ಮಂಡ್ಯ : ಸಿದ್ದರಾಮಯ್ಯ ಅವರನ್ನ ನೇರವಾಗಿ ಕಾಂಗ್ರೆಸ್ ಪಕ್ಷ ಸಿಎಂ ಮಾಡಿಲ್ಲ. ಪ್ರತಿ ಶಾಸಕರಿಂದ ಅಭಿಪ್ರಾಯ ಸಂಗ್ರಹಿಸಿ ಅವರನ್ನು ಸಿಎಂ ಮಾಡಿದ್ದಾರೆ ಎಂದು ಮಳವಳ್ಳಿ ಶಾಸಕ ನರೇಂದ್ರಸ್ವಾಮಿ ಹೇಳಿದ್ದಾರೆ.
ಮಳವಳ್ಳಿಯಲ್ಲಿ ಈ ಕುರಿತು ಮಾತನಾಡಿದ ಅವರು, ಈಗಲೂ ನಮ್ಮ ಪಕ್ಷ ಶಾಸಕರ ಬಹುಮತದ ಅಭಿಪ್ರಾಯಕ್ಕೆ ಬದ್ಧವಾಗಿದೆ. ೨೦೧೩ ರಲ್ಲೂ ವೋಟಿಂಗ್ ಮಾಡಿ ಸಿದ್ದರಾಮಯ್ಯ ಅವರನ್ನ ಸಿಎಂ ಮಾಡಲಾಯ್ತು. ಇದು ನಮ್ಮ ಪಕ್ಷದ ಇಂಟರ್ನಲ್ ಡೆಮಾಕ್ರಸಿ. ಈಗಲೂ ನಮ್ಮ ಕಾಂಗ್ರೆಸ್ ಪಕ್ಷ ಈ ಡೆಮಾಕ್ರಸಿಗೆ ಬದ್ಧವಾಗಿದೆ ಎಂದರು.
ಅಲ್ಲದೆ ಪಕ್ಷದ ಭವಿಷ್ಯದ ದೃಷ್ಠಿಯಿಂದ ಸಮಯ ಸಂದರ್ಭ ನೋಡಿ ಬೇರೆಯವರಿಗೆ ಅವಕಾಶವನ್ನು ಮಾಡಿಕೊಡಲಾಗುತ್ತದೆ. ಯಾರನ್ನೋ ಓಲೈಕೆಗೆ ಹಾಗೂ ಹೊಗಳಿಕೆಗೆ ಸಿಎಂ ಬದಲಾವಣೆ ವಿಚಾರವನ್ನು ಮಾತನಾಡಬಾರದು. ಮೊದಲನೇ ಬಾರಿ ಆಯ್ಕೆಯಾದ ಶಾಸಕರು ಬಹಳ ಹಾರಾಡುತ್ತಿದ್ದಾರೆ. ಈ ರೀತಿ ಬಹಿರಂಗವಾಗಿ ಮಾತನಾಡದೇ ಪಕ್ಷದ ಚೌಕಟ್ಟಿನಲ್ಲಿ ಮಾತನಾಡಬೇಕು. ಮಂಡ್ಯದಲ್ಲಿ ಅತೀಹೆಚ್ಚು ಕಾಲ ಕಾಂಗ್ರೆಸ್ ಕಟ್ಟಿದವನು ನಾನು. ನಾನೇ ನನಗೆ ಅನ್ಯಾಯ ಆಯ್ತು ಅಂತ ಬೀದಿಯಲ್ಲಿ ಮಾತನಾಡೋಕೆ ಆಗುತ್ತಾ..? ಪಕ್ಷದ ತೀರ್ಮಾನಗಳನ್ನ ತಲೆಬಾಗಿ ಒಪ್ಪುತ್ತೇನೆ ಅದರಂತೆ ಎಲ್ಲರು ಮಾಡಬೇಕು ಎಂದು ಹೇಳಿದರು .
ಮಂಡ್ಯ: 88ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನು ಬಳ್ಳಾರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ. ಈ ಮೂಲಕ 66ವರ್ಷದ ಬಳಿಕ ಗಣಿನಾಡಿಗೆ ನುಡಿತೇರು…
ಬೆಳಗಾವಿ: ಚಳಿಗಾಳದ ಅಧಿವೇಶನ ಸಂದರ್ಭದಲ್ಲಿ ಪಂಚಮಶಾಲಿಗಳು ತಮ್ಮ ಮೀಸಲಾತಿಗಾಗಿ ಸುವರ್ಣ ಸೌಧದ ಹತ್ತಿರ ಹೋರಾಟ ಮಾಡುವಾಗ ಪೊಲೀಸರು ಲಾಠಿ ಚಾರ್ಜ್…
ಕಲಬುರ್ಗಿ: ನಗರದ ಏಳು ಎಕರೆ ಪ್ರದೇಶದಲ್ಲಿ ನೂತನವಾಗಿ ನಿರ್ಮಿಸಿರುವ ಜಯದೇವ ಹೃದ್ರೋಗ ವಿಜ್ಞಾನ ಹಾಗೂ ಸಂಶೋಧನಾ ಸಂಸ್ಥೆಯ ಕಟ್ಟಡವನ್ನು ಇಂದು…
ಮಂಡ್ಯ: ವಿದೇಶದಲ್ಲಿ 40 ಲಕ್ಷಕ್ಕೂ ಅಧಿಕ ಕನ್ನಡಿಗರಿದ್ದು ಅವರಲ್ಲಿ 5 ಲಕ್ಷಕ್ಕೂ ಅಧಿಕ ಕನ್ನಡಿಗರು ಅಮೆರಿಕಾದಲ್ಲೇ ಇದ್ದಾರೆ. ಅಕ್ಕ ಸಮೇಳನದ…
ಬೆಂಗಳೂರು: ಕಾಂಗ್ರೆಸ್ ಸರ್ಕಾರದಿಂದ ಕನ್ನಡದ ಉದ್ಧಾರ ಸಾಧ್ಯವೇ ಇಲ್ಲ, ಕನ್ನಡ ಶಾಲೆಗಳ ಅಸ್ತಿತ್ವ ಉಳಿಯುವ ಭರವಸೆ ಇಲ್ಲ ಎಂದು ಬಿಜೆಪಿ…
ಮಂಡ್ಯ: ರಾಷ್ಟ್ರದ ಜಿಡಿಪಿಯಲ್ಲಿ ಕೃಷಿ ಪಾಲು ಶೇ.೨೦ ರಷ್ಟು ಇದ್ದು, ಶೇ.೬೦ ರಷ್ಟು ಜನರು ಕೃಷಿ ಅವಲಂಭಿಸಿದ್ದಾರೆ. ಆದ್ದರಿಂದ ರಾಷ್ರ್ಟದ…