ಮಂಡ್ಯ

ಅವಾಚ್ಯ ಪದ ಬಳಸಿದ್ದು ಸುಳ್ಳಾಗಿದ್ದರೆ ಅರೆಸ್ಟ್ ಆಗ್ತಿತ್ತಾ ? ಸಿ.ಟಿ ರವಿ ಬಂಧನಕ್ಕೆ ಸಿಎಂ ಪ್ರತಿಕ್ರಿಯೆ

 

ಮಂಡ್ಯ: ಸಾಮಾನ್ಯವಾಗಿ ಯಾವ ಹೆಣ್ಣುಮಕ್ಕಳೂ ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡಲು ಸಾಧ್ಯವಿಲ್ಲ. ಅವಾಚ್ಯ ಪದ ಬಳಕೆ ಆರೋಪ ಸುಳ್ಳಾಗಿದ್ದರೆ ಸಿ.ಟಿ.ರವಿಯವರ ಬಂಧನವೇಕಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು.

ಅವರು ಇಂದು ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿ ಸಿ.ಟಿ.ರವಿಯವರನ್ನು ಬೆಂಬಲಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವುದರ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.

ಹೆಣ್ಣುಮಕ್ಕಳಿಗೆ ಇಷ್ಟು ಕೆಟ್ಟ ಭಾಷೆಯಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಬಿಜೆಪಿಯವರು ಬೆಂಬಲಿಸುತ್ತಿದ್ದಾರೆ. ಸಿ.ಟಿ.ರವಿಯವರು ಕೀಳುಭಾಷೆ ಬಳಸಿದ್ದನ್ನು ಸ್ಥಳದಲ್ಲಿದ್ದವರು ಕೇಳಿಸಿಕೊಂಡಿದ್ದಾರೆ. ಅಷ್ಟು ಕೆಟ್ಟ ಮಾತು ಆಡಿರುವುದಕ್ಕೆ ಸಾಕ್ಷಿಯಾದ ಆಡಿಯೊ, ವಿಡಿಯೊ ಇದೆ ಎಂದು ಹೇಳಿದ್ದಾರೆ. ಆದರೆ ನಾನು ಅದನ್ನು ನೋಡಿಲ್ಲ. ರವಿ ಹೇಳಿದ್ದು ಸುಳ್ಳಾದರೆ, ಅವರ ಬಂಧನವೇಕಾಯಿತು ? ಸಾಮಾನ್ಯವಾಗಿ ಇಂತಹ ಆರೋಪಗಳ ಬಗ್ಗೆ ಹೆಣ್ಣುಮಕ್ಕಳು ಸುಳ್ಳು ದೂರು ಕೊಡುವುದಿಲ್ಲ. ಸಿ.ಟಿ.ಯವರು ಅವಾಚ್ಯ ಪದ ಏಕೆ ಬಳಸಿದರೆಂದು ನನಗೆ ತಿಳಿದಿಲ್ಲ. ಇದೊಂದು ಕ್ರಿಮಿನಲ್ ಅಪರಾಧ ಎಂದರು.

ಪದಬಳಕೆಯಾಗಿರುವುದು ಸತ್ಯ

ಸಭಾಪತಿ ಬಸವರಾಜ ಹೊರಟ್ಟಿಯವರು , ಸಿಟಿ ರವಿಯವರು ಪ್ರಸ್ಟ್ರೇಷನ್ ಎಂಬ ಪದ ಬಳಸಿದ್ದಾರೆಂದು ತಿಳಿಸಿರುವ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಸಿ.ಟಿ.ರವಿಯವರು ತಾನು ‘ಪ್ರಸ್ಟ್ರೇಷನ್’ ಪದ ಬಳಸಿರುವುದಾಗಿ ತಿಳಿಸಿದ್ದಾರೆ. ಇದು after thought ಮಾತು. ಈಗ ಆ ರೀತಿ ಹೇಳುತ್ತಿದ್ದಾರೆ. ಆದರೆ ಅವಾಚ್ಯ ಪದ ಬಳಸಿರುವುದು ನಿಜವಾಗಿರುವುದಕ್ಕೇ ಸಚಿವರು ದೂರು ನೀಡಿದ್ದಾರೆ ಎಂದರು.

ರವಿ ಆಡಿದ ಕೆಟ್ಟ ಮಾತನ್ನು ಕೇಳಿರುವುದಾಗಿ ಇತರ ಸದಸ್ಯರೂ ಹೇಳಿದ್ದಾರೆ. ಸಭಾಪತಿಯವರು ಪೀಠದಿಂದ ಹೊರನಡೆದ ನಂತರ ನಡೆದಿರುವ ಘಟನೆ ಬಗ್ಗೆ ಆಡಿಯೋ ಮತ್ತು ವಿಡಿಯೋ ಇದೆ ಎಂದೂ ಹಲವರು ಹೇಳುತ್ತಿದ್ದು , ಪದಬಳಕೆಯಾಗಿರುವುದು ಸತ್ಯ ಎಂದರು.

