ಮಂಡ್ಯ: ಈ ಹಿಂದೆ ಮುರುಗೇಶ್ ನಿರಾಣಿ ಹಾಗು ಶಶಿಕಲ ಜೊಲ್ಲೆ ವಿರುದ್ದವೂ ಪ್ರಸಿಕ್ಯೂಸನ್ ಅನುಮತಿ ಕೇಳಲಾಗಿತ್ತು. ಆದರೆ, ಅವರಿಗೆ ಇಲ್ಲದೆ ಇರೋ ನೋಟಿಸ್ ಸಿಎಂ ಸಿದ್ದರಾಮಯ್ಯಗೆ ಕೊಡ್ತಿರೋದು ಯಾಕೆ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಪ್ರಶ್ನಿಸಿದ್ದಾರೆ.
ರಾಜ್ಯದಲ್ಲಿ ರಾಜಕೀಯ ಬೆಳವಣಿಗೆ ವಿಚಾರವಾಗಿ ಶುಕ್ರವಾರ(ಆ.2) ನಾಗಮಂಗಲದಲ್ಲಿ ಮಾತನಾಡಿದ ಸಚಿವ ಚೆಲುವರಾಯಸ್ವಾಮಿ, ಸಿ ಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯುಸನ್ ಗೆ ಅನುಮತಿ ನೀಡಿದ್ರೂ ಸರ್ಕಾರಕ್ಕೆ ಯಾಕೆ ತೊಂದರೆ ಆಗುತ್ತೆ. ಅವರದೆಲ್ಲಾ ರಾಜಕೀಯ ಪ್ರೇರಿತ ಎಂದು ವಾಗ್ದಾಳಿ ನಡೆಸಿದರು.
ಮೂಡ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರ ಇಲ್ಲ. ಕಾನೂನು ಬದ್ದವಾಗಿಯೇ ಅವರು ನಿವೇಶನ ಪಡೆದುಕೊಂಡಿದ್ದಾರೆ. ಇದೆಲ್ಲಾ ನಡೆದಿರೋದು ಬಿಜೆಪಿ ಅವದಿಯಲ್ಲಿ
ಹಾಗಾಗಿ ಬಿಜೆಪಿಯ ಮೇಲೆ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಬಿಜೆಪಿ ಪಾದಯಾತ್ರೆ ವಿಚಾರವಾಗಿ ಮಾತನಾಡಿದ ಸಚಿವರು, ಬಿಜೆಪಿ ಅವಧಿಯಲ್ಲಿನ ಹಗರಣಗಳ ಬಗ್ಗೆ ನಾವು ಪ್ರಶ್ನೆ ಮಾಡ್ತಿವಿ ಎಂದರು.
ಇನ್ನೂ ಪಾದಯಾತ್ರೆಗೆ ಜೆಡಿಎಸ್ ಬೆಂಬಲ ವಿಚಾರಕ್ಕೆ ಪ್ರತಿಕ್ರಿಯಿಸಿ, ಬಿಜೆಪಿ ಜೊತೆ ಇದ್ದಾಗ ಬೆಂಬಲ ಕೊಡಬೇಕಲ್ವಾ? ಆಗಾಗಿ ಕೊಡ್ತಿದ್ದಾರೆ. ಬೆಂಬಲ ಕೊಡದಿದ್ದರೆ ಪಕ್ಷದಿಂದ ತೆಗಿತಾರೆ ಎಂಬ ಕಾರಣಕ್ಕೆ ಜೆಡಿಎಸ್ ನವರು ಬೆಂಬಲ ಕೊಟ್ಟಿದ್ದಾರೆ ಎಂದರು
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್‌ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…
ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಕಾರ್ಯನಿರ್ವಾಹಿಸುತ್ತಿರುವ ಮಹಿಳಾ ಸಿಬ್ಬಂದಿಗೆ ತಿಂಗಳಿಗೊಂದು ದಿನ ಋತುಚಕ್ರ ರಜೆ ನೀಡುವಂತೆ…
ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳಿಗೆ ಮೂಲಭೂತಸೌಕರ್ಯ ಮರಿಚಿಕೆಯಾಗಿದೆ ಎಂದು ಆರೋಪಿಸಿ ಸಂಶೋಧಕರು ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟವು ಪ್ರತಿಭಟನೆ…
ಕೆ.ಆರ್.ನಗರ : ಪಟ್ಟಣದಲ್ಲಿ ಇಬ್ಬರು ಯುವಕರು ಮಾರುತಿ ಕಾರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ…