ಮಂಡ್ಯ(ಶ್ರೀರಂಗಪಟ್ಟಣ): ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಇಂದಿನಿಂದ ಆರಂಭವಾಗಿದೆ. ಖ್ಯಾತ ನಟ ಡಾ. ಶಿವರಾಜ್‌ಕುಮಾರ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿಗೆ ಚಾಲನೆ ನೀಡಿದರು.
ಶ್ರೀರಂಗಪಟ್ಟಣದ ಕಿರಂಗೂರು ಬನ್ನಿಮಂಟಪದಿಂದ ಜಂಬೂಸವಾರಿ ಆರಂಭವಾಯಿತು. ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ನಂದಿ ಪೂಜೆ ಮಾಡಿ, ಚಾಮುಂಡಿಗೆ ಪುಷ್ಪರ್ಚನೆ ಮಾಡಿದರು.
ಕಿರಂಗೂರಿನ ಬನ್ನಿಮಂಟಪದಿಂದ ಶ್ರೀರಂಗನಾಥ ಸ್ವಾಮಿ ದೇವಸ್ಥಾನದವರೆಗೆ ಸಾಗುವ ಜಂಬೂ ಸವಾರಿ ಜತೆಗೆ ಸ್ತಬ್ಧ ಚಿತ್ರಗಳು, ವಿವಿಧ ಜನಪದ ಕಲಾ ಪ್ರಕಾರಗಳು ಸಾಥ್ ನೀಡಿದವು.
ಕಂದಾಯ ಸಚಿವ ಕೃಷ್ಣ ಭೈರೇಗೌಡ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಶ್ರೀರಂಗಪಟ್ಟಣ ಶಾಸಕ ಹಾಗೂ ಶ್ರೀ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ಅಧ್ಯಕ್ಷ ಎ.ಬಿ ರಮೇಶ್ ಬಂಡಿಸಿದ್ದೇಗೌಡ, ಶಾಸಕರಾದ ಪಿ ರವಿಕುಮಾರ್, ದರ್ಶನ್ ಪುಟ್ಟಣಯ್ಯ, ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅಪರ ಜಿಲ್ಲಾಧಿಕಾರಿ ಡಾ: ಹೆಚ್.ಎಲ್ ನಾಗರಾಜು, ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಗಾಂಭೀರ್ಯದಿಂದ ಸಾಗಿದ ಮಹೇಂದ್ರ
ಅಂಬಾರಿ ಆನೆ ಮಹೇಂದ್ರ ಚಾಮುಂಡೇಶ್ವರಿ ವಿಗ್ರಹ ಹೊತ್ತು ಗಾಂಭೀರ್ಯದೊಂದಿಗೆ ಬನ್ನಿಮಂಟಪ ಕಿರಂಗೂರಿನಿಂದ ಶ್ರೀರಂಗನಾಥ ಸ್ವಾಮಿ ದೇವಲಯದವರೆಗೆ ಸಾಗಿತು.
ಮೆರವಣಿಗೆಗೆ ಸಾಥ್ ನೀಡಿದ ಕಲಾತಂಡಗಳು
ಪೂಜಾ ಕುಣಿತ, ವೀರಗಾಸೆ, ಸೋಮನ ಕುಣಿತ, ಡೊಳ್ಳು ಕುಳಿತ, ನಗರಿ/ತಮಟೆ, ನಂದಿದ್ವಜ ಕುಣಿತ, ಗಾರುಡಿಗೊಂಬೆ, ಚಿಲಿಪಿಲಿ ಗೊಂಬೆ, ಕೊಂಬು ಕಹಳೆ, ಒನಕೆ ಕುಣಿತ, ಗಾರುಡಿಗೊಂಬೆ, ಚಿಲಿಪಿಲಿ ಗೊಂಬೆ, ಕೊಂಬು ಕಹಳೆ, ಒನಕೆ ಕುಣಿತ, ದೊಣ್ಣೆ ವರಸೆ, ಕತ್ತಿವರಸೆ, ಬೆಂಕಿ ಭರಾಟೆ, ಮಹಿಳಾಪಟ ಕುಣಿತ, ಬ್ಯಾಂಡ್ ಸೆಟ್, ನಾದಸ್ವರ ಹಾಗೂ ಮಹಿಳಾ ಕೋಲಾಟಗಳು ಜಂಬೂ ಸಾವಾರಿಯ ಉದ್ದಕ್ಕೂ ಸಾಗಿ ಮೆರಗು ನೀಡಿದವು.
