ಕೊಡಗಿನ ಪರಿಶಿಷ್ಟ ಅಡಿಯ ಜನಾಂಗದ ಕೂಲಿ ಕಾರ್ಮಿಕ ಯುವಕರಾದ ಸುಬ್ರಮಣಿ, ರಾಜು, ಅಯ್ಯಪ್ಪ, ಮಣಿಕಂಠ, ಮಣಿ ಸಾಹಸಗಾಥೆ…

44 mins ago