ಮಂಡ್ಯ

ಶಾರ್ಟ್ ಸರ್ಕ್ಯೂಟ್ : ಎಲೆಕ್ಟ್ರಾನಿಕ್ಸ್ ಅಂಗಡಿ ಸುಟ್ಟು ಭಸ್ಮ, ಲಕ್ಷಾಂತರ ರೂ. ನಷ್ಟ

ಕೆ.ಆರ್.ಪೇಟೆ : ಪಟ್ಟಣದ ಪಿ.ಎಲ್.ಡಿ ಬ್ಯಾಂಕ್ ಮುಂಭಾಗದಲ್ಲಿ ಶಫಿಉಲ್ಲಾ ಅವರು ನಡೆಸುತ್ತಿದ್ದ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ಸ್ ಅಂಗಡಿಯು ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.

ಇಂದು ಮುಂಜಾನೆ ಮೂರು ಗಂಟೆಯ ಸಮಯದಲ್ಲಿ ಶಫೀ ಉಲ್ಲಾ ಅವರ ಎಲೆಕ್ಟ್ರಾನಿಕ್ಸ್ ಅಂಗಡಿಯು ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡಿದ್ದು ಅಂಗಡಿಯೊಳಗಿದ್ದ ಮೊಬೈಲ್ ಫೋನುಗಳು, ಮಿಕ್ಸಿಗಳು, ಫ್ಯಾನುಗಳು, ಎಲ್ಇಡಿ ಬಲ್ಬುಗಳು, ಗ್ಯಾಸ್ ಸ್ಟವ್ ಗಳು ಸೇರಿದಂತೆ ಅಂಗಡಿ ಒಳಗಿದ್ದ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಎಲೆಕ್ಟ್ರಾನಿಕ್ಸ್ ಉಪಕರಣಗಳು ಸಂಪೂರ್ಣವಾಗಿ ಬೆಂಕಿಯ ಕೆನ್ನಾಲಿಗೆಗೆ ಆಹುತಿಯಾಗಿದೆ.

ಪಿ.ಎಲ್.ಡಿ ಬ್ಯಾಂಕ್ ಮುಂಭಾಗದ ರಸ್ತೆಗೆರೆ ಅಡ್ಡಾಡುತ್ತಿದ್ದ ಸಾರ್ವಜನಿಕರು ಎಲೆಕ್ಟ್ರಾನಿಕ್ಸ್ ಅಂಗಡಿಗೆ ಬೆಂಕಿ ಹತ್ತಿಕೊಂಡಿರುವುದನ್ನು ಗಮನಿಸಿ, ಅಗ್ನಿಶಾಮಕ ಠಾಣೆಗೆ ಸುದ್ದಿ ನೀಡಿದ ತಕ್ಷಣ ಅಗ್ನಿಶಾಮಕ ಠಾಣೆಯ ಸಿಬ್ಬಂದಿಗಳು ಬೆಂಕಿ ನಂದಿಸಲು ಎಲ್ಲಾ ರೀತಿಯ ಪ್ರಯತ್ನ ನಡೆಸಿದರೂ ಅಂಗಡಿಯೊಳಗಿದ್ದ ಎಲ್ಲಾ ವಸ್ತುಗಳು ಸುಟ್ಟು ಕರಕಲಾಗಿದ್ದವು. ಅಗ್ನಿ ಅವಘಡ ಸಂಭವಿಸಿ ಎಲೆಕ್ಟ್ರಾನಿಕ್ಸ್ ಉಪಕರಣಗಳ ಅಂಗಡಿಯು ಸಂಪೂರ್ಣವಾಗಿ ಸುಟ್ಟು ಬಸ್ಮವಾಗಿರುವ ಬಗ್ಗೆ ಕೆ.ಆರ್.ಪೇಟೆ ಪಟ್ಟಣ ಪೊಲೀಸ್ ಠಾಣೆಗೆ ತಾಲೂಕು ಆಡಳಿತದ ಮುಖ್ಯಸ್ಥರಾದ ತಹಶೀಲ್ದಾರ್ ಅವರಿಗೆ ಹಾಗೂ ಪುರಸಭೆ ಮುಖ್ಯ ಅಧಿಕಾರಿಗಳಿಗೆ ಶಫಿವುಲ್ಲಾ ಅವರು ದೂರು ನೀಡಿದ್ದಾರೆ.

ಎಲೆಕ್ಟ್ರಾನಿಕ್ಸ್ ಅಂಗಡಿಯನ್ನೇ ಜೀವನಧಾರವನ್ನಾಗಿ ಮಾಡಿಕೊಂಡು ಕೆಆರ್ ಪೇಟೆ ಪಟ್ಟಣದಲ್ಲಿ ವಾಸವಾಗಿದ್ದ ಶಫಿವುಲ್ಲಾ ಅವರು ಜೀವನ ನಿರ್ವಹಣೆಗೆ ತುಂಬಾ ತೊಂದರೆಯಾಗಿದೆ ಆದ್ದರಿಂದ ತಾಲೂಕು ಆಡಳಿತವೂ ಸರ್ಕಾರದ ವತಿಯಿಂದ ಪರಿಹಾರವನ್ನು ದೊರಕಿಸಿ ಕೊಡಬೇಕು ಎಂದು ಮುಸ್ಲಿಂ ಮುಖಂಡ ನಜೀಬುಲ್ಲಾ ಅವರು ತಹಶೀಲ್ದಾರ್ ಅವರನ್ನು ಒತ್ತಾಯಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

34 mins ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

3 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

5 hours ago

ಇಂದು ರಾತ್ರಿ ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8.30ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಕುರಿತ…

5 hours ago

ಹಾಸನ: ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ

ಹಾಸನ: ಬೇಲೂರು ತಾಲ್ಲೂಕಿನ ಕಾನಳ್ಳಿ ಅರಣ್ಯ ಪ್ರದೇಶದಲ್ಲಿದ್ದ ದೈತ್ಯಾಕಾರದ ನರಹಂತಕ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಮೂರನೇ…

5 hours ago

ಏಪ್ರಿಲ್.‌20ರಿಂದ ಸಿಎಂ ಸಿದ್ದರಾಮಯ್ಯ ಮೈಸೂರು, ಚಾಮರಾಜನಗರ ಜಿಲ್ಲಾ ಪ್ರವಾಸ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಏಪ್ರಿಲ್.‌20 ಹಾಗೂ 21ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಏಪ್ರಿಲ್.‌20ರಂದು ಬೆಳಿಗ್ಗೆ ವಿಶೇಷ ವಿಮಾನದಲ್ಲಿ ಮೈಸೂರಿಗೆ…

6 hours ago