Mysore
15
overcast clouds

Social Media

ಗುರುವಾರ, 18 ಡಿಸೆಂಬರ್ 2025
Light
Dark

ಮಹಿಳೆಯರಿಗೆ ಅಪಮಾನ ಮಾಡಿ ವಿಷಾಧಿಸುವುದರಲ್ಲಿ ಅರ್ಥವಿಲ್ಲ: ಚಲುವರಾಯಸ್ವಾಮಿ ಕಿಡಿ

ಮಂಡ್ಯ: ರೈತ ಉತ್ಪನ್ನಗಳ ಮೇಲಿನ ಜಿಎಸ್‌ಟಿ ತೆಗೆಯುವುದು, ಕನಿಷ್ಠ ಬೆಂಬಲ ಬೆಲೆ, ಸಾಲಮನ್ನಾ ಸೇರಿದಂತೆ ಹತ್ತು ಹಲವು ರೈತಪರ ಯೋಜನೆಗಳನ್ನು ರಾಷ್ಟ್ರೀಯ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದೆ. ರೈತಪರ ಕಾಯ್ದೆ ಜಾರಿಗಾಗಿ ಮತದಾರರು ಕಾಂಗ್ರೆಸ್ ಅನ್ನು ಬೆಂಬಲಿಸಬೇಕು ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ ಅವರು ಹೇಳಿದರು.

ನಾಗಮಂಗಲ ತಾಲೂಕಿನ ನಾನಾ ಗ್ರಾಮ ಪಂಚಾಯತಿ ಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಪರ ಮತ ಪ್ರಚಾರದಲ್ಲಿ ತೊಡಗಿದ್ದ ಸಂದರ್ಭದಲ್ಲಿ ಮಾತನಾಡಿದರು.

ಶಾಶ್ವತವಾಗಿ ಕೊಬ್ಬರಿ ಖರೀದಿ, ಮಹಿಳೆಯರಿಗೆ ಪ್ರತಿ ವರ್ಷ 1 ಲಕ್ಷ, ಬೆಂಬಲ ಬೆಲೆ ಸೇರಿದಂತೆ ನಾನಾ ಗ್ಯಾರಂಟಿಗಳ ಭರವಸೆಗಳನ್ನು ಕಾಂಗ್ರೆಸ್ ನೀಡಿದ್ದು ಇದನ್ನು ಅನುಷ್ಠಾನಕ್ಕೆ ತರಲು ಕಾಂಗ್ರೆಸ್ ಅನ್ನು ಬೆಂಬಲಿಸಬೇಕು ಎಂದರು.

ಇದೇ ವೇಳೆ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿ, ನಮ್ಮ ಪ್ರತಿಸ್ಪರ್ಧಿ ಮಹಿಳೆಯರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಅವರ ಅಂತರಾಳದಲ್ಲಿ ಏನಿದೆ ಎಂಬುದು ಅವರ ಮಾತುಗಳಿಂದ ವ್ಯಕ್ತವಾಗುತ್ತಿವೆ. ಹಿಂದೆಯೂ ಸಹ ಮಹಿಳೆಯರ ಬಗ್ಗೆ ಅಗೌರವದ ಮಾತುಗಳನ್ನಾಡಿದ್ದರು. ಮಹಿಳೆಯರಿಗೆ ಅಪಮಾನವಾಗುವಂತಹ ಮಾತನಾಡಿ ಈಗ ವಿಷಾದ ವ್ಯಕ್ತಪಡಿಸುವುದರಲ್ಲಿ ಅರ್ಥವಿಲ್ಲ

ಚುನಾವಣೆಯಲ್ಲಿ ಕಾಂಗ್ರೆಸ್ ಗ್ಯಾರಂಟಿ ಕೈ ಹಿಡಿಯಲಿವೆಯೇ ಹೊರತು ಮೋದಿ ಗ್ಯಾರಂಟಿ ಏನು ವರ್ಕ್ ಆಗಲ್ಲ. ರಾಜ್ಯಕ್ಕೆ ಐದು ಗ್ಯಾರಂಟಿಗಳನ್ನು ನೀಡಿದ್ದೇವು. ಈಗ ರಾಷ್ಟ್ರವ್ಯಾಪಿ ಗ್ಯಾರಂಟಿಗಳನ್ನು ಘೋಷಣೆ ಮಾಡಲಾಗಿದೆ ಎಂದರು.

ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಮಾತನಾಡಿ, ನಾನು ಈ ಜಿಲ್ಲೆಯವನ್ನು, ರೈತನ ಮಗ. ರೈತರ ಕಷ್ಟ, ಜಿಲ್ಲೆಯ ನಾಡಿಮಿಡಿತ ನನಗೆ ಚೆನ್ನಾಗಿ ಗೊತ್ತಿದೆ. ದೇಶ್ಯವ್ಯಾಪಿ ಗ್ಯಾರಂಟಿ ಜಾರಿಗೆ ಕಾಂಗ್ರೆಸ್ ಬೆಂಬಲಿಸಿ, ನನ್ನನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.

Tags:
error: Content is protected !!