ಮಂಡ್ಯ

ಫೆ 5 ರಂದು ಶ್ರೀ ರಂಗನಾಥಸ್ವಾಮಿ ದೇವಾಲಯ ರಥಸಪ್ತಮಿ: ಅಗತ್ಯ ಸಿದ್ಧತೆಗೆ ಸೂಚನೆ

ಶ್ರೀರಂಗಪಟ್ಟಣ:  ಇಲ್ಲಿನ ಶ್ರೀ ರಂಗನಾಥಸ್ವಾಮಿ ದೇವಾಲಯ ರಥಸಪ್ತಮಿ ಕಾರ್ಯಕ್ರಮವು ಫೆಬ್ರವರಿ 5 ರಂದು ನಡೆಯಲಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಶ್ರೀರಂಗಪಟ್ಟಣ ಶಾಸಕ ರಾಮೇಶ್ ಬಂಡಿಸಿದ್ದೇಗೌಡ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಪೂರ್ವಭಾವಿ ಸಿದ್ಧತಾ ಸಭೆ ನಡೆಸಿ ಮಾತನಾಡಿದರು. ಬ್ರಹ್ಮ ರಥ ಚಾಲನೆ ಮಾಡಲು ಯೋಗ್ಯವಾಗಿರುವ ಬಗ್ಗೆ ಪರಿಶೀಲಿಸಿ ಅಗತ್ಯವಿದ್ದಲ್ಲಿ ದುರಸ್ಥಿ ಪಡಿಸುವಂತೆ ತಿಳಿಸಿದರು.

ರಥ ಸಾಗುವ ರಸ್ತೆಗಳನ್ನು ಪರಿಶೀಲಿಸಿ ರಥ ಚಲಿಸುವ ಮಾರ್ಗದಲ್ಲಿ ಗುಂಡಿಗಳಿದ್ದಲ್ಲಿ ಸರಿಪಡಿಸಿ. ರಥ ಚಲಿಸುವ ರಸ್ತೆಯ ಎರಡು ಬದಿಗಳಲ್ಲಿ ಬೆಳೆದಿರುವ ಗಿಡ ಹಾಗೂ ಕಸವಿದ್ದಲ್ಲಿ ತೆರವು ಮಾಡಬೇಕು. ಜೋತು ಬಿದ್ದಿರುವ ವಿದ್ಯುತ್ ತಂತಿಗಳು ಇತರೆ ಕೇಬಲ್ ಗಳಿದ್ದಲ್ಲಿ ತೆರವುಗೊಳಿಸಲು‌ ಸೂಚನೆ ನೀಡಿದರು.

ಅಗತ್ಯವಾದ ಸ್ಥಳಗಳಲ್ಲಿ ಆರಕ್ಷಕ ಸಿಬ್ಬಂದಿ, ಬ್ಯಾರಿಕೇಡ್ ವ್ಯವಸ್ಥೆ, ಸರ್ತಿ ಸಾಲಿನ ವ್ಯವಸ್ಥೆ, ಸೂಕ್ತ ಪಾರ್ಕಿಂಗ್ ವ್ಯವಸ್ಥೆ, ಅಗ್ನಿಶಾಮಕ ವಾಹನ ನಿಯೋಜನೆ, ಬ್ರಹ್ಮ ರಥ ಎಳೆಯುವಾಗ ಭಕ್ತಾದಿಗಳು ರಥದ ಸಮೀಪಕ್ಕೆ ಬರದಂತೆ ರೋಪ್ ಸರ್ಕಲ್ ವ್ಯವಸ್ಥೆ ಮಾಡುವಂತೆ ತಿಳಿಸಿದರು.

ದೇವಾಸ್ಥಾನದ ಸಮೀಪವಿರುವ ರಸ್ತೆ ಮತ್ತು ಚರಂಡಿಗಳನ್ನು ಶುಚಿಗೊಳಿಸುವುದು,, ದೇವಾಲಯದ ಒಳಭಾಗ ಮತ್ತು ಹೊರ ಭಾಗದಲ್ಲಿ ಸ್ವಚ್ಛತೆ ಕಾಪಾಡುವುದು, ಸ್ವಚ್ಛತೆ ಮತ್ತು ನೈರ್ಮಲ್ಯದ ಕುರಿತು ಜಾಗೃತಿ ಕ್ರಮ ವಹಿಸುವುದು ಅಗತ್ಯ ಎಂದು ಹೇಳಿದರು.

ಶುದ್ಧ ಕುಡಿಯುವ ನೀರಿನ ವ್ಯವಸ್ಥೆ
ಶುದ್ಧ ಕುಡಿಯುವ ನೀರಿನ ಮೂಲಗಳನ್ನು ಶುಚಿಗೊಳಿಸಿ ಹೆಚ್ಚುವರಿ ನಲ್ಲಿಗಳನ್ನೂ ಅಳವಡಿಸಲಾಗುವುದು ಮತ್ತು ಅಗತ್ಯವಿರುವ ಕಡೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವಂತೆ ತಿಳಿಸಿದರು.

