Mysore
26
scattered clouds

Social Media

ಶುಕ್ರವಾರ, 27 ಫೆಬ್ರವರಿ 2026
Light
Dark

ವಿಶೇಷ ಚೇತನರು ಸಮಾಜದ ಮುಖ್ಯವಾಹಿನಿಗೆ ಬರಬೇಕು: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ವಿಶೇಷ ಚೇತನರು ಸಮಾಜದ ಮುಖ್ಯ ವಾಹಿನಿಗೆ ಬರಬೇಕು ಹಾಗೂ ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳಲು ಎಲ್ಲರೂ ಸಹಕರಿಸಬೇಕು ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು.

ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಕಾರ್ಮಿಕ ಇಲಾಖೆ, ಅಂಗವಿಕಲರ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಆಶ್ರಯದಲ್ಲಿ ತ್ರಿಚಕ್ರ ವಾಹನ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿಶೇಷ ಚೇತನರನ್ನು ಸಮಾಜದ ಮುಖ್ಯ ವಾಹಿನಿಗೆ ತರಲು ಪ್ರತಿಯೊಬ್ಬರ ಸಹಕಾರ ತುಂಬಾ ಅಗತ್ಯ ಎಂದು ಹೇಳಿದರು.

ವಿಶೇಷ ಚೇತನರನ್ನು ಗೌರವಿಸಬೇಕು. ಅವರಿಗೂ ಹೆಚ್ಚು ಹೆಚ್ಚು ಅವಕಾಶಗಳನ್ನು ಕಲ್ಪಿಸಬೇಕು. ಶೈಕ್ಷಣಿಕ ಅರ್ಹತೆ ಅನುಗುಣವಾಗಿ ಬೇರೆ ಬೇರೆ ಕಡೆ ಉದ್ಯೋಗ ಅವಕಾಶಗಳನ್ನು ನೀಡಿ ಸ್ವಾವಲಂಬಿಯಾಗಿ ಜೀವನ ನಡೆಸುವಂತೆ ಮಾಡಬೇಕು ಎಂದು ಹೇಳಿದರು.

Tags:
error: Content is protected !!