ಸ್ಥಬ್ದ ಚಿತ್ರ
ರೇಷ್ಮೆ ಇಲಾಖೆಯಿಂದ ರೇಷ್ನೆ ಹುಳು ಸಾಕಾಣಿಕೆ ಹಾಗೂ ಅದರ ಉತ್ಪನ್ನಗಳು, ವಿದ್ಯಾ ಭಾರತಿ ಶಾಲೆಯಿಂದ ನವ ದುರ್ಗಿಯರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಗೃಹ ಲಕ್ಷ್ಮಿ ಯೋಜನೆ, ಶಾಲಾ ಶಿಕ್ಷಣ ಇಲಾಖೆಯಿಂದ ಜ್ಞಾನಪೀಠ ಪ್ರಶಸ್ತಿ ವಿಜೇತರು ಹಾಗೂ ಶಿಕ್ಷಣ ಇಲಾಖೆ ಸೌಲಭ್ಯದ ಬಗ್ಗೆ ಸ್ಥಬ್ದ ಚಿತ್ರ ಸೇರಿದಂತೆ ಕೃಷಿ, ತೋಟಗಾರಿಕೆ, ಖಾದಿ ಮತ್ತು ಗ್ರಾಮೋದ್ಯೋಗ, ಆರೋಗ್ಯ, ಅಗ್ನಿ ಶಾಮಕ ಇಲಾಖೆ ಹಾಗೂ ಭಗವಾನ್ ಬುದ್ಧ ಕುರಿತು ಸ್ಥಬ್ಧ ಚಿತ್ರಗಳು ಪಾಲ್ಗೊಂಡು ಮೆರವಣಿಗೆಗೆ ವಿಶೇಷ ಮೆರಗು ನೀಡಿದವು.
ಚಿತ್ರದುರ್ಗದ ಪೇಟೆ ಬೀದಿಯ ಉಡುಗೊರೆ (ಗಿಫ್ಟ್) ಮಾರಾಟ ಮಳಿಗೆ ಮಕ್ಕಳು ಮತ್ತು ಪೋಷಕರಿಂದ ತುಂಬಿ ಹೋಗಿತ್ತು. ಅಲ್ಲಿದ್ದ ಹುಡುಗರನ್ನು ಏಕೆ…
- ಡಾ.ಐ.ಸೇಸುನಾಥನ್ ‘ಒಬ್ಬ ನಿನ್ನ ಬಲಗೆನ್ನೆಗೆ ಹೊಡೆದರೆ ಅವನಿಗೆ ನಿನ್ನ ಇನ್ನೊಂದು ಕೆನ್ನೆಗೂ ಹೊಡೆಯಲು ಅನುವು ಮಾಡಿಕೊಡು; ನಿನ್ನ ಮೇಲಂಗಿಯನ್ನು…
‘ಸ್ಯಾಂಡಲ್ ವುಡ್’ ಎಂದೇ ಹೆಸರಾಗಿರುವ ಕನ್ನಡ ಚಿತ್ರರಂಗ ಇಂದು ಭಾರತದ ಒಂದು ಪ್ರಮುಖ ಚಿತ್ರೋದ್ಯಮವಾಗಿ ಬೆಳೆದಿದೆ. ಈ ಮೊದಲು ಪ್ರತಿ…
ಲಕ್ಷ್ಮಿಕಾಂತ್ ಕೊಮಾರಪ್ಪ ೨೦೨೩ರ ಡಿ.೪ರಂದು ಕಾಡಾನೆ ಕಾರ್ಯಾಚರಣೆ ವೇಳೆ ಮೃತಪಟ್ಟಿದ್ದ ಅರ್ಜುನ; ೨ ವರ್ಷ ಕಳೆದರೂ ಅರ್ಜುನನ ಸ್ಮಾರಕ, ಪ್ರತಿಮೆಗಿಲ್ಲ…
ಮೈಸೂರು: ಸಂಭ್ರಮ, ಸಡಗರ, ವಿಶೇಷ ಪ್ರಾರ್ಥನೆಯೊಂದಿಗೆ ಕ್ರೈಸ್ತ ಧರ್ಮದ ದೈವ ಬಾಲಏಸುವಿನ ಜಯಂತಿಯ ಸ್ಮರಣೆಯು ಅದ್ಧೂರಿಯಾಗಿ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ…
ಪ್ರಶಾಂತ್ ಎಸ್. ಗ್ರಾಮೀಣ ಭಾಗದ ರಸ್ತೆಗಳಲ್ಲಿ ಸಮಸ್ಯೆ ಕಣ್ಣಿಗೆ ದೂಳು ಬಿದ್ದರೆ ಅನಾಹುತ ಸಾಧ್ಯತೆ ವಾಹನ ಸವಾರರಿಗೆ ಸವಾಲು; ಎಚ್ಚರ…