shriranga pattana dasara
ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣ ದಸರಾ 2025 ಅಂಗವಾಗಿ ಗುರುವಾರ ಹಮ್ಮಿಕೊಂಡಿದ್ದ ಜಂಬೂಸವಾರಿ ಮೆರವಣಿಗೆಗೆ ಚಲನಚಿತ್ರ ನಿರ್ದೇಶಕ ಟಿ.ಎಸ್ ನಾಗಾಭರಣ ಚಾಲನೆ ನೀಡಿದರು.
415ನೇ ಶ್ರೀರಂಗಪಟ್ಟಣ ದಸರಾ ಮಹೋತ್ಸವ ಹಿನ್ನೆಲೆ ಮಂಗಳಾರತಿ ಬಳಿಕ ಅಂಬಾರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿಗೆ ವಿದ್ಯುಕ್ತ ಚಾಲನೆ ನೀಡಲಾಯಿತು. ಶ್ರೀರಂಗಪಟ್ಟಣದ ಕಿರಂಗೂರು ಬಳಿ ಬನ್ನಿಮಂಟಪದಲ್ಲಿ ಪೂಜಾ ಕೈಂಕರ್ಯ ಬಳಿಕ ನಟ, ನಿರ್ದೇಶಕ ಟಿ.ಎಸ್.ನಾಗಾಭರಣ ಚಾಲನೆ ಕೊಟ್ಟರು.
ಇದನ್ನು ಓದಿ : ಇಂದಿನಿಂದ ನಾಲ್ಕು ದಿನಗಳ ಕಾಲ ಶ್ರೀರಂಗಪಟ್ಟಣ ದಸರಾ ಮಹೋತ್ಸವ
ದಸರಾ ಆನೆ ಮಹೇಂದ್ರನ ಮೇಲೆ ಮರದ ಅಂಬಾರಿಯಲ್ಲಿ ವಿರಾಜಮಾನಳಾದ ನಾಡದೇವಿಗೆ ಪುಷ್ಪಾರ್ಚನೆ ಮಾಡಲಾಯಿತು. ಮರದ ಅಂಬಾರಿ ಹೊತ್ತ ಮಹೇಂದ್ರ ಆನೆ ಜೊತೆಗೆ ಕುಮ್ಕಿ ಆನೆಗಳಾದ ಕಾವೇರಿ, ಲಕ್ಷ್ಮೀ ಹೆಜ್ಜೆ ಹಾಕಿದವು.
ವಿವಿಧ ಕಲಾತಂಡಗಳಾದ ಬ್ಯಾಂಡ್, ಪೂಜಾ ಕುಣಿತ, ವೀರಗಾಸೆ, ನಗಾರಿ, ಜಡೆ ಕೋಲಾಟ, ಗಾರುಡಿ ಗೊಂಬೆ, ತಮಟೆ, ದೊಣ್ಣೆವರಸೆ, ಡೊಳ್ಳು ಕುಣಿತ, ಕಂಸಾಳೆ, ಕೊಂಬು-ಕಹಳೆ ಹಾಗೂ ಸ್ತಬ್ದ ಚಿತ್ರಗಳ ಮೆರವಣಿಗೆ ಗಮನ ಸೆಳೆಯಿತು.
ಸಚಿವ ಚಲುವರಾಯಸ್ವಾಮಿ, ಶಾಸಕ ರಮೇಶ್ ಬಂಡಿಸಿದ್ದೇಗೌಡ ಸೇರಿ ಹಲವರು ಭಾಗಿಯಾಗಿದ್ದರು. ಶ್ರೀರಂಗನಾಥಸ್ವಾಮಿ ದೇವಾಲಯ ಬಳಿಯ ವೇದಿಕೆಯಲ್ಲಿ ಸಂಜೆ 6 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮ ಚಾಲನೆ ಸಿಗಲಿದೆ.
ಬೆಳಗಾವಿ : ಕರ್ನಾಟಕ-ಗೋವಾ-ಮಹಾರಾಷ್ಟ್ರ ಗಡಿ ಪ್ರದೇಶದಲ್ಲಿ ದೇಶದ ಇತಿಹಾಸದಲ್ಲೇ ಅತಿದೊಡ್ಡ ದರೋಡೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ…
ಹುಣಸೂರು : ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುವ ಉದ್ದೇಶದಿಂದ ಅಪಾಯಕಾರಿ ಬೈಕ್ ವೀಲಿಂಗ್ ಮಾಡಿದ 17 ವರ್ಷದ ಅಪ್ರಾಪ್ತ ಯುವಕನನ್ನು…
ಹೊಸದಿಲ್ಲಿ : ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ. ಈ ವ್ಯವಸ್ಥೆಯ ಜೀವಾಳವೇ ಮತದಾರ. ಪ್ರತಿ ವರ್ಷ ಜನವರಿ 25…
ಮೈಸೂರಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪೌರಕಾರ್ಮಿಕರು ಸಮವಸ್ತ್ರ, ಗುಣಮಟ್ಟದ ಬೆಳಗಿನ ಉಪಾಹಾರ ಮೊದಲಾದ ಸೌಲಭ್ಯಗಳಿಲ್ಲದೇ ಬವಣೆ ಪಡುತ್ತಿರುವುದು, ನಗರ ಪಾಲಿಕೆಯಲ್ಲಿ ೮೪…
ದೇಶದ ಪ್ರಗತಿಗೆ ಶಿಕ್ಷಣ ಪ್ರಮುಖವಾಗಿದೆ. ಶಾಲಾ, ಕಾಲೇಜು ಹಂತದ ಪರೀಕ್ಷೆಗಳು ಮತ್ತು ಸರ್ಕಾರಿ ಹುದ್ದೆಗಳ ನೇಮಕಾತಿಗೆ ನಡೆಯುವ ಪರೀಕ್ಷಾ ಕೊಠಡಿಯಲ್ಲಿ…
ಅಂಚೆ ಕಚೇರಿಗಳಲ್ಲಿ ಗ್ರಾಹಕರು ಹಣ ಕಟ್ಟುವ ಉಳಿತಾಯ ಖಾತೆ, ಆರ್‌ಡಿ , ಪಿಪಿಎಫ್, ಎಂಐಎಸ್ ಹಾಗೂ ಅಂಚೆ ಕಚೇರಿಯ ವಿವಿಧ…