ಕೆ ಆರ್ ಪೇಟೆ: ಪ್ರಧಾನಿ ನರೇಂದ್ರ ಮೋದಿ ಅವರ ಮುತುವರ್ಜಿಯಿಂದ ದೇಶದಲ್ಲಿ ಧಾರ್ಮಿಕ ಕ್ಷೇತ್ರಗಳನ್ನು ಪುನರುಜ್ಜೀವನಗೊಳಿಸುತ್ತಿರುವಂತೆ ಕರ್ನಾಟಕ ರಾಜ್ಯದಲ್ಲೂ ಧಾರ್ಮಿಕ ಕಾರಿಡಾರ್ ಗಳ ಅಭಿವೃದ್ದಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಒಲವು ತೋರಿಸಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿರುವ ಅವಕಾಶಗಳ ಬಗ್ಗೆ ವರದಿ ನೀಡುವಂತೆ ಮುಜರಾಯಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಅ ಜೊಲ್ಲೆ ತಿಳಿಸಿದರು.
ಕೆ ಆರ್ ಪೇಟೆಯಲ್ಲಿ ದಕ್ಷಿಣ ಭಾರತದ ಮಹಾಕುಂಭಮೇಳವನ್ನು ಅದ್ದೂರಿಯಾಗಿ ಆಯೋಜಿಸಲಾಗಿದೆ. ಮಲೆ ಮಹದೇಶ್ವರರು ಶ್ರೀಶೈಲದಿಂದ ಬಂದಾಗ ಪಾದಸ್ಪರ್ಶ ಮಾಡಿದ್ದ ಪವಿತ್ರ ಸ್ಥಳದಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿರುವುದು ಬಹಳ ವಿಶೇಷ. ಪೂಜ್ಯರ ನೇತೃತ್ವದಲ್ಲಿ ನಡೆಯುತ್ತಿರುವ ಇಂತಹ ಕಾರ್ಯಕ್ರಮಗಳ ಮೂಲಕ ನಮ್ಮ ಮೂಲ ಧಾರ್ಮಿಕ ಸಂಸ್ಕೃತಿಯನ್ನ ಜನ ಮಾನಸದಲ್ಲಿ ಬಿತ್ತಿ ಬೆಳೆಸುವ ಕಾರ್ಯ ನಡೆಸಲಾಗುತ್ತಿದೆ. ಸಂಸ್ಕೃತಿಯನ್ನು ಉಳಿಸುವ ಮತ್ತು ಬೆಳೆಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಹಾಗೂ ನಮ್ಮ ಸರಕಾರವೂ ಚಿಂತನೆ ನಡೆಸಿದ್ದು, ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ ಎಂದು ಹೇಳಿದರು.
ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…
ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…
ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…
ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…
ಮೈಸೂರು: ನಟ ದರ್ಶನ್ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…