ಮಂಡ್ಯ

ಜಿಲ್ಲೆಯಲ್ಲಿ ಡೆಂಗಿ ನಿಯಂತ್ರಣಕ್ಕೆ ಅಗತ್ಯಕ್ರಮ ಕೈಗೊಳ್ಳಿ: ಜಿಪಂ ಸಿಇಒ ಶೇಕ್ ತನ್ವೀರ್ ಆಸೀಫ್

ಮಂಡ್ಯ: ಜಿಲ್ಲೆಯಲ್ಲಿ ಡೆಂಗ್ಯೂ ರೋಗ ಪ್ರಕರಣಗಳು ಹೆಚ್ಚುತ್ತಿದ್ದು, ಡೆಂಗ್ಯೂ ರೋಗ ನಿಯಂತ್ರಣ ಮಾಡಲು ಅಗತ್ಯ ಕ್ರಮವಹಿಸಿ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ತಿಳಿಸಿದರು.

ಇಂದು (ಜುಲೈ.5) ಜಿಲ್ಲೆಯ ಎಲ್ಲಾ ವೈದ್ಯಾಧಿಕಾರಿಗಳು, ತಾಲ್ಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿಗಳು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳೊಂದಿಗೆ ಡೆಂಗಿ ನಿಯಂತ್ರಣ ಕುರಿತು ವೀಡಿಯೋ ಸಂವಾದ ನಡೆಸಿ ಮಾತನಾಡಿದರು.

ಜಿಲ್ಲೆಯಲ್ಲಿ ಒಟ್ಟು 189 ಡೆಂಗ್ಯೂ ಪ್ರಕರಣಗಳು: 2024 ನೇ ಸಾಲಿನಲ್ಲಿ ಜೂನ್ ವರೆಗೆ ಜಿಲ್ಲೆಯಲ್ಲಿ ಒಟ್ಟು 189 ಡೆಂಗ್ಯೂ ಪ್ರಕರಣಗಳು ದಾಖಲಾಗಿದ್ದು, ಮಂಡ್ಯ ತಾಲ್ಲೂಕಿನಲ್ಲಿ- 89, ಮದ್ದೂರು ತಾಲ್ಲೂಕಿನಲ್ಲಿ- 34, ಮಳವಳ್ಳಿ ತಾಲ್ಲೂಕಿನಲ್ಲಿ-14, ಪಾಂಡವಪುರ- 18, ಶ್ರೀರಂಗಪಟ್ಟಣ- 16, ಕೆ.ಆರ್. ಪೇಟೆ- 9, ನಾಗಮಂಗಲ ತಾಲ್ಲೂಕಿನಲ್ಲಿ- 9 ಪ್ರಕರಣಗಳು ದಾಖಲಾಗಿದ್ದು ಸಾರ್ವಜನಿಕರು ಮುನ್ನಚ್ಚರಿಕಾ ಕ್ರಮಗಳನ್ನು ವಹಿಸಿ ಎಂದರು.

ಸ್ಥಳೀಯ ಸಂಸ್ಥೆಗಳು ಕಸ ವಿಲೇವಾರಿ ಮಾಡುವ ವಾಹನದಲ್ಲಿ ದಿನವು ಡೆಂಗ್ಯೂ ನಿಯಂತ್ರಣದ ಬಗ್ಗೆ ನೀಡಿರುವ ಆಡಿಯೋ ತುಣುಕುಗಳನ್ನು ಪ್ರಸಾರ ಪಡಿಸುವುದರ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದರು.

ನಿಯಮಿತ ಹಾಗೂ ಸಮರ್ಪಕ ನೀರು ಸರಬರಾಜು, ನೀರು ಸರಬರಾಜಾಗುವ ನಲ್ಲಿ, ಪೈಪುಗಳು ಸೋರದಂತೆ ನೋಡಿಕೊಳ್ಳಬೇಕು, ಕೊಳವೆ ಬಾವಿಗಳು ಹಾಗೂ ನಲ್ಲಿ ಪೈಪುಗಳು ಒಳಚರಂಡಿ ಜಾಗದಿಂದ ದೂರದಲ್ಲಿರುವಂತೆ ನಿರ್ಮಿಸಬೇಕು ಎಂದರು.

