ಶ್ರೀರಂಗಪಟ್ಟಣ : ಪಟ್ಟಣದ ಕೆನರಾ ಬ್ಯಾಂಕ್ ಶಾಖೆಯ ಪಕ್ಕದಲ್ಲಿ ಎಲ್‌ಐಸಿ ಶಾಖೆ ಕಚೇರಿ ಕಟ್ಟಡ ನಿರ್ಮಾಣದ ತಳಪಾಯಕ್ಕಾಗಿ ಭೂಮಿ ಅಗೆಯುವ ವೇಳೆ ಒಡೆಯರ್ ಕಾಲಕ್ಕೆ ಸೇರಿದ 10 ಕಲ್ಲಿನ ಗುಂಡುಗಳು ಪತ್ತೆಯಾಗಿವೆ.
ಭಾನುವಾರ ಏಳು ಹಾಗೂ ಸೋಮವಾರ ಮೂರು ಕಲ್ಲಿನ ಗುಂಡುಗಳು ಸಿಕ್ಕಿವೆ. ಕೆನರಾ ಬ್ಯಾಂಕ್ ಶಾಖೆ ಕಟ್ಟಡಕ್ಕೆ ಐದಾರು ಅಡಿ ದೂರದಲ್ಲಿ ಈ ಗುಂಡುಗಳು ಪತ್ತೆಯಾಗಿವೆ. ನೆಲ ಮಟ್ಟದಿಂದ 5 ಅಡಿಗಳಷ್ಟು ಆಳದಲ್ಲಿ ಈ ಗುಂಡುಗಳು ಕಂಡು ಬಂದಿವೆ. ಈ ಗುಂಡುಗಳು ಸಿಕ್ಕಿರುವ ಸ್ಥಳದಲ್ಲಿ ಸುರಕಿ ಗಾರೆ ಮತ್ತು ಮಣ್ಣಿನ ಸುಟ್ಟ ಇಟ್ಟಿಗೆಗಳ ಗೋಡೆಯಂತಹ ರಚನೆ ಕೂಡ ಕಾಣಿಸಿದೆ. ಒಂದೆಡೆ ಕಾಡುಗಲ್ಲಿನ ವರಸೆಯೂ ಗೋಚರಿಸಿದೆ. ಎಲ್‌ಐಸಿ ಕಚೇರಿ ಕಟ್ಟಡ ನಿರ್ಮಾಣ ಉದ್ದೇಶಕ್ಕೆ 15ಕ್ಕೂ ಹೆಚ್ಚು ಗುಂಡಿಗಳನ್ನು ತೆಗೆದಿದ್ದು, ಈ ಪೈಕಿ ಮೂರು ಗುಂಡಿಗಳಲ್ಲಿ ಪ್ರಾಚೀನ ಕಟ್ಟಡದ ಕುರುಹುಗಳು ಕಂಡು ಬಂದಿವೆ.
ವಸ್ತುಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಕ್ಯೂರೇಟರ್ ಸುನಿಲ್, ಸಹಾಯಕ ಇಂಜಿನಿಯರ್ ಕೆ. ರವಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ‘ಪ್ರಾಚೀನ ಅವಶೇಷಗಳು ಮತ್ತೆ ಸಿಕ್ಕಿದರೆ ತಕ್ಷಣ ಇಲಾಖೆಯ ಅಧಿಕಾರಿಗಳಿಗೆ ತಿಳಿಸಬೇಕು. ಐತಿಹಾಸಿಕ ಕುರುಹುಗಳನ್ನು ನಾಶಪಡಿಸಬಾರದು ಎಂದು ಎಲ್‌ಐಸಿ ಅಧಿಕಾರಿಗಳಿಗೆ ಸೂಚಿಸಿದರು.
1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…
ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…