ಜಿಲ್ಲಾಧಿಕಾರಿ ಡಾ: ಕುಮಾರ  ಮಾತನಾಡಿ, ಭಕ್ತಾದಿಗಳಿಗೆ ದೇವರ ದರ್ಶನ ಮತ್ತು ಧಾರ್ಮಿಕ ಕಾರ್ಯಕ್ರಮಗಳಿಗೆ ತೊಂದರೆಯಾಗದಂತೆ ನಿರಂತರ ವಿದ್ಯುತ್ ಸರಬರಾಜಾಗುವಂತೆ ನೋಡಿಕೊಳ್ಳಬೇಕು‌. ದೇವಾಲಯದ ವ್ಯಾಪ್ತಿಯ ಬೀದಿ ದೀಪಗಳು ಸರಿಪಡಿಸಿ ಸೂಕ್ತ ಬೆಳಕಿನ ವ್ಯವಸ್ಥೆ ಯಾಗಬೇಕು. ವಿದ್ಯುತ್ ಅವಘಡಗಳು ಸಂಭವಿಸದಂತೆ ಎಚ್ಚರ ವಹಿಸಿ ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಸಿ ಶಿವಾನಂದ ಮೂರ್ತಿ, ನಿಮಿಷಾಂಬ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ, ಶ್ರೀರಂಗನಾಥಸ್ವಾಮಿ ದೇವಸ್ಥಾನದ ಕಾರ್ಯನಿರ್ವಾಹಕ ಆಧಿಕಾರಿ ಉಮಾ, ಮುಜರಾಯಿ ತಹಶೀಲ್ದಾರ್ ತಮ್ಮೇಗೌಡ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪ್ಯಾಸೆಂಜರ್‌ ಆಟೋದಲ್ಲಿ ಗಾಂಜಾ ಸೊಪ್ಪು ಸಾಗಾಟ: ಆರೋಪಿ ಬಂಧನ

ಮೈಸೂರು: ಪ್ಯಾಸೆಂಜರ್‌ ಆಟೋದಲ್ಲಿ ಗಾಂಜಾ ಸೊಪ್ಪನ್ನು ಸಾಗಿಸುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಇಲವಾಲ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ಯಾಸೆಂಜರ್‌ ಆಟೋದಲ್ಲಿ ಮೈಸೂರಿನಿಂದ…

8 mins ago

ಪದತ್ಯಾಗಕ್ಕೂ ಸಿದ್ಧರಿದ್ದಾರೆ ಸಿದ್ದರಾಮಯ್ಯ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಅಧಿಕಾರಿ ಮುಂದುವರಿಸಲು ಹಾಗೂ ಪದತ್ಯಾಗ ಮಾಡಲು ಸಿದ್ದರಾಮಯ್ಯನವರು ಮಾನಸಿಕವಾಗಿ ಸಿದ್ಧರಾಗಿದ್ದಾರೆ. ಮುಂದೆ ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು ಎನ್ನವುದು…

23 mins ago

ಇಂಡೋನೇಷ್ಯಾದಲ್ಲಿ ಎರಡು ರೈಲುಗಳ ನಡುವೆ ಭೀಕರ ಅಪಘಾತ: 7 ಮಂದಿ ಸಾವು

ಜಕಾರ್ತ: ಇಂಡೋನೇಷ್ಯಾದ ಜಕಾರ್ತಾ ಹೊರವಲಯದಲ್ಲಿ ಎರಡು ರೈಲುಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದು, 81…

50 mins ago

ಓದುಗರ ಪತ್ರ: ರೈತರಿಗೆ ವಿಮಾ ಕಂಪೆನಿಗಳಿಂದಾಗುವ ವಂಚನೆ ತಪ್ಪಿಸಿ

ವಿಮಾ ಕಂಪೆನಿಗಳು ರೈತರ ಬೆಳೆನಷ್ಟ ಪರಿಹಾರದಲ್ಲಿ ವಂಚನೆ ಮಾಡುತ್ತಿವೆ. ಶೇ.೮೦ರಷ್ಟು ರೈತರು ವಿಮೆಯ ಕಂತು ಪಾವತಿಸಿದರೂ, ಬೆಳೆ ನಷ್ಟಕ್ಕೆ ಒಳಗಾದ…

2 hours ago

ಓದುಗರ ಪತ್ರ: ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಿ

ಬಿಸಿಲಿನ ತಾಪ ಹೆಚ್ಚಾಗಿದ್ದು, ರಾಜ್ಯರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೇ ಪ್ರಯಾಣಿಕರು ಬಾಯಾರಿಕೆಯಿಂದ ಬಳಲುವಂತಾಗಿದೆ.…

2 hours ago

ಓದುಗರ ಪತ್ರ: ಶಾಲೆಯಲ್ಲಿ ಪತ್ರಿಕೆ ಓದುವುದು ಕಡ್ಡಾಯ: ಸ್ವಾಗತಾರ್ಹ

ರಾಜ್ಯ ಸರ್ಕಾರವು ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಲ್ಲಿ ಪ್ರತಿದಿನ ಬೆಳಿಗ್ಗೆ ಪ್ರಾರ್ಥನೆಯ ನಂತರ ವಿದ್ಯಾರ್ಥಿಗಳು ಕನ್ನಡ ದಿನಪತ್ರಿಕೆಗಳನ್ನು…

2 hours ago