ಮಂಡ್ಯ

ಜುಲೈ. 28ರಂದು ಸಿದ್ದರಾಮಯ್ಯರಿಂದ ವಿವಿಧ ಕಾಮಗಾರಿ ಉದ್ಘಾಟನೆ: ಅಗತ್ಯ ಸಿದ್ಧತೆಗೆ ಶಾಸಕ ಕೆ.ಎಂ.ಉದಯ್‌ ಸೂಚನೆ

ಮದ್ದೂರು: ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜುಲೈ. 28 ರಂದು ನೆರವೇರಿಸಲಿದ್ದು, ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಿ ಎಂದು ಮದ್ದೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಂ.ಉದಯ್ ಅವರು ಸೂಚನೆ ನೀಡಿದರು.

ಶಾಸಕ ಉದಯ್‌ ಅವರಿಂದು ಪ್ರವಾಸಿ ಮಂದಿರದಲ್ಲಿ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕ್ರಮ ಅಚ್ಚುಕಟ್ಟಾಗಿ ಯಾವುದೇ ಲೋಪವಿಲ್ಲದೇ ಆಯೋಜಿಸಲು ಶಿಷ್ಟಾಚಾರ, ಆಹಾರ, ವಸ್ತುಪ್ರದರ್ಶನ, ಕುಡಿಯುವ ನೀರು ಹಾಗೂ ಸ್ವಚ್ಛತೆ, ಭದ್ರತೆ, ವೇದಿಕೆ ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಅಧಿಕಾರಿಗಳು ತಮಗೆ ವಹಿಸಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಎಂದರು.

ಅಂದಾಜು‌ 1400 ಕೋಟಿ ವೆಚ್ಚದ 75 ಕಾಮಗಾರಿಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ನಡೆಯಲಿದ್ದು, ಸಾರ್ವಜನಿಕರಿಗೆ ಉಪಯುಕ್ತವಾಗುವ 1400 ಕೋಟಿ ರೂ ವೆಚ್ಚದಲ್ಲಿ ಹಲವಾರು ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ.

ಲೋಕೋಯೋಗಿ ಇಲಾಖೆಯ 81 ಕೋಟಿ ರೂ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ 12 ಕೋಟಿ ರೂ, ಕಾವೇರಿ ನೀರಾವರಿ ನಿಗಮ 300 ಕೋಟಿ ರೂ ಸೇರಿದಂತೆ ವಿವಿಧ ಇಲಾಖೆ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ/ ಶಂಕುಸ್ಥಾಪನೆ ನಡೆಯಲಿದೆ ಎಂದರು‌.

ಆಂದೋಲನ ಡೆಸ್ಕ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

3 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

4 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

6 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

7 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

8 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

8 hours ago