ಮೇಲ್ಚಾವಣಿಯ ತೊಟ್ಟಿಗಳು ಹಾಗೂ ನೀರು ಸರಬಾರಾಜು ಮಾಡುವ ತೊಟ್ಟಿಗಳನ್ನು ಭದ್ರವಾದ ಮುಚ್ಚಳದಿಂದ ಮುಚ್ಚುವ ವ್ಯವಸ್ಥೆ ಮಾಡಬೇಕು. ಆರೋಗ್ಯ ಇಲಾಖೆ ಜೊತೆ ನಿರಂತರ ಸಂಪರ್ಕದಲ್ಲಿದ್ದು ಗ್ರಾಮದ ನೈರ್ಮಲ್ಯತೆ ಹಾಗೂ ಗ್ರಾಮದಲ್ಲಿರಬಹುದಾದ ಸಾಂಕ್ರಾಮಿಕ ರೋಗಗಳ ಪರಿಸ್ಥಿತಿ ಹಾಗೂ ಹತೋಟಿಯ ಬಗ್ಗೆ ಚರ್ಚಿಸಬೇಕು‌ ಎಂದರು. ಹಾಗೂ ಗ್ರಾಮ ಪಂಚಾಯತಿಗಳು ಸೊಳ್ಳೆ ಉತ್ಪತ್ತಿ ತಾಣಗಳ ನಿವಾರಣೆ ಹಾಗೂ ಗ್ರಾಮ ನೈರ್ಮಲ್ಯ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ನಡೆಸಬೇಕು ಎಂದರು.

ಶಿಕ್ಷಣ ಇಲಾಖೆಗಳಲ್ಲಿ ಶಾಲಾ ಪ್ರಾರ್ಥನಾ ವೇಳೆಯಲ್ಲಿ ಡೆಂಗೀ ನಿಯಂತ್ರಣದ ಕುರಿತು ಕರಪತ್ರಗಳನ್ನು ವಿದ್ಯಾರ್ಥಿಗಳತ್ತಿರ ಓದಿಸಬೇಕು ಮತ್ತು ಶಾಲೆಗಳಲ್ಲಿ ಆರೋಗ್ಯ ಶಿಕ್ಷಣ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳಬೇಕು‌. ಸೊಳ್ಳೆಗಳಿಂದ ಹರಡುವ ಮತ್ತು ಇತರೆ ಸಾಂಕ್ರಾಮಿಕ ರೋಗಗಳ ಮತ್ತು ಅವುಗಳ ನಿಯಂತ್ರಣ ಬಗ್ಗೆ ಜಾಗೃತಿ ಮೂಡಿಸಿ ಎಂದರು.

ಶಾಲಾ ಆವರಣವನ್ನು ಸೊಳ್ಳೆ ಉತ್ಪತ್ತಿ ಮುಕ್ತವಾಗಿಡುವುದಲ್ಲದೇ ಸ್ವಚ್ಛತೆ ಹಾಗೂ ನೈರ್ಮಲ್ಯತೆಯನ್ನು ಕಾಪಾಡಬೇಕು ಮತ್ತು ಶಾಲೆಯಲ್ಲಿ ಯಾವುದೇ ಜ್ವರ ಪ್ರಕರಣವಿದ್ದಲ್ಲಿ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ತಿಳಿಸುವುದು ಹಾಗೂ ಸಾಮೂಹಿಕ ಜ್ವರ ಪ್ರಕರಣಗಳು ಕಂಡುಬಂದಲ್ಲಿ ತಪ್ಪದೆ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ತಿಳಿಸಬೇಕು ಎಂದರು.

ಅಂಗನವಾಡಿ ಕಾರ್ಯಕರ್ತರು ವೈಯುಕ್ತಿಕ ರಕ್ಷಣೆ ಮತ್ತು ಪರಿಸರ ನೈರ್ಮಲ್ಯದ ಬಗ್ಗೆ ಸಮುದಾಯದಲ್ಲಿ ಜಾಗೃತಿ ಮೂಡಿಸಬೇಕು ಮತ್ತು ಅಂಗನವಾಡಿ ಆವರಣವನ್ನು ಸೊಳ್ಳೆ ಉತ್ಪತ್ತಿ ಮುಕ್ತವಾಗಿಡುವುದೇ ಅಲ್ಲದೆ ಸ್ವಚ್ಛತೆ ಹಾಗೂ ನೈರ್ಮಲ್ಯತೆಯಿಂದ ನೋಡಿಕೊಳ್ಳಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಆನಂದ್ ಉಪಸ್ಥಿತರಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮಂಡ್ಯ | ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆ

ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…

12 hours ago

ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ದಾಳಿ : ಇರಾನಿನ ಕ್ಷಿಪಣಿ ತಾಣ ನಾಶ

ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…

13 hours ago

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…

14 hours ago

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

15 hours ago

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

16 hours ago

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

17 hours ago