ಮಂಡ್ಯ: ರೈತ ಉತ್ಪನ್ನಗಳ ಮೇಲಿನ ಜಿಎಸ್‌ಟಿ ತೆಗೆಯುವುದು, ಕನಿಷ್ಠ ಬೆಂಬಲ ಬೆಲೆ, ಸಾಲಮನ್ನಾ ಸೇರಿದಂತೆ ಹತ್ತು ಹಲವು ರೈತಪರ ಯೋಜನೆಗಳನ್ನು ರಾಷ್ಟ್ರೀಯ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದೆ. ರೈತಪರ ಕಾಯ್ದೆ ಜಾರಿಗಾಗಿ ಮತದಾರರು ಕಾಂಗ್ರೆಸ್ ಅನ್ನು ಬೆಂಬಲಿಸಬೇಕು ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ ಅವರು ಹೇಳಿದರು.
ನಾಗಮಂಗಲ ತಾಲೂಕಿನ ನಾನಾ ಗ್ರಾಮ ಪಂಚಾಯತಿ ಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಪರ ಮತ ಪ್ರಚಾರದಲ್ಲಿ ತೊಡಗಿದ್ದ ಸಂದರ್ಭದಲ್ಲಿ ಮಾತನಾಡಿದರು.
ಶಾಶ್ವತವಾಗಿ ಕೊಬ್ಬರಿ ಖರೀದಿ, ಮಹಿಳೆಯರಿಗೆ ಪ್ರತಿ ವರ್ಷ 1 ಲಕ್ಷ, ಬೆಂಬಲ ಬೆಲೆ ಸೇರಿದಂತೆ ನಾನಾ ಗ್ಯಾರಂಟಿಗಳ ಭರವಸೆಗಳನ್ನು ಕಾಂಗ್ರೆಸ್ ನೀಡಿದ್ದು ಇದನ್ನು ಅನುಷ್ಠಾನಕ್ಕೆ ತರಲು ಕಾಂಗ್ರೆಸ್ ಅನ್ನು ಬೆಂಬಲಿಸಬೇಕು ಎಂದರು.
ಇದೇ ವೇಳೆ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿ, ನಮ್ಮ ಪ್ರತಿಸ್ಪರ್ಧಿ ಮಹಿಳೆಯರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಅವರ ಅಂತರಾಳದಲ್ಲಿ ಏನಿದೆ ಎಂಬುದು ಅವರ ಮಾತುಗಳಿಂದ ವ್ಯಕ್ತವಾಗುತ್ತಿವೆ. ಹಿಂದೆಯೂ ಸಹ ಮಹಿಳೆಯರ ಬಗ್ಗೆ ಅಗೌರವದ ಮಾತುಗಳನ್ನಾಡಿದ್ದರು. ಮಹಿಳೆಯರಿಗೆ ಅಪಮಾನವಾಗುವಂತಹ ಮಾತನಾಡಿ ಈಗ ವಿಷಾದ ವ್ಯಕ್ತಪಡಿಸುವುದರಲ್ಲಿ ಅರ್ಥವಿಲ್ಲ
ಚುನಾವಣೆಯಲ್ಲಿ ಕಾಂಗ್ರೆಸ್ ಗ್ಯಾರಂಟಿ ಕೈ ಹಿಡಿಯಲಿವೆಯೇ ಹೊರತು ಮೋದಿ ಗ್ಯಾರಂಟಿ ಏನು ವರ್ಕ್ ಆಗಲ್ಲ. ರಾಜ್ಯಕ್ಕೆ ಐದು ಗ್ಯಾರಂಟಿಗಳನ್ನು ನೀಡಿದ್ದೇವು. ಈಗ ರಾಷ್ಟ್ರವ್ಯಾಪಿ ಗ್ಯಾರಂಟಿಗಳನ್ನು ಘೋಷಣೆ ಮಾಡಲಾಗಿದೆ ಎಂದರು.
ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಮಾತನಾಡಿ, ನಾನು ಈ ಜಿಲ್ಲೆಯವನ್ನು, ರೈತನ ಮಗ. ರೈತರ ಕಷ್ಟ, ಜಿಲ್ಲೆಯ ನಾಡಿಮಿಡಿತ ನನಗೆ ಚೆನ್ನಾಗಿ ಗೊತ್ತಿದೆ. ದೇಶ್ಯವ್ಯಾಪಿ ಗ್ಯಾರಂಟಿ ಜಾರಿಗೆ ಕಾಂಗ್ರೆಸ್ ಬೆಂಬಲಿಸಿ, ನನ್ನನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…
ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…
ಮುಖ್ಯಮಂತ್ರಿ ಸಿದ್ದರಾಮಯ್ಯನವರು ೧೬ನೇ ಬಜೆಟ್ ಮಂಡನೆ ವೇಳೆ ಸಿನಿಮಾ ಟಿಕೆಟ್ ದರ ನಿಗದಿಯ ಬಗ್ಗೆ ಪ್ರಸ್ತಾಪಿಸಿದ್ದು, ಸಿನಿ ಪ್ರಿಯರಿಗೆ ಸಂತಸ…