ಕಾನೂನಿನ ಕ್ರಮ ಜರುಗಿಸಲೇಬೇಕಾಗುತ್ತದೆ

ಸಿಟಿ ರವಿಯವರು ತನಗೆ ಜೀವಬೆದರಿಕೆಯಿದ್ದು, ಅದಕ್ಕೆ ಸರ್ಕಾರವೇ ಹೊಣೆ ಎಂದು ಹೇಳಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಎಫ್ ಐ ಆರ್ ದಾಖಲಾದ ಮೇಲೆ ಪೊಲೀಸರು ತನಿಖೆ ನಡೆಸಲೇಬೇಕಾಗುತ್ತದೆ. ಕಾನೂನಿನ ಕ್ರಮ ಮಾಡಲೇಬೇಕಾಗುತ್ತದೆ. ಸಿ.ಟಿ.ರವಿ ವಿರುದ್ಧ ಆಕ್ರೋಶಗೊಂಡಿದ್ದ ಜನರು ಬೆಳಗಾವಿಯಲ್ಲಿದ್ದ ಕಾರಣದಿಂದ ಸಿ.ಟಿ.ರವಿಯವರನ್ನು ರಕ್ಷಿಸಲು ಖಾನಾಪುರಕ್ಕೆ ಅವರನ್ನು ಕರೆತರಲಾಗಿತ್ತು ಎಂದರು.

ಮಂಡ್ಯ ಅಪ್ಪಟ ಕನ್ನಡದ ನೆಲ

ಮಂಡ್ಯದಲ್ಲಿ ನಡೆಯುತ್ತಿರುವ 87 ನೇ ಅಖಿಲ ಭಾರತ ಸಾಹಿತ್ಯ ಸಮ್ಮೆಳನದ ಉದ್್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು ಆಗಮಿಸಿದ್ದೇನೆ. ಅಪ್ಪಟ ಕನ್ನಡ ನೆಲ ಮಂಡ್ಯ. ಮಂಡ್ಯಕ್ಕೆ ಬರುವ ಪರಭಾಷಿಕರು ಸಹ ಕನ್ನಡವನ್ನು ಕಲಿಯುತ್ತಾರೆ. ಕನ್ನಡ ನಾಡಿನ ಭಾಷೆ ,ರಾಜ್ಯಭಾಷೆ ಆಗಿದೆ ಎಂದರು.

andolana

Recent Posts

ಕೊಲ್ಕತ್ತಾದಲ್ಲಿ ಮೆಸ್ಸಿ ಮೇನಿಯಾ : ಫುಟ್‌ಬಾಲ್‌ ದಂತಕಥೆಗೆ ಭರ್ಜರಿ ಸ್ವಾಗತ

ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…

15 mins ago

ಟ್ರಂಪ್‌ ಸುಂಕ ಹೇರಿದ್ದ ರದ್ದಿಗೆ ಅಮೆರಿಕ ಸಂಸತ್ತು ನಿಲುವಳಿ

ನ್ಯೂಯಾರ್ಕ್‌ : ಭಾರತದ ಮೇಲೆ ಡೊನಾಲ್ಡ್‌ ಟ್ರಂಪ್‌ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…

1 hour ago

ಘೋರ ದುರಂತ | ಕರ್ತವ್ಯ ನಿರತ KSRTC ಮೇಲೆ ಹರಿದ ಲಾರಿ ; ಸ್ಥಳದಲ್ಲೇ ಸಾವು

ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…

1 hour ago

ಹವಾಮಾನ ಏರುಪೇರಿನಿಂದಾಗಿ ಕಾಳುಮೆಣಸಿಗೂ ಕಂಟಕ

ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್‌ ಡಿಸೋಜ ಮಡಿಕೇರಿ: ಈ ಬಾರಿಯ…

3 hours ago

ಅವಳಿ ತಾಲ್ಲೂಕುಗಳಲ್ಲಿ ಭತ್ತದ ಕಟಾವು ಜೋರು

ಭೇರ್ಯ ಮಹೇಶ್‌ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…

4 hours ago

ಗಬ್ಬೆದ್ದು ನಾರುತ್ತಿರುವ ಚರಂಡಿಗಳು, ಸಾಂಕ್ರಾಮಿಕ ರೋಗದ ಭೀತಿ

ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…

4 hours ago