ಮಂಡ್ಯ

ಅಕ್ಟೋಬರ್‌ 4 ರಿಂದ ವಿಜೃಂಭಣೆಯ ಶ್ರೀರಂಗಪಟ್ಟಣ ದಸರಾ

ಅಕ್ಟೋಬರ್ 4 ರಿಂದ 7 ವರೆಗೆ ಶ್ರೀರಂಗಪಟ್ಟಣ ದಸರ

ಮಂಡ್ಯ: ಶ್ರೀರಂಗಪಟ್ಟಣ ದಸರಾವನ್ನು ಈ ಬಾರಿ ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದರು.

ಅವರು ಇಂದು ಜಿಲ್ಲಾ ಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ನಡೆದ ಶ್ರೀರಂಗಪಟ್ಟಣ ದಸರಾ ಮಹೋತ್ಸವ-2024ರ ಲೋಗೋ ಬಿಡುಗಡೆ ಮಾಡಿ ಮಾತನಾಡಿದರು.

ನಾಡಿನ ದಸರಾ ಹಬ್ಬವು ಇಡೀ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ದಿ ಪಡೆದಿದ್ದು, ನಮ್ಮ ನಾಡಿನ ಕಲ್ಯಾಣಕ್ಕೋಸ್ಕರ ಶ್ರೀ ಚಾಮುಂಡೇಶ್ವರಿ ತಾಯಿಯನ್ನು ಪೂಜಿಸಲಾಗುವುದು. ಶ್ರೀರಂಗಪಟ್ಟಣ ದಸರಾ ಹಬ್ಬದಲ್ಲಿ ಅನೇಕ ರೀತಿಯ ವಿಭಿನ್ನ ಸಾಂಸ್ಕೃತಿಕ ಉತ್ಸವಗಳು ನಡೆಯಲಿದ್ದು, ಸಾರ್ವಜನಿಕರಿಗೆ ಹಬ್ಬದ ವಾತಾವರಣವು ಉಂಟಾಗಲಿದೆ ಎಂದು ಹೇಳಿದರು.

ಶ್ರೀರಂಗಪಟ್ಟಣ ದಸರಾ ಹಬ್ಬದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಮಂಡ್ಯ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಬೇಕು. ಜೊತೆಗೆ ನಮ್ಮ ನಾಡಿನ ಪರಂಪರೆಯನ್ನು ಉಳಿಸುವ ಕೆಲಸವಾಗಬೇಕು ಎಂದು ತಿಳಿಸಿದರು.

ಕಾವೇರಿ ಆರತಿಗೆ ದಸರಾ ಸಂದರ್ಭದಲ್ಲಿ ಚಾಲನೆ ನೀಡಲು ಚಿಂತನೆ

ಹರಿದ್ವಾರ ಮತ್ತು ವಾರಣಾಸಿಯಲ್ಲಿ ನಡೆಯವ ಗಂಗಾರತಿಯು ಹಲವಾರು ವರ್ಷಗಳ ಇತಿಹಾಸವನ್ನು ಹೊಂದಿದೆ. ಗಂಗಾರತಿಯ ಶೈಲಿಯಲ್ಲಿಯೇ ಕಾವೇರಿ ಆರತಿಯನ್ನು ಕೆ.ಆರ್‌.ಎಸ್ ನಲ್ಲಿ ಪ್ರಾರಂಭಿಸಲಾಗುವುದು. ಈ ಬಾರಿಯ ಶ್ರೀರಂಗಪಟ್ಟಣ ದಸರಾ ಕಾರ್ಯಕ್ರಮದಲ್ಲೇ ಪ್ರಾರಂಭಿಸಲು ಚಿಂತಿಸಲಾಗುತ್ತಿದೆ.  ಇದರ ಸಂಬಂಧವಾಗಿ ನಾಳೆ ಹರಿದ್ವಾರ ಮತ್ತು ವಾರಣಾಸಿಗೆ 28 ಜನರ ನಿಯೋಗ ತೆರಳಲಿದೆ. ಅಲ್ಲಿಂದ ಬಂದ ನಂತರ ಕಾವೇರಿ ಮಾತೆಗೆ ಗಂಗಾರತಿ ಸಲ್ಲಿಸುವ ಸಂಬಂಧ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಜಿಲ್ಲಾಧಿಕಾರಿ ಡಾ ಕುಮಾರ ಅವರು ವೇದಿಕೆಯ ಮೇಲಿರುವ ಎಲ್ಲರನ್ನು ಸ್ವಾಗತಿಸಿ, ಪ್ರತಿ ವರ್ಷದಂತೆ ಈ ವರ್ಷವು ಶ್ರೀರಂಗಪಟ್ಟಣ ದಸರಾವನ್ನು ಆಚರಿಸಲಾಗುತಿದ್ದು, ಇಂದು ಲೋಗೋ ಬಿಡುಗಡೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಶ್ರೀರಂಗಪಟ್ಟಣ ದಸರಾಗೆ ಸಂಬಂಧಿಸಿದಂತೆ ಈಗಾಗಲೇ ಹಲವಾರು ಸಮಿತಿಗಳನ್ನು ರಚನೆ ಮಾಡಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಅಧ್ಯಕ್ಷರು ಹಾಗೂ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರ ಶಾಸಕ ಎ.ಬಿ. ರಮೇಶ್ ಬಂಡಿಸಿದ್ದೇಗೌಡ, ಮಂಡ್ಯ ಶಾಸಕ ಪಿ ರವಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶೇಕ್ ತನ್ವಿರ್ ಆಸೀಫ್, ಅಪರ ಜಿಲ್ಲಾಧಿಕಾರಿ ಡಾ ಹೆಚ್ ಎಲ್ ನಾಗರಾಜು, ಮೈಸೂರು ಸಕ್ಕರೆ ಕಂಪನಿಯ ನಿಯಮಿತದ ಅಧ್ಯಕ್ಷ ಸಿ ಡಿ ಗಂಗಾಧರ್, ಉಪ ವಿಭಾಗಾಧಿಕಾರಿ ಶಿವಮೂರ್ತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

3 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

3 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

3 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

3 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

3 hours ago

ತನ್ನನ್ನು ತಾನೇ ಚಿವುಟಿ ಎಚ್ಚರಿಸಿದ್ದ ನೆಹರೂ

ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…

3 hours ago