ಮಂಡ್ಯ: ಕೇಂದ್ರದ ಹಿಂದಿ ಹೇರಿಕೆಯನ್ನು ನಾವು ಸಂಪೂರ್ಣವಾಗಿ ವಿರೋಧಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಮಂಡ್ಯದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರದ ನಡೆಯನ್ನು ನಾವು ವಿರೋಧಿಸುತ್ತೇವೆ. ಕರ್ನಾಟಕದಲ್ಲಿ ಹಿಂದಿ ಹೇರಿಕೆಗೆ ಬಿಡಲ್ಲ. ರಾಜ್ಯದಲ್ಲಿ ದ್ವಿಭಾಷಾ ನೀತಿ ಜಾರಿಯಲ್ಲಿದೆ. ಮಾತೃಭಾಷೆ ಹಾಗೂ ಇಂಗ್ಲೀಷ್ ಕಲಿಯುವ ಅವಕಾಶವಿದೆ. ತ್ರಿಭಾಷಾ ಸೂತ್ರ ಇಲ್ಲ. ರಾಜ್ಯದಲ್ಲಿ ಕನ್ನಡ ಮತ್ತು ಇಂಗ್ಲೀಷ್ ಮಾತ್ರ ಕಲಿಸುತ್ತೇವೆ ಎಂದರು.
ಇದನ್ನೂ ಓದಿ:- ಏಪ್ರಿಲ್.24ರಂದು ಮಹದೇಶ್ವರ ಬೆಟ್ಟದಲ್ಲಿ ಕ್ಯಾಬಿನೆಟ್ ಮೀಟಿಂಗ್: 2 ಸಾವಿರ ಪೊಲೀಸರ ನಿಯೋಜನೆ
ಇನ್ನು ವಿಂಗ್ ಕಮಾಂಡರ್‌ನಿಂದ ಬೈಕ್ ಸವಾರನ ಮೇಲೆ ಹಲ್ಲೆ ಆಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಯಾರೇ ತಪ್ಪು ಮಾಡಿದರೂ ಕ್ರಮ ಕೈಗೊಳ್ಳಲಾಗುತ್ತದೆ. ಈ ಬಗ್ಗೆ ತನಿಖೆ ಆಗುತ್ತದೆ ಎಂದರು.





