ಶ್ರೀರಂಗಪಟ್ಟಣ: ರಾಜ್ಯದಲ್ಲಿ ಭಾರಿ ಸದ್ದು ಮಾಡಿದ್ದ ವಕ್ಫ್ ಆಸ್ತಿ ವಿವಾದ ಇದೀಗ ಮತ್ತೆ ಮುನ್ನಲೆಗೆ ಬಂದಿದೆ. ರೈತರ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗಿರುವುದರಿಂದ ರೈತರು ಆತಂಕಕ್ಕಿಡಾಗಿದ್ದಾರೆ. ಈ ಹಿನ್ನಲೆ ಸಿಎಂ ಸಿದ್ದರಾಮಯ್ಯ ತ್ವರಿತವಾಗಿ ರೈತರ ಈ ಸಮಸ್ಯೆ ಬಗೆಹರಿಸಲು ಸೂಚನೆ ನೀಡಿದ್ದರು. ಆದರೆ, ಈವರೆಗೂ ಪಹಣಿಯಲ್ಲಿನ ವಕ್ಫ್ ಮಂಡಳಿಯ ಹೆಸರು ತೆಗೆಯದಿರುವುದರಿಂದ ವಕ್ಫ್ ಮಂಡಳಿ ವಿರುದ್ಧ ಇಂದು(ಜ.20)ಶ್ರೀರಂಗಪಟ್ಟಣ ಬಂದ್‌ಗೆ ಕರೆ ನೀಡಲಾಗಿದೆ.
ರೈತ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಬಂದ್‌ಗೆ ಕರೆ ನೀಡಲಾಗಿದ್ದು, ಈ ಬಂದ್‌ಗೆ ವಿವಿಧ ಹಿಂದೂಪರ ಸಂಘಟನೆಗಳು ಸೇರಿದಂತೆ ಹಲವರಿಂದ ಬೆಂಬಲ ವ್ಯಕ್ತವಾಗಿದೆ. ಪಟ್ಟಣದ ಕುವೆಂಪು ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ.
ಬಂದ್ ಹಿನ್ನೆಲೆ ಪಟ್ಟಣದಲ್ಲಿ ಪೊಲೀಸರಿಂದ ಬಿಗಿ ಭದ್ರತೆ ನಿಯೋಜಿಸಲಾಗಿದೆ. ಮೈಸೂರು-ಬೆಂಗಳೂರು ಹೆದ್ದಾರಿ ಸಂಚಾರ ಮಾರ್ಗ ಬದಲಾವಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…