ಮಂಡ್ಯ

ಸೋನಿಯಾ, ರಾಹುಲ್ ಬಂದಿದ್ದಕ್ಕೆ  ಮಂಡ್ಯ ಜನರಿಗೆ ದೇವೇಗೌಡರ ಮೇಲಿನ ಪ್ರೀತಿ ಕಡಿಮೆ ಆಗಲ್ಲ’

ಮಂಡ್ಯ  : ಸಕ್ಕರೆ ನಾಡು ಮಂಡ್ಯ ಜಿಲ್ಲೆಯು ಜೆಡಿಎಸ್ ಪಕ್ಷದ ಭದ್ರಕೋಟೆಯಾಗಿದೆ. ಅಲ್ಲಿಗೆ ಸೋನಿಯಾ ಗಾಂಧಿಯವರು ಬರಲಿ, ರಾಹುಲ್ ಗಾಂಧಿಯವರು ಬರಲಿ. ಮಂಡ್ಯದ ಜನತೆ ಮಾಜಿ ಪ್ರಧಾನಿ ದೇವೇಗೌಡರ ಮೇಲಿಟ್ಟಿರುವ ಪ್ರೀತಿ ಒಂದಿಷ್ಟೂ ಕಡಿಮೆಯಾಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.

ಚನ್ನಪಟ್ಟಣದ ಚಿಕ್ಕ ಬೋರೇಗೌಡನ ದೊಡ್ಡಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ‘‘ಮಂಡ್ಯದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಅವರ ಪುತ್ರ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಭಾರತ್ ಜೋಡೋ ಪಾದಯಾತ್ರೆ ನಡೆಸುವುದರ ಬಗ್ಗೆ ನಿಮ್ಮ ಅಭಿಪ್ರಾಯವೇನು’’ ಎಂದು ಕೇಳಲಾದ ಪ್ರಶ್ನೆಗೆ ಅವರು ಮೇಲಿನಂತೆ ಉತ್ತರಿಸಿದರು. ಅಲ್ಲದೆ, ‘’ಮಂಡ್ಯ ಜಿಲ್ಲೆಯು ಯಾವತ್ತೂ ಜೆಡಿಎಸ್ ನ ಭದ್ರಕೋಟೆಯಾಗಿರುತ್ತೆ. ಹಿಂದೆಯೂ ಮುಂದೆಯೂ ಅದು ಅದೇ ರೀತಿಯಲ್ಲೇ ಮುಂದುವರಿಯುತ್ತದೆ’’ ಎಂದು ಹೇಳಿದರು.

ಇದೇ ಮಾತುಕತೆ ವೇಳೆ ಚನ್ನಪಟ್ಟಣದಲ್ಲಿ ಇತ್ತೀಚೆಗೆ ನಡೆದಿರುವ ಜೆಡಿಎಸ್- ಬಿಜೆಪಿ ಕಾರ್ಯಕರ್ತರ ನಡುವಿನ ಘರ್ಷಣೆ ವಿಚಾರ ಪ್ರಸ್ತಾಪವಾಯಿತು. ಈ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಕುಮಾರಸ್ವಾಮಿ, ‘’ಚನ್ನಪಟ್ಟಣ ಕೂಡ ಜೆಡಿಎಸ್ ನ ಭದ್ರಕೋಟೆಯೇ ಆಗಿದೆ. ಮುಂಬರುವ ಚುನಾವಣೆಯಲ್ಲಿ ಅಲ್ಲಿನ ಮತದಾರರು ಅದನ್ನು ಸಾಬೀತುಪಡಿಸಲಿದ್ದಾರೆ. ಚನ್ನಪಟ್ಟಣದಲ್ಲಿ ಕಾನೂನು ಸುವ್ಯವಸ್ಥೆ ಸರಿಯಿಲ್ಲ. ಅದನ್ನು ಸರಿಪಡಿಸಬೇಕಿದೆ’’ ಎಂದು ತಿಳಿಸಿದರು.

