Mysore
24
light intensity drizzle

Social Media

ಗುರುವಾರ, 12 ಡಿಸೆಂಬರ್ 2024
Light
Dark

5 ರೂಪಾಯಿ ವೈದ್ಯ ಡಾ.ಶಂಕರೇಗೌಡರಿಗೆ ಒಲಿದ ‘ಇಂಡಿಯನ್ ಆಫ್‌ ದಿ ಇಯರ್-2022

ಮಂಡ್ಯ:ಐದು ರೂಪಾಯಿ ಡಾಕ್ಟರ್ ಎಂದೇ ಪ್ರಖ್ಯಾತಿ ಹೊಂದಿರುವ ಮಂಡ್ಯದ ಡಾ. ಶಂಕರೇಗೌಡ ಅವರಿಗೆ ರಾಷ್ಟ್ರಮಟ್ಟದ ಪ್ರಶಸ್ತಿ ದೊರಕಿದೆ. ಖಾಸಗಿ ಸಂಸ್ಥೆ ವತಿಯಿಂದ ನೀಡಲಾಗುವ ಈ ಬಾರಿಯ ‘ಇಂಡಿಯನ್ ಆಫ್‌ ದಿ ಇಯರ್-2022’ ದಿಲ್ಲಿಯಲ್ಲಿ ಆಯೋಜಿಸಿದ್ದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಂದ ‘ಇಂಡಿಯನ್ ಆಫ್‌ ದಿ ಇಯರ್-2022’ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ವೈದ್ಯ ಡಾ.ಶಂಕರೇಗೌಡ, ದೇಶದ ಗ್ರಾಮೀಣ ಭಾಗಗಳಲ್ಲಿ ಕೈಗೆಟಕುವ ದರದಲ್ಲಿ ವೈದ್ಯಕೀಯ ಸೇವೆ ಸರಿಯಾಗಿ ದೊರಕುತ್ತಿಲ್ಲ .‘ನಾನು 1982ರಿಂದ ಅಭ್ಯಾಸ ಮಾಡುತ್ತಿದ್ದೇನೆ. ಅಂದಿನಿಂದ ಇಂದಿನವರೆಗೆ 40 ವರ್ಷಗಳಿಂದ 5 ರೂಪಾಯಿ ಶುಲ್ಕ ಹಾಕುತ್ತೇನೆ. ನಮ್ಮಲ್ಲಿ ಯಾವ ಜ್ಞಾನವಿದೆಯೋ ಅದನ್ನು ಎಲ್ಲರಿಗೂ ಸಮಾನವಾಗಿ ನೀಡಬೇಕು. ಹಾಗಾಗಿ ನನ್ನ ಜ್ಞಾನವನ್ನು ನನ್ನ ಶಿಕ್ಷಣಕ್ಕೆ ಕಾರಣರಾದ ನನ್ನ ಜನರಿಗೆ ನೀಡಬೇಕು ಎನ್ನುವ ಉದ್ದೇಶದಿಂದ ಪದವಿ ಪಡೆದ ನಂತರ ನನ್ನ ಊರಿನಲ್ಲಿ ಅಭ್ಯಾಸ ಮಾಡಲು ಪ್ರಾರಂಭಿಸಿದೆ ಎಂದು ಹೇಳಿದರು.

ಅಲ್ಲದೇ, ‘ಇತ್ತೀಚಿನ ದಿನಗಳಲ್ಲಿ ಸಾಕಷ್ಟು ವೈದ್ಯರಿದ್ದಾರೆ. ಆದರೆ ಗ್ರಾಮೀಣ ಪ್ರದೇಗಳಲ್ಲಿ ವೈದ್ಯರ ಕೊರತೆಯಿದೆ. ಹಾಗಾಗಿ ಸರ್ಕಾರವು ವೈದ್ಯರಿಗೆ ಕಡ್ಡಾಯವಾಗಿ ಒಂದು ವರ್ಷ ಗ್ರಾಮೀಣ ಪ್ರದೇಶದಲ್ಲಿ ಅಭ್ಯಾಸ ಮಾಡಬೇಕು’ ಎಂದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