Mysore
29
light rain

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಶ್ರೀರಂಗಪಟ್ಟಣ ಜಂಬೂ ಸವಾರಿಗೆ ನಟ ಶಿವರಾಜ್‌ಕುಮಾರ್‌ ಚಾಲನೆ

ಮಂಡ್ಯ(ಶ್ರೀರಂಗಪಟ್ಟಣ): ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಇಂದಿನಿಂದ ಆರಂಭವಾಗಿದೆ. ಖ್ಯಾತ ನಟ ಡಾ. ಶಿವರಾಜ್‌ಕುಮಾರ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿಗೆ ಚಾಲನೆ ನೀಡಿದರು.

ಶ್ರೀರಂಗಪಟ್ಟಣದ ಕಿರಂಗೂರು ಬನ್ನಿಮಂಟಪದಿಂದ ಜಂಬೂಸವಾರಿ ಆರಂಭವಾಯಿತು. ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ನಂದಿ ಪೂಜೆ ಮಾಡಿ, ಚಾಮುಂಡಿಗೆ ಪುಷ್ಪರ್ಚನೆ ಮಾಡಿದರು.

ಕಿರಂಗೂರಿನ ಬನ್ನಿಮಂಟಪದಿಂದ ಶ್ರೀರಂಗನಾಥ ಸ್ವಾಮಿ ದೇವಸ್ಥಾನದವರೆಗೆ ಸಾಗುವ ಜಂಬೂ ಸವಾರಿ ಜತೆಗೆ ಸ್ತಬ್ಧ ಚಿತ್ರಗಳು, ವಿವಿಧ ಜನಪದ ಕಲಾ ಪ್ರಕಾರಗಳು ಸಾಥ್‌ ನೀಡಿದವು.

ಕಂದಾಯ ಸಚಿವ ಕೃಷ್ಣ ಭೈರೇಗೌಡ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಶ್ರೀರಂಗಪಟ್ಟಣ ಶಾಸಕ ಹಾಗೂ ಶ್ರೀ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ಅಧ್ಯಕ್ಷ ಎ.ಬಿ ರಮೇಶ್ ಬಂಡಿಸಿದ್ದೇಗೌಡ, ಶಾಸಕರಾದ ಪಿ ರವಿಕುಮಾರ್, ದರ್ಶನ್ ಪುಟ್ಟಣಯ್ಯ, ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅಪರ ಜಿಲ್ಲಾಧಿಕಾರಿ ಡಾ: ಹೆಚ್.ಎಲ್ ನಾಗರಾಜು, ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಗಾಂಭೀರ್ಯದಿಂದ ಸಾಗಿದ ಮಹೇಂದ್ರ
ಅಂಬಾರಿ ಆನೆ ಮಹೇಂದ್ರ ಚಾಮುಂಡೇಶ್ವರಿ ವಿಗ್ರಹ ಹೊತ್ತು ಗಾಂಭೀರ್ಯದೊಂದಿಗೆ ಬನ್ನಿಮಂಟಪ ಕಿರಂಗೂರಿನಿಂದ ಶ್ರೀರಂಗನಾಥ ಸ್ವಾಮಿ ದೇವಲಯದವರೆಗೆ ಸಾಗಿತು.

ಮೆರವಣಿಗೆಗೆ ಸಾಥ್‌ ನೀಡಿದ ಕಲಾತಂಡಗಳು

ಪೂಜಾ ಕುಣಿತ, ವೀರಗಾಸೆ, ಸೋಮನ ಕುಣಿತ, ಡೊಳ್ಳು ಕುಳಿತ, ನಗರಿ/ತಮಟೆ, ನಂದಿದ್ವಜ ಕುಣಿತ, ಗಾರುಡಿಗೊಂಬೆ, ಚಿಲಿಪಿಲಿ ಗೊಂಬೆ, ಕೊಂಬು ಕಹಳೆ, ಒನಕೆ ಕುಣಿತ, ಗಾರುಡಿಗೊಂಬೆ, ಚಿಲಿಪಿಲಿ ಗೊಂಬೆ, ಕೊಂಬು ಕಹಳೆ, ಒನಕೆ ಕುಣಿತ, ದೊಣ್ಣೆ ವರಸೆ, ಕತ್ತಿವರಸೆ, ಬೆಂಕಿ ಭರಾಟೆ, ಮಹಿಳಾಪಟ ಕುಣಿತ, ಬ್ಯಾಂಡ್ ಸೆಟ್, ನಾದಸ್ವರ ಹಾಗೂ ಮಹಿಳಾ ಕೋಲಾಟಗಳು ಜಂಬೂ ಸಾವಾರಿಯ ಉದ್ದಕ್ಕೂ ಸಾಗಿ ಮೆರಗು ನೀಡಿದವು.

ಸ್ಥಬ್ದ ಚಿತ್ರ
ರೇಷ್ಮೆ ಇಲಾಖೆಯಿಂದ ರೇಷ್ನೆ ಹುಳು ಸಾಕಾಣಿಕೆ ಹಾಗೂ ಅದರ ಉತ್ಪನ್ನಗಳು, ವಿದ್ಯಾ ಭಾರತಿ ಶಾಲೆಯಿಂದ ನವ ದುರ್ಗಿಯರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಗೃಹ ಲಕ್ಷ್ಮಿ ಯೋಜನೆ, ಶಾಲಾ ಶಿಕ್ಷಣ ಇಲಾಖೆಯಿಂದ ಜ್ಞಾನಪೀಠ ಪ್ರಶಸ್ತಿ ವಿಜೇತರು ಹಾಗೂ ಶಿಕ್ಷಣ ಇಲಾಖೆ ಸೌಲಭ್ಯದ ಬಗ್ಗೆ ಸ್ಥಬ್ದ ಚಿತ್ರ ಸೇರಿದಂತೆ ಕೃಷಿ, ತೋಟಗಾರಿಕೆ, ಖಾದಿ ಮತ್ತು ಗ್ರಾಮೋದ್ಯೋಗ, ಆರೋಗ್ಯ, ಅಗ್ನಿ ಶಾಮಕ ಇಲಾಖೆ ಹಾಗೂ ಭಗವಾನ್ ಬುದ್ಧ ಕುರಿತು ಸ್ಥಬ್ಧ ಚಿತ್ರಗಳು ಪಾಲ್ಗೊಂಡು ಮೆರವಣಿಗೆಗೆ ವಿಶೇಷ ಮೆರಗು ನೀಡಿದವು.

 

Tags: