ಮಂಡ್ಯ

ಮಂಡ್ಯ: ಆಸ್ತಿಗಾಗಿ ಮಗನಿಂದಲೇ ತಂದೆಗೆ ಬ್ಲಾಕ್‌ಮೇಲ್

ಮಂಡ್ಯ: ಸಕ್ಕರೆನಾಡು ಮಂಡ್ಯದಲ್ಲಿ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಆಸ್ತಿಗಾಗಿ ಕಿರಾತಕ ಮಗನೋರ್ವ ತಂದೆಗೆ ಬ್ಲಾಕ್‌ ಮೇಲ್‌ ಮಾಡಿರುವ ಘಟನೆ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ನಡೆದಿದೆ.

ಮದ್ದೂರಿನ ರಿಯಲ್ ಎಸ್ಟೇಟ್ ಉದ್ಯಮಿ ಸತೀಶ್‌ ಎಂಬುವವರ ಮಗ ಪ್ರಣವ್‌ ಎಂಬಾತನೇ ಬೆದರಿಕೆ ಹಾಕಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಆಸಾಮಿಯಾಗಿದ್ದಾನೆ. ವಾಟ್ಸಪ್ ಗ್ರೂಪ್‌ಗೆ ಅಪ್ಪನ ಅಶ್ಲೀಲ ಸಂದೇಶ ಕಳಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದ. ಘಟನೆಯಿಂದ ರೊಚ್ಚಿಗೆದ್ದ ತಂದೆ ಸತೀಶ್‌ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಪೊಲೀಸರು ಆರೋಪಿ ಮಗನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

ಇದನ್ನು ಓದಿ:ಮೈಸೂರು | ಆಸ್ತಿ ವಿಚಾರ ; ಅಣ್ಣನನ್ನು ಕೊಂದು ಎಸ್ಕೇಪ್‌ ಆದ ತಮ್ಮ : ಪೊಲೀಸರಿಂದ ಶೋಧ

ಉದ್ಯಮಿ ಸತೀಶ್‌ ಅವರು, ಮದ್ದೂರು ಸೇರಿದಂತೆ ರಾಜ್ಯದ ಹಲವೆಡೆ ರಾಣಿ ಐಶ್ವರ್ಯ ಡೆವಲಪರ್ಸ್ ಹೆಸರಲ್ಲಿ ರಿಯಲ್ ಎಸ್ಟೇಟ್ ಉದ್ಯಮ ನಡೆಸುತ್ತಿದ್ದಾರೆ. ಮಗ ಪ್ರಣವ್‌ ದುಶ್ಚಟಗಳಿಗೆ ಬಲಿಯಾಗಿ ವಿರೋಧಿಗಳ ಜೊತೆ ಸೇರಿ ಆಸ್ತಿಗಾಗಿ ತಂದೆ ಜೊತೆಯೇ ಕಿರಿಕ್ ಮಾಡಿದ್ದನು.

ಈಗಾಗಲೇ ತಂದೆಯ ಕೋಟ್ಯಾಂತರ ರೂ ಹಣವನ್ನು ಹಾಳು ಮಾಡಿದ್ದಲ್ಲದೇ ಮತ್ತೆ ಹಣಕ್ಕೆ ಬೇಡಿಕೆ ಇಟ್ಟಿದ್ದನು. ಹಣ ಕೊಡದ ತಂದೆಗೆ ಬುದ್ಧಿ ಕಲಿಸಲು ಕೆಲವರ ಜೊತೆ ಸೇರಿದ ಪ್ರಣವ್ ಅಪ್ಪನ ಭಾವಚಿತ್ರಕ್ಕೆ ಅಶ್ಲೀಲ ಚಿತ್ರ ಹಾಗು ವಾಯ್ಸ್ ಎಡಿಟ್ ಮಾಡಿ ವಾಟ್ಸಪ್ ಗ್ರೂಪ್‌ಗೆ ಹಾಕಿ‌ ಬ್ಲಾಕ್‌ಮೇಲ್ ಮಾಡಿದ್ದ.

