ಮಂಡ್ಯ: ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಕೊರತೆ ಆಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಸಂಬಂಧಿತ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಸಿಇಓ ನಂದಿನಿ ಸೂಚನೆ ನೀಡಿದರು.
ಈ ಕುರಿತು ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಮಾತನಾಡಿದ ಅವರು, ಗ್ರಾಮ ಪಂಚಾಯತ್ ಮಟ್ಟದಲ್ಲಿ ಲಭ್ಯವಿರುವ ಕುಡಿಯುವ ನೀರಿನ ಮೂಲಗಳನ್ನು ಪರಿಶೀಲಿಸಿ, ದುರಸ್ಥಿಗೆ ಒಳಪಡುವ ಬೋರ್‌ವೆಲ್‌ಗಳನ್ನು ಹಾಗೂ ಪೈಪ್‌ಲೈನಗಳನ್ನು ತಕ್ಷಣ ದುರಸ್ತಿ ಮಾಡಬೇಕು ಎಂದು ನಿರ್ದೇಶಿಸಿದರು.
ನೀರು ಸರಬರಾಜು ವ್ಯವಸ್ಥೆ ಸುಗಮವಾಗಿರುವುದನ್ನು ಖಚಿತಪಡಿಸಿಕೊಳ್ಳಲು ನಿಯಮಿತವಾಗಿ ಮೇಲ್ವಿಚಾರಣೆ ನಡೆಸಬೇಕು ಎಂದು ಹೇಳಿದರು.
ಬೇಸಿಗೆ ಅವಧಿಯಲ್ಲಿ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಎಲ್ಲಾ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸಿಇಓ ಸೂಚನೆ ನೀಡಿದರು.





