ಮಂಡ್ಯ(ಶ್ರೀರಂಗಪಟ್ಟಣ): ಪುರಾಣ ಪ್ರಸಿದ್ಧ, ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಮಹೋತ್ಸವವು ಅ.4ರಿಂದ ಅಂದರೆ ನಾಳೆಯಿದ ಪ್ರಾರಂಭವಾಗಲಿದೆ. ಈ ಹಿನ್ನೆಲೆ, ಶ್ರೀರಂಗಪಟ್ಟಣ ದಸರಾದಲ್ಲಿ ಪಾಲ್ಗೋಳಲು ಆಗಮಿಸಿರುವ ಆನೆಗಳಿಗೆ ಜಿಲ್ಲಾಧಿಕಾರಿ ಡಾ.ಕುಮಾರ ಇಂದು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ ಸ್ವಾಗತಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು.
ಅಕ್ಟೋಬರ್ 04 ರಿಂದ 07 ರವರೆಗೆ ಶ್ರೀರಂಗಪಟ್ಟಣ ದಸರಾ
ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಅಕ್ಟೋಬರ್ 04 ರಿಂದ 7 ರವರೆಗೆ ನಾಡಹಬ್ಬ ಶ್ರೀರಂಗಪಟ್ಟಣ ದಸರಾವನ್ನು ಆಯೋಜಿಸಲಾಗಿದೆ.
ಅಕ್ಟೋಬರ್ 04(ನಾಳೆ) ರಂದು ಮಧ್ಯಾಹ್ನ 12:30 ಗಂಟೆಗೆ ನಂದಿ ಧ್ವಜ ಪೂಜೆ ನೆರವೇರಿಸಲಾಗುವುದು. ಮಧ್ಯಾಹ್ನ 2:30 ರಿಂದ 3:00 ಗಂಟೆಯವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ಅಗ್ರಪೂಜೆ ಹಾಗೂ ಜಂಬೂಸವಾರಿ ಮೆರವಣಿಗೆಗೆ ಖ್ಯಾತ ಚಲನಚಿತ್ರ ನಟ ಡಾ ಶಿವರಾಜ್ ಕುಮಾರ್ ಅವರು ಚಾಲನೆ ನೀಡಲಿದ್ದಾರೆ.
ಅಕ್ಟೋಬರ್ 4ರಂದು ಸಂಜೆ 6:00 ಗಂಟೆಗೆ ಶ್ರೀರಂಗನಾಥಸ್ವಾಮಿ ದೇವಾಲಯದ ಆವರಣದ ಶ್ರೀರಂಗ ವೇದಿಕೆಯಲ್ಲಿ ಶ್ರೀರಂಗಪಟ್ಟಣ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭ ಜರುಗಲಿದೆ.
ಮೈಸೂರು : ಹುಣಸೂರು ವಿಭಾಗದ ಪಿರಿಯಾಪಟ್ಟಣ ವ್ಯಾಪ್ತಿಯ ಗುಳ್ಳೆದಹಳ್ಳ ರಾಜ್ಯ ಅರಣ್ಯದಿಂದ 2 ಕಿ.ಮೀ ದೂರದಲ್ಲಿರುವ ಕೊಪ್ಪ ವಿಭಾಗದಲ್ಲಿ ಗುಂಡೇಟಿನಿಂದ…
ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2025-2026ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ…
ಬೆಂಗಳೂರು : ಕರ್ನಾಟಕದಲ್ಲಿ ಪೂರ್ವ ಮುಂಗಾರು ಏಪ್ರಿಲ್ 2 ನೇ ವಾರದಿಂದ ಚುರುಕಾಗುತ್ತಿದ್ದು, ಏಪ್ರಿಲ್ 7ರಿಂದ ಮೂರು ದಿನಗಳು ರಾಜ್ಯದಲ್ಲಿ…
ವಾಷಿಂಗ್ಟನ್ : ಒಪ್ಪಂದಕ್ಕೆ ಬನ್ನಿ, ಇಲ್ಲವೇ ಶರಣಾಗಿ, ಇಲ್ಲದಿದ್ದರೆ ಮಂಗಳವಾರ ರಾತ್ರಿ 8 ಗಂಟೆಯ ನಂತರ ಮತ್ತಷ್ಟು ಮಾರಕ ದಾಳಿ…
ಮದುರೈ : ತಮಿಳುನಾಡಿನ ತೂತುಕುಡಿ ಜಿಲ್ಲೆಯ ಶಾಂತನ್‌ಕುಲಂ ಪೊಲೀಸ್ ಠಾಣೆ ಕಸ್ಟಡಿಯಿಂದಲೇ ತಂದೆ,ಮಗ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಸೋಮವಾರ…
ಬೆಂಗಳೂರು : ಕೌಶಲ್ಯ ಕ್ಷೇತ್ರದಲ್ಲಿ ಕರ್ನಾಟಕ ಈಗ ಇಡೀ ದೇಶದಲ್ಲಿ ಮುಂಚೂಣಿಯತ್ತ ಸಾಗುತ್ತಿದೆ. ಇತ್ತೀಚೆಗೆ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್‌ಪೋ…