ಮಂಡ್ಯ

ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ: ಅಭಿಮಾನಿಗಳಿಗೆ ಧಿಲ್‌ ಖುಷ್

ಶ್ರೀರಂಗಪಟ್ಟಣ: ಐತಿಹಾಸಿಕ ಶ್ರೀರಂಗಪಟ್ಟಣ ದಸರಾಕ್ಕೆ ಕಿರಂಗೂರಿನ ಬನ್ನಿಮಂಟಪದಲ್ಲಿ ಸ್ಯಾಂಡಲ್‌ವುಡ್‌ ಖ್ಯಾತ ನಟ ಡಾ.ಶಿವರಾಜ್‌ಕುಮಾರ್‌ ಚಾಲನೆ ನೀಡಿದ್ದು, ಬಳಿಕ ಶ್ರೀರಂಗದೇವಾಲಯದ ಮುಂಭಾಗ ವೇದಿಕೆ ಕಾರ್ಯಕ್ರಮಕ್ಕೆ ಶಿವರಾಜ್‌ ಕುಮಾರ್‌ ಆಗಮಿಸುತ್ತಿದ್ದಂತೆ, ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದ ಅಭಿಮಾನಿಗಳು ಜೈಕಾರ ಹಾಕಿದರು.

ವೇದಿಕೆಯಲ್ಲಿ ಶಿವಣ್ಣ ನಟನೆಯ ಬೈರತಿ ರಣಗಲ್‌ ಚಿತ್ರದ ಟೀಸರ್‌ ಪ್ರದರ್ಶನ್‌ ಮಾಡಲಾಯಿತು.

ಶ್ರೀರಂಗಪಟ್ಟಣ, ಮೈಸೂರು ಅದೃಷ್ಟದ ಸ್ಥಳ

ಬಳಿಕ ಮಾತನಾಡಿದ ಅವರು, ಬಹಳಷ್ಟು ಚಲನಚಿತ್ರಗಳನ್ನು ಶ್ರೀರಂಗಪಟ್ಟಣದಲ್ಲಿ ಚಿತ್ರೀಕರಣ ಮಾಡಲಾಗಿದೆ. ಶ್ರೀರಂಗಪಟ್ಟಣದಲ್ಲಿ ಅಭಿಮಾನಿಗಳು, ಬಂಧುಬಳಗ ಹೆಚ್ಚು, ಶ್ರೀರಂಗಪಟ್ಟಣ ಹಾಗೂ ಮೈಸೂರು ನನಗೆ ಅದೃಷ್ಟದ ಸ್ಥಳಗಳಾಗಿದ್ದು, ಇಲ್ಲಿ ಮಾಡುವ ಚಲನಚಿತ್ರಗಳು ಯಶಸ್ವಿಯಾಗಿದೆ ಎಂದು ನುಡಿದರು.

ಯಾವುದೇ ಜಾತಿ, ಮತ, ಪಂಥಗಳಿಗೆ ಹಬ್ಬ ಮೀಸಲಾಗದೇ ಎಲ್ಲರೂ ಒಟ್ಟಿಗೆ ಭಾಗವಹಿಸಿ ಆಚರಿಸುವ ಹಬ್ಬವೇ ದಸರಾ ಹಬ್ಬವಾಗಿದೆ. ಈ ಹಬ್ಬದಲ್ಲಿ ಪಾಲ್ಗೊಂಡು ಸಂಭ್ರಮಿಸುವಂತೆ ಅಭಿಮಾನಿಗಳಿಗೆ ಕರೆ ನೀಡಿದರು.

