ಮಂಡ್ಯ

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಜೈಲು ಶಿಕ್ಷೆ, 7 ಲಕ್ಷ ದಂಡ

ಮಂಡ್ಯ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ 7 ಲಕ್ಷ ರೂ ದಂಡ ವಿಧಿಸಿ ಮಂಡ್ಯ ಅಧಿಕ ಸೆಷನ್ಸ್‌ ಮತ್ತು 2ನೇ ತ್ವರಿತಗತಿ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ಬಿ.ದಿಲೀಪ್‌ ಕುಮಾರ್‌ ಅವರು ತೀರ್ಪು ನೀಡಿದ್ದಾರೆ.

ಮಂಡ್ಯ ನಗರ ತಾವರಗೆರೆ ಬಡಾವಣೆ ನಿವಾಸಿ ವಾಯಿದ್‌ ಇಕ್ಬಾಲ್‌ ಅವರ ಮಗ ಅಖೀಬ್‌ ಉ ಶೇಖ್‌ ಅಖೀಬ್‌ ಆಲಂ ಶಿಕ್ಷೆಗೆ ಒಳಗಾದ ಆರೋಪಿ.

ಬಾಲಕಿ ಶಾಲೆಗೆ ಹೋಗುವಾಗ ಮತ್ತು ಬರುವಾಗ ಆಗಾಗ್ಗೆ ಹೋಗಿ ಭೇಟಿ ಮಾಡಿ, ಪುಸಲಾಯಿಸಿ ನಿನ್ನನ್ನು ಪ್ರೀತಿಸುತ್ತಿದ್ದು, ನೀನು ನನ್ನನ್ನು ಪ್ರೀತಿಸದೇ ಹೋದರೆ ಕೈಯನ್ನು ಕೊಯ್ದುಕೊಳ್ಳುತ್ತೇನೆ ಹಾಗೂ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆಂದು ಹೆದರಿಸಿ ಕಳೆದ 2023ರ ಜನವರಿ.27ರಂದು ಆಕೆಯನ್ನು ಕಾರಿನಲ್ಲಿ ಕೂರಿಸಿಕೊಂಡು ಶ್ರೀರಂಗಪಟ್ಟಣ ತಾಲ್ಲೂಕಿನ ಕರಿಘಟ್ಟ ಬೆಟ್ಟದ ದೇವಸ್ಥಾನದ ಹಿಂಭಾಗದಲ್ಲಿ ಕಾರನ್ನು ನಿಲ್ಲಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದು, ಈ ವಿಚಾರವನ್ನು ನಿಮ್ಮ ತಂದೆ-ತಾಯಿಗೆ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಸಿದ್ದಾನೆ.

ಇದರಿಂದ ಮನನೊಂದ ಬಾಲಕಿ ಮನೆಯ ಕೊಠಡಿಯಲ್ಲಿ ಫ್ಯಾನ್‌ಗೆ ವೇಲಿನಿಂದ ನೇಣು ಬಿಗಿದುಕೊಂಡು ಮೃತಪಟ್ಟಿದ್ದಳು. ಈ ಸಂಬಂಧ ಮಂಡ್ಯ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಅತ್ಯಾಚಾರ ಮತ್ತು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ತ್ವರಿತಗತಿಯಲ್ಲಿ 2ನೇ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶ ಬಿ.ದಿಲೀಪ್‌ ಕುಮಾರ್‌ ಅವರು ಆರೋಪಿಗೆ 20 ವರ್ಷ ಕಾರಾಗೃಹ ಶಿಕ್ಷೆ ಹಾಗೂ 7 ಲಕ್ಷ ರೂ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

 

 

ಆಂದೋಲನ ಡೆಸ್ಕ್

Recent Posts

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

1 hour ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

1 hour ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

2 hours ago

ಸುಬ್ಬಮ್ಮ ಜೋಯಿಸ್ ಮೈಸೂರಿನಲ್ಲಿ ತ್ರಿವರ್ಣಧ್ವಜ ಹಾರಿಸಿದ್ದು

ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…

2 hours ago

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

2 hours ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

2 hours ago