 

andolana

Recent Posts

ಓದುಗರ ಪತ್ರ: ಶಾಲಾ ದಾಖಲಾತಿ ವಯೋಮಿತಿ ಸಮಸ್ಯೆ ನಿವಾರಿಸಿ

ಮಕ್ಕಳನ್ನು ಒಂದನೇ ತರಗತಿಗೆ ಪ್ರಸಕ್ತ ಸಾಲಿಗೆ ದಾಖಲಿಸುವ ವಯೋಮಿತಿಯನ್ನು ಆರು ವರ್ಷಗಳಿಗೆ ನಿಗದಿಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.…

3 hours ago

ಓದುಗರ ಪತ್ರ: ಡ್ರಗ್ಸ್ ಜಾಲ ಪತ್ತೆಗೆ ಡ್ರೋನ್ ಕಾರ್ಯಾಚರಣೆ ಶ್ಲಾಘನೀಯ

ಮೈಸೂರಿನಲ್ಲಿ ಸಮಾಜಘಾತುಕ ಶಕ್ತಿಗಳ ದುಷ್ಕೃತ್ಯ ಮತ್ತು ಡ್ರಗ್ಸ್ ಜಾಲ ಪ್ರಕರಣಗಳ ಪತ್ತೆಗೆ ಡ್ರೋನ್ ಕಾರ್ಯಾಚರಣೆ ನಡೆಸಲು ಮೈಸೂರು ನಗರ ಪೊಲೀಸರು…

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಸರ್ಕಾರ ಗುಣಮಟ್ಟದ ಚಲನಚಿತ್ರಗಳಿಗೆ ನೀಡುವ ಸಹಾಯಧನದ ಆಚೆ ಈಚೆ

ಗುಣಮಟ್ಟದ ಕನ್ನಡ ಮತ್ತು ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಸರ್ಕಾರ ನೀಡುತ್ತಿರುವ ಸಹಾಯಧನವನ್ನು ೨೦೨೬ನೇ ಸಾಲಿನಿಂದ ರದ್ದುಪಡಿಸಲು ಸರ್ಕಾರ ನಿರ್ಧರಿಸಿದೆ ಎನ್ನುವುದು…

3 hours ago

ಅಮೃತ್ ೨.೦ ಯೋಜನೆ ಕಾಮಗಾರಿ ಚುರುಕು

ಎಸ್.ಎ. ಹುಸೇನ್ ಶೀಘ್ರದಲ್ಲೇ ಹೊಸ ಪೈಪ್‌ಲೈನ್ ಮೂಲಕ ನೀರು ಸರಬರಾಜು ೪೭.೪೧ ಕೋಟಿ ರೂ. ವೆಚ್ಚದ ೨ ಹಂತಗಳ ಕಾಮಗಾರಿ…

3 hours ago

ಸಫಾರಿಗೆ ರಹದಾರಿ; ವಾದ-ಪ್ರತಿರೋಧ

ಸಫಾರಿ ಪುನಾರಂಭಕ್ಕೆ ಸರ್ಕಾರದ ಆದೇಶ ಹೊರ ಬಿದ್ದ ಬಳಿಕ ರೈತ ಸಂಘಟನೆಗಳ ಆಕ್ರೋಶ ಭುಗಿಲೆದಿದ್ದೆ. ಅಧಿಕಾರಿಗಳು, ಸರ್ಕಾರದ ವಿರುದ್ಧ ರೈತ…

3 hours ago

ದಮ್ಮನಕಟ್ಟೆ ಸಫಾರಿ ಸವಿಯಲು ಪ್ರವಾಸಿಗರು ಕಾತರ…

ಮಂಜು ಕೋಟೆ ಆದೇಶ ಬಂದ ತಕ್ಷಣ ಸಫಾರಿ ಪುನರ್ ಆರಂಭಿಸಲಾಗುವುದು: ಅರಣ್ಯಾಧಿಕಾರಿ ಎಚ್.ಡಿ.ಕೋಟೆ: ರಾಜ್ಯ ಸರ್ಕಾರವು ಸಫಾರಿ ಆರಂಭಕ್ಕೆ ಆದೇಶ…

4 hours ago