Mysore
20
clear sky

Social Media

ಶನಿವಾರ, 24 ಜನವರಿ 2026
Light
Dark

ಶ್ರೀರಂಗಪಟ್ಟಣ ದಸರಾ | ಜಂಬೂಸವಾರಿ ಮೆರವಣಿಗೆಗೆ ಟಿ.ಎಸ್‌.ನಾಗಾಭರಣ ಚಾಲನೆ

shriranga pattana dasara

ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣ ದಸರಾ 2025 ಅಂಗವಾಗಿ ಗುರುವಾರ ಹಮ್ಮಿಕೊಂಡಿದ್ದ ಜಂಬೂಸವಾರಿ ಮೆರವಣಿಗೆಗೆ ಚಲನಚಿತ್ರ ನಿರ್ದೇಶಕ ಟಿ.ಎಸ್‌ ನಾಗಾಭರಣ ಚಾಲನೆ ನೀಡಿದರು.

415ನೇ ಶ್ರೀರಂಗಪಟ್ಟಣ ದಸರಾ ಮಹೋತ್ಸವ ಹಿನ್ನೆಲೆ ಮಂಗಳಾರತಿ ಬಳಿಕ ಅಂಬಾರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿಗೆ ವಿದ್ಯುಕ್ತ ಚಾಲನೆ ನೀಡಲಾಯಿತು. ಶ್ರೀರಂಗಪಟ್ಟಣದ ಕಿರಂಗೂರು ಬಳಿ ಬನ್ನಿಮಂಟಪದಲ್ಲಿ ಪೂಜಾ ಕೈಂಕರ್ಯ ಬಳಿಕ ನಟ, ನಿರ್ದೇಶಕ ಟಿ.ಎಸ್.ನಾಗಾಭರಣ ಚಾಲನೆ ಕೊಟ್ಟರು.

ಇದನ್ನು ಓದಿ : ಇಂದಿನಿಂದ ನಾಲ್ಕು ದಿನಗಳ ಕಾಲ ಶ್ರೀರಂಗಪಟ್ಟಣ ದಸರಾ ಮಹೋತ್ಸವ

ದಸರಾ ಆನೆ ಮಹೇಂದ್ರನ ಮೇಲೆ ಮರದ ಅಂಬಾರಿಯಲ್ಲಿ ವಿರಾಜಮಾನಳಾದ ನಾಡದೇವಿಗೆ ಪುಷ್ಪಾರ್ಚನೆ ಮಾಡಲಾಯಿತು. ಮರದ ಅಂಬಾರಿ ಹೊತ್ತ ಮಹೇಂದ್ರ ಆನೆ ಜೊತೆಗೆ ಕುಮ್ಕಿ ಆನೆಗಳಾದ ಕಾವೇರಿ, ಲಕ್ಷ್ಮೀ ಹೆಜ್ಜೆ ಹಾಕಿದವು.

ವಿವಿಧ ಕಲಾತಂಡಗಳಾದ ಬ್ಯಾಂಡ್, ಪೂಜಾ ಕುಣಿತ, ವೀರಗಾಸೆ, ನಗಾರಿ, ಜಡೆ ಕೋಲಾಟ, ಗಾರುಡಿ ಗೊಂಬೆ, ತಮಟೆ, ದೊಣ್ಣೆವರಸೆ, ಡೊಳ್ಳು ಕುಣಿತ, ಕಂಸಾಳೆ, ಕೊಂಬು-ಕಹಳೆ ಹಾಗೂ ಸ್ತಬ್ದ ಚಿತ್ರಗಳ ಮೆರವಣಿಗೆ ಗಮನ ಸೆಳೆಯಿತು.

ಸಚಿವ ಚಲುವರಾಯಸ್ವಾಮಿ, ಶಾಸಕ ರಮೇಶ್ ಬಂಡಿಸಿದ್ದೇಗೌಡ ಸೇರಿ ಹಲವರು ಭಾಗಿಯಾಗಿದ್ದರು. ಶ್ರೀರಂಗನಾಥಸ್ವಾಮಿ ದೇವಾಲಯ ಬಳಿಯ ವೇದಿಕೆಯಲ್ಲಿ ಸಂಜೆ 6 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮ ಚಾಲನೆ ಸಿಗಲಿದೆ.

Tags:
error: Content is protected !!