ಮದ್ದೂರು: ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜುಲೈ. 28 ರಂದು ನೆರವೇರಿಸಲಿದ್ದು, ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಿ ಎಂದು ಮದ್ದೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಂ.ಉದಯ್ ಅವರು ಸೂಚನೆ ನೀಡಿದರು.
ಶಾಸಕ ಉದಯ್ ಅವರಿಂದು ಪ್ರವಾಸಿ ಮಂದಿರದಲ್ಲಿ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕ್ರಮ ಅಚ್ಚುಕಟ್ಟಾಗಿ ಯಾವುದೇ ಲೋಪವಿಲ್ಲದೇ ಆಯೋಜಿಸಲು ಶಿಷ್ಟಾಚಾರ, ಆಹಾರ, ವಸ್ತುಪ್ರದರ್ಶನ, ಕುಡಿಯುವ ನೀರು ಹಾಗೂ ಸ್ವಚ್ಛತೆ, ಭದ್ರತೆ, ವೇದಿಕೆ ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಅಧಿಕಾರಿಗಳು ತಮಗೆ ವಹಿಸಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಎಂದರು.
ಅಂದಾಜು 1400 ಕೋಟಿ ವೆಚ್ಚದ 75 ಕಾಮಗಾರಿಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ನಡೆಯಲಿದ್ದು, ಸಾರ್ವಜನಿಕರಿಗೆ ಉಪಯುಕ್ತವಾಗುವ 1400 ಕೋಟಿ ರೂ ವೆಚ್ಚದಲ್ಲಿ ಹಲವಾರು ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ.
ಲೋಕೋಯೋಗಿ ಇಲಾಖೆಯ 81 ಕೋಟಿ ರೂ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ 12 ಕೋಟಿ ರೂ, ಕಾವೇರಿ ನೀರಾವರಿ ನಿಗಮ 300 ಕೋಟಿ ರೂ ಸೇರಿದಂತೆ ವಿವಿಧ ಇಲಾಖೆ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ/ ಶಂಕುಸ್ಥಾಪನೆ ನಡೆಯಲಿದೆ ಎಂದರು.