ಈ ಹಿನ್ನೆಲೆಯಲ್ಲಿ ಪ್ರಚೋದಿಸಿದವರು ಸೇರಿದಂತೆ ಮಗನ ವಿರುದ್ಧ ಸತೀಶ್‌ ಮದ್ದೂರು ಠಾಣೆಗೆ ದೂರು ನೀಡಿದ್ದರು. ತಂದೆಯ ದೂರಿನ ಮೇರೆಗೆ ಆರೋಪಿಗಳಾದ ಮಗ ಪ್ರಣವ್, ಮಹೇಶ, ಈಶ್ವರ್ ಹಾಗೂ ಪ್ರೀತಮ್ ಎಂಬುವವರನ್ನು ಬಂಧಿಸಲಾಗಿದೆ. ಈ ಸಂಬಂಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಪ್ರತಿಭಟನೆ ಮಾಹಿತಿ ತಿಳಿದು ಕೆರೆಗೆ ನೀರು ತುಂಬಿಸಿದ ಅಧಿಕಾರಿಗಳು!

ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…

2 hours ago

ಓದುಗರ ಪತ್ರ | ರಸ್ತೆ ದುರಸ್ತಿ ಮಾಡಿ

ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…

2 hours ago

ಓದುಗರ ಪತ್ರ | ತಂಬಾಕುಯುಕ್ತ ದಂತ ಉತ್ಪನ್ನಗಳನ್ನು ನಿಷೇಧಿಸಿ

ಇತ್ತೀಚಿನ ದಿನಗಳಲ್ಲಿ, ಟೂತ್ ಪೇಸ್ಟ್‌ಗಳಲ್ಲಿ ತಂಬಾಕು ಮತ್ತು ನಿಕೋಟಿನ್ ಅಂಶ ಪತ್ತೆಯಾಗಿದ್ದು, ಇದರ ಸೇವನೆಯಿಂದ ಹಲವು ಮಕ್ಕಳು ತೊಂದರೆಗೊಳಗಾಗಿರುವ ಘಟನೆಗಳು…

2 hours ago

ಓದುಗರ ಪತ್ರ | ರಸ್ತೆಯಲ್ಲಿ ವಾಯುವಿಹಾರ ಅಪಾಯಕಾರಿ

ಮೈಸೂರಿನ ಕುವೆಂಪುನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ರಸ್ತೆ, ಗದ್ದಿಗೆ ರಸ್ತೆ, ವಿಶ್ವಮಾನವ ಜೋಡಿ ರಸ್ತೆ, ವಿದ್ಯಾರಣ್ಯಪುರಂ -…

2 hours ago

ಶಿವಾಜಿ ಗಣೇಶನ್‌ ಅವರ ದೆಹಲಿ ಕಣ್ಣೋಟ : ಉನ್ನತ ಶಿಕ್ಷಣದಲ್ಲಿ ಬದಲಾವಣೆಗೆ ಕೇಂದ್ರದ ಮುನ್ನುಡಿ

ಆಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್‌ ಡಿಎ ಸರ್ಕಾರ ನಾಲ್ಕು ವರ್ಷಗಳ ಹಿಂದೆ ಜಾರಿಗೆ ತಂದ ನೂತನ ಶಿಕ್ಷಣ ನೀತಿಯನ್ನು ಪರಿಣಾಮಕಾರಿಯಾಗಿ…

3 hours ago

ಬೈಕ್‌ಗೆ ಲಾರಿ ಡಿಕ್ಕಿ : ಸವಾರ ಸಾವು, ಮತ್ತೊರ್ವ ಗಂಭೀರ

ತಿ.ನರಸೀಪುರ : ಬೈಕ್ ಗೆ ಎದುರಿಗೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿಯಾದ ಪರಿಣಾಮ ಯುವಕನೋರ್ವ ಸ್ಥಳದಲ್ಲಿಯೇ ಮೃತಪಟ್ಟಿ ಘಟನೆ ತಾಲೂಕಿನ…

3 hours ago