ಮಂಡ್ಯ

ಮತ್ತೆ ಮುನ್ನೆಲೆಗೆ ಬಂತು ಶ್ರೀರಂಗಪಟ್ಟಣ ಜಾಮೀಯಾ ಮಸೀದಿ ವಿವಾದ : ಹೈಕೋರ್ಟ್ ನಲ್ಲಿ ನಾಳೆ ವಿಚಾರಣೆ

ಮಂಡ್ಯ : ಮತ್ತೆ ಶ್ರೀರಂಗಪಟ್ಟಣ ಜಾಮೀಯಾ ಮಸೀದಿ ವಿವಾದ ಮುನ್ನೆಲೆಗೆ ಬಂದಿದ್ದು, ನಾಳೆ ಹೈ ಕೋರ್ಟ್‌ ನಲ್ಲಿ ವಿಚಾರಣೆ ನಡೆಯಲಿದೆ.

ಈ ಶ್ರೀರಂಗಪಟ್ಟಣದ ಜಾಮೀಯಾ ಮಸೀದಿ ವಿವಾದ ಇಂದು ನಿನ್ನೆಯದ್ದು ಅಲ್ಲ. ಹಲವು ವರ್ಷಗಳಿಂದಲೂ ಈ ವಿವಾದ ಕೇಳಿ ಬರುತ್ತಲೆ ಇದೆ. ಟಿಪ್ಪು ಸುಲ್ತಾನ್‌ ಮೂಡಲ ಬಾಗಿಲು ಆಂಜನೇಯಸ್ವಾಮಿ ದೇಗುಲ ಕೆಡವಿ ಜಾಮಿಯಾ ಮಸೀದಿ ನಿರ್ಮಾಣ ಮಾಡಿದ್ದಾನೆ. ಮತ್ತೆ ಮಸೀದಿ ಜಾಗದಲ್ಲಿ ಮೂಡಲ ಬಾಗಿಲು ಆಂಜನೇಯಸ್ವಾಮಿ ದೇಗುಲ ನಿರ್ಮಾಣ ಮಾಡಬೇಕೆಂದು ಹಲವು ವರ್ಷಗಳಿಂದ ಹಿಂದೂ ಸಂಘಟನೆಗಳ ಕಾರ್ಯಕರ್ತರು, ಹನುಮಂತ ಭಕ್ತರು ಪ್ರತಿಭಟನೆ ನಡೆಸಿದ್ದರು.  ಇದೀಗ ಭಜರಂಗ ಸೇನೆ ೧೦೧ ಹನುಮ ಭಕ್ತರ ಮೂಲಕ ಹೈಕೋರ್ಟ್‌ನಲ್ಲಿ ದಾವೆ ಹೂಡಿದೆ.

ಇಷ್ಟು ದಿನ ಪ್ರತಿಭಟನೆ ಮೂಲಕ ಹೋರಾಡುತ್ತಿದ್ದ ಹಿಂದೂ ಸಂಘಟನೆಗಳ ಕಾರ್ಯಕರ್ತರು ಇದೀಗ ನ್ಯಾಯಾಲಯದ ಮೊರೆ ಹೋಗಿದ್ದಾರೆ.  ಜಾಮೀಯಾ ಮಸೀದಿ ಒಂದು ಮಸೀದಿಯಲ್ಲ. ಇದು ಮೂಡಲ ಬಾಗಿಲು ಆಂಜನೇಯಸ್ವಾಮಿ ದೇವಸ್ಥಾನ . ಈ ದೇವಸ್ಥಾನವನ್ನು ಕೆಡವಿ ಟಿಪ್ಪು ಸುಲ್ತಾನ್‌ ಜಮೀಯಾ ಮಸೀದಿಯನ್ನು ನಿರ್ಮಾಣ ಮಾಡಿದ್ದಾನೆ. ಇದು ದೇವಸ್ಥಾನ ಎನ್ನಲು ಹಿಂದೂ ದೇವಸ್ಥಾನಗಳ ಕಲ್ಲುಗಳು, ಕೆತ್ತನೆಗಳು, ಅಲ್ಲದೆ ಮಸೀದಿಯ ಒಳಭಾಗದಲ್ಲಿಯೇ ಹಿಂದೂ ದೇವಸ್ಥಾನದ ಕಲ್ಯಾಣಿ ಹಾಗೂ ಗೋಪುರದಲ್ಲಿ ಕಳಶಗಳೇ ಸಾಕ್ಷಿ. ಇವೇ ಸಾಕು ಇದು ಮಸೀದಿಯಲ್ಲ ಮಂದಿರ ಎಂದು ರೂಪಿಸುತ್ತವೆ. ಹೋಗಾಗಿ ಜಾಮೀಯಾ ಮಸೀದಿಯ ಜಾಗದಲ್ಲಿ ಮೊದಲು ಇದ್ದ ಮೂಡಲ ಆಂಜನೇಯಸ್ವಾಮಿ ದೇವಸ್ಥಾನ ಸ್ಫಾಪನೆಗೆ ಸರ್ವೇ ನಡೆಸಿ ಅವಕಾಶ ಕಲ್ಪಿಸಿಕೊಡಬೇಕೆಂದು ಭಜರಂಗ ಸೇನೆ ಹೈಕೋರ್ಟ್‌ ನಲ್ಲಿ ದಾವೆ ಹೂಡಿದೆ.

