Siddaramaiah says BJP and JDS should form a coalition government
ಮಂಡ್ಯ (ಕೆ.ಆರ್.ಎಸ್) : ಬಿಜೆಪಿ ಆಪರೇಷ್ ಮಾಡಿ ಅಧಿಕಾರಕ್ಕೆ ಬಂತು. ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕಿಹೊಂಡೇ ಅಧಿಕಾರಕ್ಕೆ ಬರಬೇಕು. ಸ್ವಂತ ಶಕ್ತಿಯಿಂದ ಸಾಧ್ಯವೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ, ಜೆಡಿಎಸ್ ಕುರಿತು ವ್ಯಂಗ್ಯವಾಡಿದರು.
ಕೃಷ್ಣರಾಜಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸುಳ್ಳು ಹೇಳುವ ಚಾಳಿಯಲ್ಲಿರುವ ಬಿಜೆಪಿ ಗೆ ರಾಜ್ಯದ ಜನ ಪೂರ್ಣ ಅಧಿಕಾರವನ್ನೇ ಕೊಟ್ಟಿಲ್ಲ. ಆಪರೇಷನ್ ಕಮಲ ಮಾಡಿ ಎರಡು ಬಾರಿ ಅಧಿಕಾರಕ್ಕೆ ಬಂದರು. ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕಿಕೊಂಡೇ ಅಧಿಕಾರಕ್ಕೆ ಬರಬೇಕು. ಸ್ವಂತ ಶಕ್ತಿಯಿಂದ ಸಾಧ್ಯವೇ ಇಲ್ಲ ಎಂದರು.
ನಾನು ಸುಳ್ಳು ಹೇಳಿದ್ರೆ ಜನರಿಗೆ ಗೊತ್ತಾಗಲ್ವಾ ? ಅದಕ್ಕೇ ಬಿಜೆಪಿ, ಜೆಡಿಎಸ್ ನವರು ಜನರನ್ನು ದಡ್ಡರೆಂದು ಭಾವಿಸಬಾರದು. ಜನರಿಗೆ ಸುಳ್ಳು ಹೇಳಿ ಹೋಗಬಾರದು ಎಂದರು.
ತಾಯಿ ಕಾವೇರಿಗೆ ಪೂಜೆ ಮಾಡಿ ನಾಡಿನ ಮಳೆ, ಬೆಳೆ ಹೀಗೇ ಚನ್ನಾಗಿ ಆಗಲಿ ಎಂದು ಪ್ರಾರ್ಥಿಸಿದ್ದೇನೆ ಎಂದರು.
ನಾವು ಅಧಿಕಾರದಲ್ಲಿದ್ದಾಗ ಯಾವಾಗಲಾದರೂ ರೈತರಿಗೆ ಬೀಜ, ಗೊಬ್ಬರಕ್ಕೆ ತೊಂದರೆ ಮಾಡಿದ್ದೇವಾ? ಬೀಜ ಕೇಳಿದವರಿಗೆ ಗೋಲಿಬಾರ್ ಮಾಡಿದ್ದೇವಾ ಎಂದು ಪ್ರಶ್ನಿಸಿದರು.
ಕಾವೇರಿ ತಾಯಿ, ಚಾಮುಂಡೇಶ್ವರಿ ಕೃಪಾಕಟಾಕ್ಷದಿಂದ ರಾಜ್ಯ ಸುಭಿಕ್ಷವಾಗಿದೆ. ಎಲ್ಲಾ ಜಲಾಶಯಗಳೂ ತುಂಬಿವೆ. ಎಲ್ಲಾ ನಾಲೆಗಳಿಗೂ ತಕ್ಷಣದಿಂದ ನೀರು ಹರಿಸಲು ವೇದಿಕೆಯಿಂದಲೇ ಆದೇಶ ನೀಡಿದರು.
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…
ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಕಾರಣ, ರಾಜ್ಯದಲ್ಲಿ ತೀವ್ರ ಸ್ವರೂಪದ ಬರ ಕಾಣಿಸಿಕೊಂಡಿದೆ. ರಾಜ್ಯ ಸರ್ಕಾರ ಈಗಾಗಲೇ ಸುಮಾರು ೧೭೦…
ತಮ್ಮ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದ ಮಹಾತ್ಮಗಾಂಧಿಯವರನ್ನುಬ್ರಿಟಿಷರು ಬಂಧಿಸಲಿಲ್ಲ . ಏಕೆಂದರೆ ಗಾಂಧಿಜಿ ಯವರು ನ್ಯಾಯಯುತವಾಗಿ ಅಹಿಂಸಾ ತ್ಮಕವಾಗಿ ಸ್ವಾತಂತ್ರ್ಯ ಕೇಳುತ್ತಿದ್ದರು,…
ವಸಂತಕುಮಾರ್ ಮೈಸೂರಮಠ್, ಪರಿಸರವಾದಿ ಮತ್ತು ಸಾಮಾಜಿಕ ಕಾರ್ಯಕರ್ತ, ಮೈಸೂರು ಹೊರೆಯನ್ನು ಕಡಿಮೆ ಮಾಡಲು ಪರ್ಯಾಯ ಮಾರ್ಗವಿಲ್ಲವೇ? ಮೈಸೂರಿನ ಮಹಾನ್ ಯದುಕುಲ…
ಕೆ.ಬಿ.ರಮೇಶ ನಾಯಕ ಮೈಸೂರು: ಐದು ವರ್ಷಗಳಿಗೂ ಹೆಚ್ಚು ಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದ ಜಿಪಂ, ತಾಪಂ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಸಲು…