ಮಂಡ್ಯ: ಐದು ವರ್ಷಗಳ ಕಾಲ ಸಿದ್ದರಾಮಯ್ಯನವರೇ ಸಿಎಂ ಆಗಿ ಇರುತ್ತಾರೆ. ಯಾವ ಕ್ರಾಂತಿಯೂ ಆಗಲ್ಲ ಎಂದು ಸಚಿವ ಜಮೀರ್ ಅಹಮ್ಮದ್ ಖಾನ್ ಹೇಳಿದ್ದಾರೆ.
ಈ ಕುರಿತು ಮಂಡ್ಯದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರೇ ಐದು ವರ್ಷ ಸಿಎಂ ಆಗಿ ಇರಲಿದ್ದಾರೆ. ಇದನ್ನು ನಾನು ಹೇಳುತ್ತಿಲ್ಲ. ಸ್ವತಃ ಡಿಕೆಶಿ ಅವರೇ ಹೇಳಿದ್ದಾರೆ. ಹಾಗಾಗಿ ಸಿಎಂ ಬದಲಾವಣೆ, ಅಧಿಕಾರ ಹಂಚಿಕೆಯ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.
ಇನ್ನು ನವೆಂಬರ್‌ನಲ್ಲಿ ಕ್ರಾಂತಿ ಎಂಬ ಆರ್.ಅಶೋಕ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಯಾವ ಕ್ರಾಂತಿಯೂ ಆಗಲಲ್. ಅಶೋಕ್ ಹೇಳಿದ್ದು ಇದುವರೆಗೂ ಯಾವುದೂ ನಡೆದಿಲ್ಲ. ಸುಮ್ಮನೇ ಹೇಳಬೇಕೆಂದು ಹೇಳುತ್ತಿದ್ದಾರೆ ಎಂದು ಕಿಡಿಕಾರಿದರು.
ಇದನ್ನೂ ಓದಿ:-ಜಾತಿ ಕಾಲಂನಲ್ಲಿ ಒಕ್ಕಲಿಗ ಎಂದೇ ಬರೆಸಿ: ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಕರೆ
ಇನ್ನು ಮುಂದುವರಿದು ಮಾತನಾಡಿದ ಅವರು, 2028ರಲ್ಲಿಯೂ ನಾವೇ ಅಧಿಕಾರಕ್ಕೆ ಬರುತ್ತೇವೆ. ಬಿಜೆಪಿ ಅಧಿಕಾರಕ್ಕೆ ಬರಲು ಕರ್ನಾಟಕದಲ್ಲಿ ಇನ್ನೂ 15 ವರ್ಷ ಕಾಯಬೇಕು. ಸರ್ಕಾರ ಆಡಳಿತ ಚನ್ನಾಗಿ ನಡೆಸುತ್ತಿದೆ. ಯಾವ ಗೊಂದಲವೂ ಇಲ್ಲ. ಡಿಕೆಶಿ ಕೂಡ ಸಿಎಂ ಆಗಬೇಕು. ಆದರೆ ಸಿಎಂ ಕುರ್ಚಿ ಸದ್ಯಕ್ಕೆ ಖಾಲಿಯಿಲ್ಲ. ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಎಂದು ಡಿಕೆಶಿ ಅವರೇ ಹೇಳಿದ್ದಾರೆ. ಹಾಗಾಗಿ ಯಾವುದೇ ಗೊಂದಲವಿಲ್ಲ ಎಂದು ಹೇಳಿದರು.