ಇನ್ನು ಈ ಕೇಸ್‌ ಅನ್ನು ಹೈಕೋರ್ಟ್‌ ಫೈಲ್‌ ಮಾಡಿಕೊಂಡಿದ್ದು, ಈಗಾಗಲೇ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಮಂಡ್ಯ ಡಿಸಿ, ವಕ್ಫ್‌ ಹಾಗೂ ಧಾರ್ಮಿಕ ದತ್ತಿ ಇಲಾಖೆಗಳಿಗೆ ಕೋರ್ಟ್‌ ನೋಟಿಸ್‌ ನೀಡಿದೆ. ಈ ಕೇಸ್‌ ಸಂಬಂಧ ಮೊದಲ ವಾದ ಪ್ರತಿವಾದಗಳು ನಾಳೆ ನಡೆಯಲಿದೆ. ಈಗಾಗಲೇ ಎಲ್ಲಾ ಇಲಾಖೆಯ ಮುಖ್ಯಸ್ಥರು ಕೋರ್ಟ್‌ ಗೆ ಬರುವಂತೆ ನ್ಯಾಯಾಧೀಶರು ಕೋರಿದ್ದಾರೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಯತೀಂದ್ರ ಸಿದ್ಧರಾಮಯ್ಯ ಅವಹೇಳನ ಪ್ರಕರಣ: ಪ್ರತಾಪ್ ಸಿಂಹ ಹಾಗೂ ಬಿಜೆಪಿ ಐಟಿ ಸೆಲ್ ವಿರುದ್ಧ ದೂರು ದಾಖಲು

ಮೈಸೂರು: ಎಂಎಲ್‌ಸಿ ಯತಿಂದ್ರ ಸಿದ್ದರಾಮಯ್ಯ ವಿರುದ್ಧ ಅವಹೇಳನ ಪೋಸ್ಟ್‌ ಮಾಡಿದ್ದ ಮಾಜಿ ಸಂಸದ ಪ್ರತಾಪ್‌ ಸಿಂಹ ಹಾಗೂ ಬಿಜೆಪಿ ಐಟಿ…

1 hour ago

ಫೆಬ್ರವರಿ.13ರಿಂದ ಹಂಪಿ ಉತ್ಸವ-2026

ವಿಜಯನಗರ: ವಿಜಯನಗರ ಸಾಮ್ರಾಜ್ಯದ ಗತವೈಭವ ನೆನಪು ಮಾಡಿಕೊಡುವ ಹಂಪಿ ಉತ್ಸವದ ತಯಾರಿ ನಡೆಯುತ್ತಿದೆ. ಫೆಬ್ರವರಿ.13, 14 ಹಾಗೂ 15ರಂದು ಹಂಪಿ…

1 hour ago

ಹನೂರು ಕ್ಷೇತ್ರದಲ್ಲಿ 15 ವರ್ಷಗಳಿಂದ ಆಗದೇ ಇದ್ದ ಅಭಿವೃದ್ಧಿ ಕಾರ್ಯ ನಾನು ಮಾಡಿ ತೋರಿಸಿದ್ದೇನೆ: ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ವಿಧಾನಸಭಾ ಕ್ಷೇತ್ರದ ಮತದಾರರ ಋಣದಿಂದ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಚುನಾವಣಾ ಪೂರ್ವದಲ್ಲಿ…

2 hours ago

ಬೆಂಗಳೂರು ಏರ್‌ಪೋರ್ಟ್‌ನಲ್ಲಿ 3.39 ಕೋಟಿ ಮೌಲ್ಯದ ಗಾಂಜಾ ಸೀಜ್‌

ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ವಿದೇಶದಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 3.39 ಕೋಟಿ ರೂ…

2 hours ago

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್‌ ಮ್ಯಾಚ್‌ ಬಗ್ಗೆ ಸಂಪುಟ ಸಭೆಯಲ್ಲಿ ನಿರ್ಧಾರ: ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಮ್ಯಾಚ್‌ ಆಡಿಸುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಂತರ ನಿರ್ಧಾರ ಪ್ರಕಟಿಸುತ್ತೇವೆ ಎಂದು…

2 hours ago

ಹೋಗೇನಕಲ್‌ ಫಾಲ್ಸ್‌ಗೆ ಬರುವ ಪ್ರವಾಸಿಗರ ಅನುಕೂಲಕ್ಕಾಗಿ 50 ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಾಣ: ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಗೆನಕಲ್ ಫಾಲ್ಸ್ ಗೆ ಬರುವ ಪ್ರವಾಸಿಗರ…

3 hours ago