ಮಂಡ್ಯ

ಸಾಮಾಜಿಕ ಬಹಿಷ್ಕಾರ : ಶಿಕ್ಷೆ ಪ್ರಮಾಣ 7 ವರ್ಷಕ್ಕೆ ಹೆಚ್ಚಿಸಲು ಆಗ್ರಹ

ಮಂಡ್ಯ : ಸಾಮಾಜಿಕ ಬಹಿಷ್ಕಾರ ನಿಷೇಧ ವಿಧೇಯಕದಡಿ ಶಿಕ್ಷೆ ಪ್ರಮಾಣ 7 ವರ್ಷಕ್ಕೆ ಹೆಚ್ಚಿಸಬೇಕು. ಎಸ್ಸಿ, ಎಸ್ಟಿ ಸಮುದಾಯ ಪ್ರತಿ ಕುಟುಂಬಕ್ಕೆ ತಲಾ 25 ಲಕ್ಷ ರೂ.ವಿಶೇಷ ಅನುದಾನ ಮೀಸಲಿಡಲು ಸರ್ಕಾರ ಮುಂದಾಗಬೇಕು ಎಂದು ದಸಂಸ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ ಆಗ್ರಹಿಸಿದರು.

ವಿವಿಧ ಕಾರಣಗಳಿಗೆ ಗುರಿಯಾಗಿರಿಸಿಕೊಂಡು ಸಮಾಜದಿಂದ ಹಾಗೂ ಹಳ್ಳಿಗಳಿಂದ ಬಹಿಷ್ಕರಿಸುವ ಪದ್ಧತಿ ಅಪರಾಧ ಎಂದು ರಾಜ್ಯ ಸರ್ಕಾರ ಬೆಳಗಾವಿ ಅಧಿವೇಶನದಲ್ಲಿ ಕರ್ನಾಟಕ ಸಾಮಾಜಿಕ ಬಹಿಷ್ಕಾರ ವಿಧೇಯಕ ಜಾರಿ ಮಾಡುತ್ತಿದ್ದು, ಶಿಕ್ಷೆಯ ಪ್ರಮಾಣವನ್ನು 3 ವರ್ಷದಿಂದ 7 ವರ್ಷಗಳಿಗೆ ಹೆಚ್ಚಿಸಬೇಕು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಅವರು ಚಳಿಗಾಲದ ಅಧಿವೇಶನದಲ್ಲಿ 2023ರಿಂದ ಇಲ್ಲಿಯವರೆಗೆ 3 ವರ್ಷಗಳಲ್ಲಿ 25 ಸಾವಿರ ಕೋಟಿ ರೂ. ಎಸ್‌ಸಿಪಿ ಮತ್ತು ಟಿಎಸ್‌ಪಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಲಾಗಿದೆ ಎಂದು ತಿಳಿಸಿದ್ದು, 2013ರಿಂದ ಇಲ್ಲಿವರೆಗೆ 7 ಲಕ್ಷ ಕೋಟಿ ರೂ. ಅನುದಾನವನ್ನು ಅನ್ಯ ಯೋಜನೆಗಳಿಗೆ ಬಳಸಲಾಗಿದೆ. ಮುಂದಿನ ಬಜೆಟ್‌ನಲ್ಲಿ ಪ್ರತಿ ಎಸ್ಸಿ ಮತ್ತು ಎಸ್ಟಿ ಕುಟುಂಬಗಳಿಗೆ ತಲಾ 25 ಲಕ್ಷ ರೂ.ವಿಶೇಷ ಅನುದಾನ ಘೋಷಿಸಬೇಕು. ಹಾಗೆಯೇ ಎಸ್‌ಸಿಪಿ ಮತ್ತು ಟಿಎಸ್‌ಪಿ ಹಣ ಬಳಕೆಗೆ ಅನುಕೂಲ ಮಾಡಿಕೊಡುವ 7(ಸಿ) ಕಾಲಂ ಅನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.

ಸರ್ಕಾರಿ, ಅರೆಸರ್ಕಾರಿ, ಖಾಸಗಿ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಋತುಚಕ್ರ ವೇತನ ಸಹಿತ ರಜೆ ನೀಡಲಾಗುತ್ತಿದೆ. ಅಂತೆಯೇ ರೈತ, ಕೃಷಿ ಕೂಲಿ ಕಾರ್ಮಿಕ ಮಹಿಳೆಯರಿಗೂ ಋತುಚಕ್ರ ರಜೆ ಸಹಿತ ಕೂಲಿ ನೀಡುವ ನಿರ್ಧಾರ ಮಾಡಬೇಕು. ತಪ್ಪಿದಲ್ಲಿ ಮಹಿಳೆಯರಿಂದಲೇ ಮುಖ್ಯಮಂತ್ರಿ ಹಾಗೂ ಎಲ್ಲಾ ಮಂತ್ರಿಗಳಿಗೆ ಕಂಡಕಂಡಲ್ಲಿ ಘೇರಾವ್ ಮಾಡಲಾಗುವುದು ಎಂದು ಎಚ್ಚರಿಸಿದರು.

ಜಿಲ್ಲಾಧ್ಯಕ್ಷ ಬಿ.ಆನಂದ್, ಮಹಿಳಾ ಜಿಲ್ಲಾಧ್ಯಕ್ಷೆ ಸುಶ್ಮಿತ ಆನಂದ್, ಜಿಲ್ಲಾ ಸಂಘಟನ ಕಾರ್ಯದರ್ಶಿ ನಾಗರಾಜ್ ಈಚಗೆರೆ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

1 hour ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

1 hour ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

1 hour ago

ಸುಬ್ಬಮ್ಮ ಜೋಯಿಸ್ ಮೈಸೂರಿನಲ್ಲಿ ತ್ರಿವರ್ಣಧ್ವಜ ಹಾರಿಸಿದ್ದು

ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…

2 hours ago

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

2 hours ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

2 hours ago