ನಂತರ, ಹಸಿದಾಗ ಅನ್ನ ದಣಿದಾಗ ನೀರು, ಇವನ್ಯಾರ ಮಗನೋ, ಯಾರೇ ಕೂಗಾಡಲಿ, ಗೊಂಬೆ ಹೇಳುತೈತೆ ಹಾಡುಗಳನ್ನು ಹಾಡಿ ಅಭಿಮಾನಿಗಳನ್ನು ರಂಜಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಸ್ಸಾಂನಲ್ಲಿ ಘೋರ ದುರಂತ: ರೈಲು ಡಿಕ್ಕಿಯಾಗಿ 7 ಆನೆಗಳು ಸಾವು

ಗುವಾಹಟಿ: ರೈಲು ಡಿಕ್ಕಿ ಹೊಡೆದ ಪರಿಣಾಮ ಏಳು ಆನೆಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಒಂದು ಆನೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಸ್ಸಾಂನ…

20 mins ago

ಬುರುಡೆ ಗ್ಯಾಂಗ್‌ನಲ್ಲಿ ಬಿರುಕು: ಏನಾಗಿದೆ ಗೊತ್ತಾ?

ಮಂಗಳೂರು: ಧರ್ಮಸ್ಥಳ ಷಡ್ಯಂತ್ರ ಪ್ರಕರಣದ ಪ್ರಮುಖ ಆರೋಪಿ ಮಾಸ್ಕ್‌ ಮ್ಯಾನ್‌ ಚಿನ್ನಯ್ಯ ಇದೀಗ ಬುರುಡೆ ಗ್ಯಾಂಗ್‌ ವಿರುದ್ಧವೇ ತಿರುಗಿ ಬಿದ್ದಿದ್ದಾನೆ.…

38 mins ago

ದ್ವೇಷ ಭಾಷಣ ಪ್ರತಿಬಂಧನ ಮಸೂದೆಗೆ ಅಂಕಿತ ಹಾಕದಂತೆ ರಾಜ್ಯಪಾಲರಿಗೆ ಪತ್ರ ಬರೆದ ಶೋಭಾ ಕರಂದ್ಲಾಜೆ

ಬೆಂಗಳೂರು: ಬೆಳಗಾವಿ ವಿಧಾನಮಂಡಲ ಅಧಿವೇಶನದಲ್ಲಿ ಅಂಗೀಕರಿಸಲಾದ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮಸೂದೆಗೆ ಅಂಕಿತ ಹಾಕಬಾರದು…

42 mins ago

ಓದುಗರ ಪತ್ರ: ಕಾನೂನು ಎಷ್ಟರ ಮಟ್ಟಿಗೆ ಕೆಲಸ ಮಾಡುತ್ತೆ?

ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ವಿಧೇಯಕವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಡಿ.೧೮ರಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ…

1 hour ago

ಓದುಗರ ಪತ್ರ:  ಸಾಮಾಜಿಕ ಬಹಿಷ್ಕಾರ ನಿಷೇಧ ಕಾನೂನು ಸ್ವಾಗತಾರ್ಹ

ರಾಜ್ಯದಲ್ಲಿ ‘ಸಾಮಾಜಿಕ ಬಹಿಷ್ಕಾರ ನಿಷೇಧ ’ ಕಾನೂನನ್ನು ಜಾರಿಗೊಳಿಸಲು ಮುಂದಾಗಿರುವ ರಾಜ್ಯಸರ್ಕಾರದ ಕ್ರಮ ಶ್ಲಾಘನೀಯ. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ, ಸಾರ್ವಭೌಮತೆ,…

1 hour ago

ಓದುಗರ ಪತ್ರ:  ‘ರಾಮ ಜಪ’ ಮಸೂದೆ ತಿರಸ್ಕರಿಸಿ

ಬುದ್ಧನ ಚಿಂತನೆಗಳನ್ನು ಭಾರತದಿಂದ ಓಡಿಸಿದಂತೆ, ಮಹಾತ್ಮ ಗಾಂಧೀಜಿಯವರನ್ನು ಭಾರತೀಯರ ಮನಸ್ಸಿನಿಂದಿಂದಲೇ ತೆಗೆದುಹಾಕುವ ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ಕುತಂತ್ರ ಬಯಲಾಗಿದೆ.…

2 hours ago