ಶ್ರೀರಂಗಪಟ್ಟಣ : ಇಲ್ಲಿನ ತಾಲ್ಲೂಕು ತಹಶೀಲ್ದಾರ್ ಕಚೇರಿಗೆ ಶುಕ್ರವಾರ ಜಿಲ್ಲಾಧಿಕಾರಿ ಡಾ.ಕುಮಾರ ಅವರು ದಿಢೀರ್ ಭೇಟಿ ನೀಡಿದರು.
ತಾಲ್ಲೂಕು ಕಚೇರಿಯಲ್ಲಿ ಕಡತ ವಿಲೇವಾರಿ ಹಾಗೂ ಸಾರ್ವಜನಿಕರಿಂದ ಕುಂದು ಕೊರತೆ ಅರ್ಜಿ ಸ್ವೀಕಾರ ಕುರಿತಂತೆ ಸಿಬ್ಬಂದಿಗಳಿಂದ ಮಾಹಿತಿ ಪಡೆದರು. ಬಳಿಕ ಶೀಘ್ರ ಕಡತ ವಿಲೇವಾರಿಗೆ ನಿರ್ದೇಶನ ನೀಡಿದರು.
ಕಚೇರಿಗೆ ಬಂದಿದ್ದ ಸಾರ್ವಜನಿಕರ ಬಳಿ ಕುಂದು ಕೊರತೆ ಕೇಳಿದ ಅವರು, ಕೆಲವು ಸಲಹೆ ನೀಡಿದರು. ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಉಪಸ್ಥಿತರಿದ್ದರು.