ಮಂಡ್ಯ

ಕಮಲ-ದಳ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು,ಸ್ವಂತ ಶಕ್ತಿಯಿಂದ ಸಾಧ್ಯವೇ ಇಲ್ಲ : ಸಿ.ಎಂ ವ್ಯಂಗ್ಯ

ಮಂಡ್ಯ (ಕೆ.ಆರ್‌.ಎಸ್)‌ : ಬಿಜೆಪಿ ಆಪರೇಷ್‌ ಮಾಡಿ ಅಧಿಕಾರಕ್ಕೆ ಬಂತು. ಜೆಡಿಎಸ್‌ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕಿಹೊಂಡೇ ಅಧಿಕಾರಕ್ಕೆ ಬರಬೇಕು. ಸ್ವಂತ ಶಕ್ತಿಯಿಂದ ಸಾಧ್ಯವೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ, ಜೆಡಿಎಸ್‌ ಕುರಿತು ವ್ಯಂಗ್ಯವಾಡಿದರು.

ಕೃಷ್ಣರಾಜಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸುಳ್ಳು ಹೇಳುವ ಚಾಳಿಯಲ್ಲಿರುವ ಬಿಜೆಪಿ ಗೆ ರಾಜ್ಯದ ಜನ ಪೂರ್ಣ ಅಧಿಕಾರವನ್ನೇ ಕೊಟ್ಟಿಲ್ಲ. ಆಪರೇಷನ್ ಕಮಲ ಮಾಡಿ ಎರಡು ಬಾರಿ ಅಧಿಕಾರಕ್ಕೆ ಬಂದರು. ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕಿಕೊಂಡೇ ಅಧಿಕಾರಕ್ಕೆ ಬರಬೇಕು. ಸ್ವಂತ ಶಕ್ತಿಯಿಂದ ಸಾಧ್ಯವೇ ಇಲ್ಲ ಎಂದರು.

ನಾನು ಸುಳ್ಳು ಹೇಳಿದ್ರೆ ಜನರಿಗೆ ಗೊತ್ತಾಗಲ್ವಾ ? ಅದಕ್ಕೇ ಬಿಜೆಪಿ, ಜೆಡಿಎಸ್ ನವರು ಜನರನ್ನು ದಡ್ಡರೆಂದು ಭಾವಿಸಬಾರದು. ಜನರಿಗೆ ಸುಳ್ಳು ಹೇಳಿ ಹೋಗಬಾರದು ಎಂದರು.

ತಾಯಿ ಕಾವೇರಿಗೆ ಪೂಜೆ ಮಾಡಿ ನಾಡಿನ ಮಳೆ, ಬೆಳೆ ಹೀಗೇ ಚನ್ನಾಗಿ ಆಗಲಿ ಎಂದು ಪ್ರಾರ್ಥಿಸಿದ್ದೇನೆ ಎಂದರು.

ನಾವು ಅಧಿಕಾರದಲ್ಲಿದ್ದಾಗ ಯಾವಾಗಲಾದರೂ ರೈತರಿಗೆ ಬೀಜ, ಗೊಬ್ಬರಕ್ಕೆ ತೊಂದರೆ ಮಾಡಿದ್ದೇವಾ? ಬೀಜ ಕೇಳಿದವರಿಗೆ ಗೋಲಿಬಾರ್ ಮಾಡಿದ್ದೇವಾ ಎಂದು ಪ್ರಶ್ನಿಸಿದರು.

ಕಾವೇರಿ ತಾಯಿ, ಚಾಮುಂಡೇಶ್ವರಿ ಕೃಪಾಕಟಾಕ್ಷದಿಂದ ರಾಜ್ಯ ಸುಭಿಕ್ಷವಾಗಿದೆ. ಎಲ್ಲಾ ಜಲಾಶಯಗಳೂ ತುಂಬಿವೆ. ಎಲ್ಲಾ ನಾಲೆಗಳಿಗೂ ತಕ್ಷಣದಿಂದ ನೀರು ಹರಿಸಲು ವೇದಿಕೆಯಿಂದಲೇ ಆದೇಶ ನೀಡಿದರು.

