Mysore
21
mist

Social Media

ಬುಧವಾರ, 14 ಜನವರಿ 2026
Light
Dark

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟ

life imprisonment
ಮಂಡ್ಯ: ಮೂರು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ ಮಂಡ್ಯ ಜಿಲ್ಲೆಯ ಎರಡನೇ ಜಿಲ್ಲಾ ಸೆಷನ್‌ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
ಶ್ರೀರಂಗಪಟ್ಟಣದ ಬೆಳಗೊಳ ಗ್ರಾಮದ ಶಿವಣ್ಣ ಎಂಬಾತನೇ ಜೀವಾವಧಿ ಶಿಕ್ಷೆಗೆ ಗುರಿಯಾದ ಆರೋಪಿಯಾಗಿದ್ದಾನೆ.
ಕಳೆದ 2023ರ ಜನವರಿಯಲ್ಲಿ ತನ್ನ ಮನೆ ಮುಂದೆ ಆಟವಾಡುತ್ತಿದ್ದ ಮೂರು ವರ್ಷದ ಬಾಲಕಿಯನ್ನು ಪುಸಲಾಯಿಸಿ ತನ್ನ ಮನೆಗೆ ಕರೆದೊಯ್ದಿದ್ದ. ಈ ವೇಳೆ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ. ಅಲ್ಲದೇ ಮಗುವಿಗೆ ಬೆದರಿಕೆ ಕೂಡ ಹಾಕಿದ್ದ.
ವಿಷಯ ತಿಳಿದು ಮಗುವಿನ ತಾಯಿ ಕೃಷ್ಣರಾಜಸಾಗರ ಠಾಣೆಯಲ್ಲಿ ದೂರು ನೀಡಿದ್ದರು. ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಆರೋಪಿ ಶಿವಣ್ಣನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಕೃತ್ಯವೆಸಗಿದ್ದ ಬಗ್ಗೆ ಬಾಯ್ಬಿಟ್ಟಿದ್ದ.
ಪ್ರಕರಣ ಸಂಬಂಧ ಪೊಲೀಸರು ಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಅಪರಾಧಿಗೆ ಜೀವಾವಧಿ ಶಿಕ್ಷೆ ಹಾಗೂ 1 ಲಕ್ಷ ದಂಡ ವಿಧಿಸಿ ಆದೇಶ ಹೊರಡಿಸಿದೆ.
Tags:
error: Content is protected !!