ಆಂದೋಲನ ಡೆಸ್ಕ್

Recent Posts

ಹುಬ್ಬೆ ಹುಣಸೆ ಜಲಾಶಯಕ್ಕೂ ಕಾವೇರಿ ನೀರು : ಶಾಸಕ ಮಂಜುನಾಥ್‌ ಭರವಸೆ

ಹನೂರು : ವಿಧಾನಸಭಾ ಕ್ಷೇತ್ರದ ಪ್ರಮುಖ ಜಲಾಶಯಗಳ ಪೈಕಿ ರಾಮನ ಗುಡ್ಡ ಜಲಾಶಯಕ್ಕೆ ಕಳೆದ ಎರಡು ತಿಂಗಳ ಹಿಂದೆ ಕಾವೇರಿ…

26 mins ago

ಕತಾರ್‌ನಲ್ಲಿ ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್‌ ಪತನ: 6 ಜನರು ಸಾವು

ಕೈರೋ: ತಾಂತ್ರಿಕ ದೋಷದಿಂದಾಗಿ ಕತಾರ್‌ ಹೆಲಿಕಾಪ್ಟರ್‌ ಅಪಘಾತವಾಗಿ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಸಚಿವಾಲಯ ಹೇಳಿದೆ. ಕತಾರ್‌ನ ಪ್ರಾದೇಶಿಕ ನೀರಿನಲ್ಲಿ…

1 hour ago

ಬೆಂಗಳೂರಿಗೆ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಬೆಂಗಳೂರಿಗೆ ಕುಡಿಯುವ ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ನಿವಾರಿಸಲು ತಮ್ಮ ಸರ್ಕಾರ ಕ್ರಮ ಕೈಗೊಂಡಿದ್ದು, 6ನೇ ಹಂತದ ಕಾವೇರಿ ನೀರು…

1 hour ago

ನಿಮ್ಮ ಸುಪ್ರೀಂ ಲೀಡರ್‌ ಬದುಕಿದ್ದಾರಾ?: ಅಮೇರಿಕಾ ಪ್ರಶ್ನೆ

ವಾಷಿಂಗ್ಟನ್:‌ ಸಾರ್ವಜನಿಕವಾಗಿ ಕಾಣಿಸಿಕೊಳ್ಳದ ಇರಾನ್‌ನ ನೂತನ ಸುಪ್ರೀಂ ಲೀಡರ್‌ ಮೊಜ್ತಾಬಾ ಖಮೇನಿ ಎಲ್ಲಿದ್ದಾರೆ? ಬದುಕಿದ್ದಾರಾ? ಎಂದು ಅಮೇರಿಕಾ ಪ್ರಶ್ನೆ ಮಾಡಿದೆ.…

2 hours ago

ಡಿಜಿಪಿ ರಾಮಚಂದ್ರರಾವ್‌ ರಾಸಲೀಲೆ ಪ್ರಕರಣ: ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಡಿಜಿಪಿ ರಾಮಚಂದ್ರ ರಾವ್ ಅವರ ರಾಸಲೀಲೆಯ ವಿಡಿಯೋ ಆಧಾರದ ಮೇಲೆ ಇಲಾಖಾ ತನಿಖೆ ನಡೆಯಲಿದ್ದು, ವರದಿ ನಂತರ ಸೂಕ್ತಕ್ರಮ…

2 hours ago

ರಸ್ತೆ ಕಾಮಗಾರಿ ಪರಿಶೀಲನೆ ನಡೆಸಿದ ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಪಟ್ಟಣದಿಂದ ಬಂಡಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿ ಪ್ರಗತಿಯಲ್ಲಿರುವುದರಿಂದ…

2 hours ago